ಓಂ ಪ್ರಕಾಶ್ ಇ ಹಲೋಕ, ಓಡೋಡಿ ಬಂದ ಕುಟುಂಬಸ್ಥರು
Apr 21, 2025, 15:01 IST
|

68 ವರ್ಷದ ಓಂ ಪ್ರಕಾಶ್ ಅವರು ನಿವೃತ್ತಿಯ ಬಳಿಕ ಬೆಂಗಳೂರಿನ ಎಚ್ಎಸ್ಆರ್ ಲೇಔಟ್ ಮನೆಯಲ್ಲಿ ವಾಸವಾಗಿದ್ದರು. ಪತ್ನಿಯ ಜತೆ ನೆಲೆಸಿದ್ದರು. ಮಾನಸಿಕ ಸ್ಥಿಮಿತತೆ ಕಳೆದುಕೊಂಡ ಪತ್ನಿ ಭಾನುವಾರ ಸಂಜೆ ಓಂ ಪ್ರಕಾಶ್ ಅವರನ್ನು ಕೊಲೆ ಮಾಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಈ ಘಟನೆಯ ಕುರಿತು ಎಚ್‌ಎಸ್‌ಆರ್ ಲೇಔಟ್‌ನಲ್ಲಿ ಪ್ರಕರಣ ದಾಖಲಾಗಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸೆಂಟ್‌ಜಾನ್ಸ್ ಆಸ್ಪತ್ರೆಗೆ ಸಾಗಿಸಲಾಗಿದೆ. ಕೊಲೆ ವಿಚಾರ ತಿಳಿದು ಸ್ಥಳಕ್ಕೆ ಬಂದ ಪೊಲೀಸರು ರಕ್ತದ ಮಡುವಿನಲ್ಲಿ ಬಿದ್ದಿದ್ದ ನಿವೃತ್ತ ಅಧಿಕಾರಿಯನ್ನು ಕಂಡು ಶಾಕ್ ಆಗಿದ್ದಾರೆ. ಇನ್ನು ಮನೆಯಲ್ಲೇ ಇದ್ದ ಅವರ ಪತ್ನಿ ಹಾಗೂ ಮಗಳನ್ನು ವಿಚಾರಣೆಗೆ ಕರೆದೊಯ್ಯಿದಿದ್ದಾರೆ.
ಪ್ರಾಥಮಿಕ ತನಿಖೆಯಲ್ಲಿ ಕೊಲೆಗೆ ಕೌಟುಂಬಿಕ ಕಲಹವೇ ಕಾರಣವಿರಬಹುದು ಎಂದುತಿಳಿದುಬಂದಿದೆ. ಓಂ ಪ್ರಕಾಶ್ ಹಾಗೂ ಅವರ ಪತ್ನಿ ಜಗಳ ನೆರೆ ಹೊರೆ, ಸಂಬಂಧಿಕರು ಹಾಗೂ ಹಲವು ನಿವೃತ್ತ ಪೊಲೀಸ್ ಅಧಿಕಾರಿಗಳಿಗೆ ತಿಳಿದಿತ್ತು. ಕೆಲ ದಿನಗಳಿಂದ ಜಗಳ ತಾರಕಕ್ಕೇರಿ ಪತ್ನಿ ಮನೆಯಲ್ಲಿ ದೊಡ್ಡ ರಾದ್ಧಾಂತವನ್ನೇ ಮಾಡಿದ್ದರು ಎನ್ನಲಾಗಿದೆ. ಇನ್ನು ಓಂ ಪ್ರಕಾಶ್ ಅವರು ತಮ್ಮ ಸಹೋದರಿ ಹೆಸರಲ್ಲಿ ಜಮೀನು ಮಾಡಿದ್ದು ಅದನ್ನು ಹಿಂಪಡೆಯುವಂತೆ ಗಂಡನ ಮೇಲೆ ಜಗಳ ಮಾಡುತ್ತಿದ್ದರು ಎನ್ನಲಾಗಿದೆ.
ಇನ್ನು, ಪತಿ ಓಂ ಪ್ರಕಾಶ್ಮೃತಪಟ್ಟ ಬಳಿಕ, ಪತ್ನಿ ಪಲ್ಲವಿಯವರು ಮತ್ತೋರ್ವ ನಿವೃತ್ತ ಡಿಜಿ ಮತ್ತು ಐಜಿಪಿಯ ಪತ್ನಿಗೆ ವಿಡಿಯೋ ಕರೆ ಮಾಡಿ, I have Finished monster ಅಂತ ಎಂದಿದ್ದರಂತೆ. ಅಲ್ಲದೆ ಕೊಲೆ ಬಳಿಕ ಓಂ ಪ್ರಕಾಶ್ ಅವರ ಮುಖವನ್ನು ಬಟ್ಟೆಯಿಂದ ಮುಚ್ಚಲಾಗಿತ್ತು ಎನ್ನಲಾಗಿದೆ. ಕೊಲೆ ಬಳಿಕ ಓಂ ಪ್ರಕಾಶ್ ಅವರ ಪತ್ನಿ ಪಲ್ಲವಿ ಮತ್ತು ಪುತ್ರಿ ರೋಮಿಗೆ ಹೋಗಿ ಬಾಗಿಲು ಹಾಕಿಕೊಂಡಿದ್ದರು. ಪೊಲೀಸರು ಹೋಗಿ ಹರಸಾಹಸಪಟ್ಟು ಬಾಗಿಲು ತೆಗೆಸಿದ್ದಾರೆ ಎಂದು ತಿಳಿದುಬಂದಿದೆ. ಪ್ರಸ್ತುತ ಪ್ರಕರಣ ಸಂಬಂಧ ಪೊಲೀಸರು ಪತ್ನಿ ಪಲ್ಲವಿ ಮತ್ತು ಪುತ್ರಿ ಕೃತಿ ಅವರನ್ನು ವಶಕ್ಕೆ ಪಡೆದಿದ್ದಾರೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.
Mon,10 Jul 2023
ಭಾರತೀಯ ಆಟಗಾರ ಕೆ ಎಲ್ ರಾಹುಲ್ ಅವರ ಸಂಭಾವನೆ ಎಷ್ಟು ಕೋಟಿ ಇರಬಹುದು
Sat,8 Jul 2023
ದಕ್ಷಿಣ ಕನ್ನಡದ ಕಂಬಳ ಕ್ರೀಡೆ ನೋಡುವುದೇ ಎಷ್ಟು ಚೆಂದ ಗೊತ್ತಾ
Tue,6 May 2025