ಕನಾ೯ಟಕ ಜನತೆಗೆ ಮಹಾತೀಪು೯, ರಾಜ್ಯದ ಮುಖ್ಯಮಂತ್ರಿ ಯಾರು ಗೊತ್ತಾ

 | 
ುಪಪ

 ಕರ್ನಾಟಕ ವಿಧಾನಸಭಾ ಚುನಾವಣೆ ಮುಗಿದು ಕಾಂಗ್ರೆಸ್ ಬಹುಮತದಿಂದ ಗೆದ್ದಿದೆ. ಸದ್ಯ ಕರ್ನಾಟಕ ಸಿಎಂ ಗಾದಿಗೇರಲು ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ. CLP ಸಭೆ ನಡೆಸಿ ಶಾಂಗ್ರಿಲಾ ಹೋಟೆಲ್​ನಲ್ಲಿ ಶಾಸಕರ ಬೆಂಬಲದ ಬಳಿಕ ಈಗ ಹೈಕಮಾಂಡ್ ಮೊರೆ ಹೋಗಲಾಗಿದೆ. ಸಿದ್ದರಾಮಯ್ಯ ನಿನ್ನೆ ದೆಹಲಿಗೆ ತೆರಳಿ ಒಂದು ಸುತ್ತಿನ ಮಾತುಕಥೆ ನಡೆಸಿದ್ದು ಇಂದು ಡಿಕೆ ಶಿವಕುಮಾರ್ ಹೆದಲಿಗೆ ಹಾರಲಿದ್ದಾರೆ. 

ಇಂದು ರಾಜ್ಯ ಕಾಂಗ್ರೆಸ್‌ ನಾಯಕರ ಜೊತೆ ಹೈಕಮಾಂಡ್​​​ ಸಭೆ ನಡೆಸಿ ಸಿಎಂ ಆಯ್ಕೆ ಬಗ್ಗೆ​​​​ ಅಂತಿಮ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಸಿಎಂ ಪಟ್ಟಕ್ಕಾಗಿ ತಮ್ಮದೇ ರೀತಿಯಲ್ಲಿ ಕಸರತ್ತು ನಡೆಸುತ್ತಿದ್ದಾರೆ. ಹಾಗಾದ್ರೆ ಮುಂದಿನ ಸಿಎಂ ಯಾರಾಗ್ತಾರೆ? ಸಿದ್ದು-ಡಿಕೆಶಿಯಲ್ಲಿ ಹೈಕಮಾಂಡ್​ಗೆ ಸಿದ್ದು ಮೇಲೆ ಒಲವಿದೆ.ಹಾಗಾಗಿ ನೆಕ್ಸ್ಟ್ ಸಿಎಂ ಸಿದ್ದರಾಮಯ್ಯ ಆಗುವ ಎಲ್ಲ ಲಕ್ಷಣಗಳೂ ಕಾಣುತ್ತಿವೆ.ಕಾಂಗ್ರೆಸ್ ಹೈಕಮಾಂಡ್ ಸೋಮವಾರವೇ ಅಂತಿಮ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದ್ದು, ಮೊದಲ ಅವಧಿಗೆ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗುವ ಸಾಧ್ಯತೆ ದಟ್ಟವಾಗಿದೆ ಎನ್ನಲಾಗಿದೆ.ಶಿವಕುಮಾರ್ ಕೂಡ ಇದಕ್ಕೆ ಒಪ್ಪುತ್ತಾರೆ. ಆದರೆ, ಗೃಹ ಖಾತೆ ಹೊಂದಿರುವ ಏಕೈಕ ಉಪಮುಖ್ಯಮಂತ್ರಿಯಾಗಬೇಕು ಎಂದು ಪಕ್ಷದ ಹೈಕಮಾಂಡ್‌ಗೆ ಸ್ಪಷ್ಟವಾಗಿ ತಿಳಿಸಿದ್ದಾರೆ ಎಂದು ಪಕ್ಷದ ಮೂಲಗಳು ಐಎಎನ್‌ಎಸ್‌ಗೆ ತಿಳಿಸಿವೆ.

ಕರ್ನಾಟಕ ಕಾಂಗ್ರೆಸ್‌ನ ಹಿರಿಯ ನಾಯಕರ ಪ್ರಕಾರ, ಚುನಾಯಿತ ಶಾಸಕರಲ್ಲಿ ಸುಮಾರು 70 ಪ್ರತಿಶತದಷ್ಟು ಜನರು ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿಯಾಗಿ ಬೆಂಬಲಿಸಿದ್ದಾರೆ.ಎಐಸಿಸಿ ವೀಕ್ಷಕರಾದ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಸುಶೀಲ್ ಕುಮಾರ್ ಶಿಂಧೆ, ಜಿತೇಂದ್ರ ಸಿಂಗ್ ಮತ್ತು ದೀಪಕ್ ಬಬಾರಿಯಾ ಅವರೊಂದಿಗೆ ಸಮಾಲೋಚಿಸಿದ ನಂತರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಅಂತಿಮ ನಿರ್ಧಾರವನ್ನು ಪ್ರಕಟಿಸಲಿದ್ದಾರೆ.


ಎಐಸಿಸಿ ಅಧ್ಯಕ್ಷರು ಸೋನಿಯಾ, ರಾಹುಲ್ ಮತ್ತು ಪ್ರಿಯಾಂಕಾ ಗಾಂಧಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಸಂಘಟನೆ ಕೆ.ಸಿ. ವೇಣುಗೋಪಾಲ್ ಮತ್ತು ಕರ್ನಾಟಕ ಉಸ್ತುವಾರಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲಾ ಅವರೊಂದಿಗೂ ಚರ್ಚೆ ನಡೆಸಲಿದ್ದಾರೆ. ಇನ್ನು ಡಿಕೆಶಿ ಅವರು ಸಿದ್ದುಗೆ ಸಿಎಂ ಪಟ್ಟ ನೀಡಿದಲ್ಲಿ ನನಗೇನು ಬೆಲೆಯಿದೆ ಎಂದು ಡಿಕೆಶಿ ಕಣ್ಣೀರಿಟ್ಟಿದ್ದಾರೆ.


(ಪ್ರೀಯ ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ.)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.