ದಯವಿಟ್ಟು ನನ್ನ ವಿಡಿಯೋ ಮಾಡಬೇಡಿ, ನಿರ್ದೋಷಿ ಸಂತೋಷ್ ರಾವ್ ಈ ರೀತಿ ಹೇಳಿದ್ದು ಯಾಕೆ ಗೊತ್ತಾ
ದೇಶದಲ್ಲಿ ಅತಿ ಹೆಚ್ಚು ಸದ್ದು ಮಾಡಿದ ಪ್ರಕರಣಗಳಲ್ಲಿ ಒಂದು ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ.
ಹೌದು ಅದರಲ್ಲಿ ಆರೋಪಿಯಾಗಿದ್ದ ಸಂತೋಷ್ ರಾವ್‌ನನ್ನು ಕೋರ್ಟ್ ದೋಷಮುಕ್ತಗೊಳಿಸಿದೆ.
ಆತ್ಯಾಚಾರ ಹಾಗೂ ಕೊಲೆಯಾದ ವೇಳೆ ಆರೋಪಿ ಸ್ಥಳದಲ್ಲಿ ಇರಲಿಲ್ಲ. ರೇಪ್ ಮಾಡಿರುವ ಬಗ್ಗೆ ವೈದ್ಯಕೀಯ ವರದಿ ಇರಲಿಲ್ಲ.
ಎರಡು ದಿನ ಬಳಿಕ ಆರೋಪಿಯನ್ನು ಬಂಧಿಸಲಾಗಿತ್ತು. ಸೌಜನ್ಯ ಮೃತಪಟ್ಟ ದಿನ ಭಾರೀ ಮಳೆ ಇತ್ತು. ಅಂದು 500 ಜನ ಹುಡುಕಾಟ ನಡೆಸಿದ್ದರು. ಆದರೆ ಅಂದು ಶವ ಪತ್ತೆಯಾಗಿರಲಿಲ್ಲ. ನದಿ ದಾಟಿ ಹೋಗಿದ್ದಾನೆ ಎಂದು ಅನುಮಾನ ವ್ಯಕ್ತಪಡಿಸಿದ ಪೊಲೀಸರು ಎರಡು ದಿನದ ಬಳಿಕ ಸಂತೋಷ್ ರಾವ್‌ನನ್ನು ಬಂಧಿಸಿದ್ದರು. ಅಲ್ಲಿದ್ದ ಪ್ರಕೃತಿ ಚಿಕಿತ್ಸಾಲಯದ ಸಿಸಿಟಿವಿ ಸಂಗ್ರಹಿಸಿಲ್ಲ.
ಮರಣೋತ್ತರ ಪರೀಕ್ಷೆಯಲ್ಲಿ ರಾತ್ರೋರಾತ್ರಿ ಕೆಟ್ಟ ಬೆಳಕಿನಲ್ಲಿ ಮಾಡಲಾಗಿದೆ. ಸಂತೋಷ್ ರಾವ್ ಕೊಲೆ ಮಾಡಿದ್ದಾನೆ ಎಂಬುದಕ್ಕೆ ಯಾವುದೇ ಸಾಕ್ಷ್ಯಗಳು ಇಲ್ಲ ಎಂದು ಹೇಮಂತ್ ವಾದಿಸಿದ್ದರು. ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಸೌಜನ್ಯ 2012ರ ಅಕ್ಟೋಬರ್ 9ರಂದು ಕಾಣೆಯಾಗಿದ್ದಳು ಎಂದು ತಂದೆ ಚಂದ್ರಪ್ಪ ಅವರು ಬೆಳ್ತಂಗಡಿ ಪೊಲೀಸರಿಗೆ ದೂರು ನೀಡಿದ್ದರು.
ಅಕ್ಟೋಬರ್ 10ರಂದು ಅರೆನಗ್ನ ಸ್ಥಿತಿಯಲ್ಲಿ ಸೌಜನ್ಯ ಶವ ಪತ್ತೆಯಾಗಿತ್ತು. ಬಳಿಕ ಆಕೆ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಲಾಗಿದೆ ಎಂದು ಆರೋಪಿಸಿ ದೂರು ನೀಡಿದ್ದರು. ಈ ಪ್ರಕರಣ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಪ್ರತಿಭಟನೆ, ಆಕ್ರೋಶಕ್ಕೆ ಕಾರಣವಾಗಿತ್ತು.
ಮೊದಲು ಬೆಳ್ತಂಗಡಿ ಪೊಲೀಸರು ತನಿಖೆ ನಡೆಸಿದ್ದರು. ನಂತರ ತನಿಖೆಯನ್ನು ಸಿಐಡಿಗೆ ವರ್ಗಾಯಿಸಲಾಗಿತ್ತು.
ಆ ಬಳಿಕ ಸರ್ಕಾರ ತನಿಖೆಯನ್ನು ಸಿಬಿಐಗೆ ಹಸ್ತಾಂತರಿಸಿತ್ತು. 2016ರಲ್ಲಿ ತನಿಖೆ ಪೂರ್ಣಗೊಳಿಸಿದ ಸಿಬಿಐ ಆರೋಪ ಪಟ್ಟಿ ಸಲ್ಲಿಸಿತ್ತು. ಇದೀಗ ಜೈಲಿನಿಂದ ಬಿಡುಗಡೆ ಆಗಿರುವ ನಿರಪರಾಧಿ ಸಂತೋಷ್ಅಮ್ಮ ಇಲ್ಲದ ಮನೆಗೆ ಬರುವುದಕ್ಕೆ ಮನಸ್ಸಾಗುತ್ತಿಲ್ಲ ಎಂದು ಸಂತೋಷ ಮನೆಗೆ ಹೋಗುವುದನ್ನೇ ನಿಲ್ಲಿಸಿದ. ಅವನಿಗೆ ಜಾಮೀನು ಸಿಕ್ಕ ನಂತರ ಒಮ್ಮೆಯಷ್ಟೇ ಮನೆಗೆ ಬಂದು ಹೋಗಿದ್ದ. ಈಗ ಸಿಬಿಐ ಕೋರ್ಟ್ ನಿರ್ದೋಷಿ ಎಂದು ಖುಲಾಸೆ ಮಾಡಿದ ಮೇಲೂ ಆತ ಮನೆಗೆ ಬಂದಿಲ್ಲ.
ಗುಡಿಯೊಂದರಲ್ಲಿ ಸಣ್ಣಪುಟ್ಟ ಕೆಲಸ ಮಾಡುತ್ತ, ಭಜನೆ ಮಾಡುತ್ತಾ ದಿನ ಕಳೆಯುತ್ತಿದ್ದಾನೆ. ಆತನಿಗೆ ಪೊಲೀಸರು ಗಂಭೀರವಾಗಿ ಹಲ್ಲೆ ಮಾಡಿದ ಪರಿಣಾಮ ಮೂಳೆ ನೋವು, ಹೊಟ್ಟೆ, ಕತ್ತು ನೋವಿದೆ. ಹಾಗಾಗಿ ಈಗ ದುಡಿಯುವುದಕ್ಕೂ ಆಗುತ್ತಿಲ್ಲ. ಸೌಜನ್ಯಾ ಕೇಸ್ ಕುರಿತಾಗಿ ತನ್ನನ್ನು ಕೇಳಿಕೊಂಡು ಬರ್ಬೇಡಿ ನನ್ನ ವಿಡಿಯೋ ಮಾಡಬೇಡಿ ಎಂದು ಬೇಡಿಕೊಂಡಿದ್ದಾನೆ ಎಂದು ಅವರ ಕಡೆಯ ವಕೀಲರು ನುಡಿದಿದ್ದಾರೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.