ದಯವಿಟ್ಟು ಹುಡುಗುರು ವೋಟ್ ಹಾಕೋಕೆ ಬನ್ನಿ; ಮಾಧ್ಯಮ ಮುಂದೆ ಬೇಡಿಕೊಂಡ ರಚಿತ ರಾಮ್

 | 
Je

ಕನ್ನಡದ ಹೆಸರಾಂತ ನಟಿ ರಚಿತಾ ರಾಮ್ ಕತ್ರಿಗುಪ್ಪೆಯಲ್ಲಿ ಮತದಾನ ಮಾಡಿದರು. ಸಾಮಾನ್ಯರಂತೆ ಅರ್ಧ ಗಂಟೆಗೂ ಹೆಚ್ಚು ಕಾಲ ಸರದಿ ಸಾಲಿನಲ್ಲಿ ನಿಂತು ತಮ್ಮ ಹಕ್ಕನ್ನು ಚಲಾಯಿಸಿದರು. ಅಭಿಮಾನಿಗಳು ರಚಿತಾ ಅವರ ಜೊತೆ ಸೆಲ್ಫಿ ತೆಗೆಸಿಕೊಂಡು ಸಂಭ್ರಮಿಸಿದರು.

ಮತದಾನದ ನಂತರ ಮಾಧ್ಯಮಗಳ ಜೊತೆ ಮಾತನಾಡಿದ ರಚಿತಾ,ಮನೆಯಲ್ಲಿ ಕೂತು ಕಾಮೆಂಟ್ ಮಾಡೋದಕ್ಕೆ ಬಂದು ವೋಟ್ ಮಾಡಿ. ವೋಟ್ ಮಾಡದೇ ಬ್ಲೇಮ್ ಮಾಡಬೇಡಿ, ನಮ್ಮ ನಾಯಕರ ಆಯ್ಕೆ ಮಾಡಲೇಬೇಕು. ಬಿಸಿಲು ಅಂತ ಮನೆಯಲ್ಲಿ ಕೂರಬೇಡಿ, ಸಂಜೆಯವರೆಗೂ ಟೈಂ ಇದೆ ಬಂದು ವೋಟ್ ಮಾಡಿ. 

ಹಿರಿಯನಾಗರೀಕರೆ ಉತ್ಸಾಹದಿಂದ ವೋಟ್ ಮಾಡುವಾಗ ಯುವಕರು ಯಾಕೆ ಮನೆಯಲ್ಲಿ ಕೂರಬೇಕು ಎಂದು ಅವರು ಪ್ರಶ್ನೆ ಮಾಡಿದರು. ಅಷ್ಟೇ ಅಲ್ಲದೇ ನಾಳೆ ಆ ಪಕ್ಷ ಆಡಳಿತ ನಡೆಸಬೇಕು. ನಮಗೆ ಈ ಪಕ್ಷ ಏನೂ ಮಾಡಿಲ್ಲ ಎನ್ನುವ ಮುನ್ನ ಯೋಚಿಸಿ ಹೆಜ್ಜೆ ಹಾಕಿ . ಮತದಾನದ ಹಕ್ಕು ನಿಮ್ಮದು. ಅದನ್ನು ಉಪಯೋಗಿಸಿಕೊಳ್ಳಿ ಎಂದಿದ್ದಾರೆ.

ಐದು ವರ್ಷದಿಂದ ಏನು ಅಭಿವೃದ್ಧಿಯಾಗಿದೆ ಎಂದು ನೋಡಿ ವೋಟ್ ಹಾಕುತ್ತೇನೆ. ಮುಂದಿನ ಐದು ವರ್ಷ ಯಾವ ನಾಯಕ ಅಧಿಕಾರಕ್ಕೆ ಬರಬೇಕು ಎಂದು ವೋಟ್ ಮಾಡ್ತೇನೆ. ಯೋಚನೆ ಮಾಡಿ ರಾಜಕೀಯ ತಿಳಿದವರ ಜೊತೆ ತರ್ಕ ಮಾಡಿ ಮತ ಹಾಕುತ್ತೇನೆ. 

ನಾನು ಯಾವಾಗಲೂ ಒಂದು ನಿರ್ಧಾರಕ್ಕೆ ಬಂದು ಮತ ಹಾಕುತ್ತೇನೆ. ದೇಶವನ್ನು ಚೆನ್ನಾಗಿ ಹೋಗುವ ನಾಯಕ ಅಧಿಕಾರಕ್ಕೆ ಬರಬೇಕು ಎಂದು  ನಟ ರಕ್ಷಿತ್ ಹೇಳಿದ್ದಾರೆ.
(ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.