ಚಂದ್ರಯಾನದ ಬಗ್ಗೆ ಬಹಳ ಕೀಳು ಮಟ್ಟದಲ್ಲಿ ವ್ಯಂಗ್ಯ ಮಾಡಿದ ಪ್ರಕಾಶ್ ರಾಜ್, ನೆಟ್ಟಿಗರು ಹೇಳಿದ್ದೇನು ಗೊತ್ತಾ

 | 
Bd

ನಟನೆಗಿಂತ ಇತ್ತೀಚೆಗೆ ವಿವಾದಗಳಿಂದಲೇ ಜಾಸ್ತಿ ಸುದ್ದಿಯಲ್ಲಿರುವ ಬಹುಭಾಷಾ ನಟ ಪ್ರಕಾಶ್‌ ರಾಜ್‌ ಅವರೀಗ ಮತ್ತೆ ವಿವಾದಕ್ಕೆ ಸಿಲುಕಿದ್ದಾರೆ. ಚಂದ್ರಯಾನ 3 ಮಿಷನ್‌ ಕಳುಹಿಸಿದ ಫೋಟೊ ಎಂದು ಇಸ್ರೋ ಮಾಜಿ ಅಧ್ಯಕ್ಷ ಕೆ.ಶಿವನ್‌ ಅವರನ್ನು ಅಣಕ ಮಾಡಲು ಸಾಮಾಜಿಕ ಜಾಲತಾಣವಾದ ಎಕ್ಸ್‌ನಲ್ಲಿ ಫೋಟೊ ಹಂಚಿಕೊಂಡ ಕಾರಣ ಜನ ಅವರಿಗೆ ಟೀಕೆಗಳ ಮೂಲಕ ಚಳಿ ಬಿಡಿಸಿದ್ದಾರೆ.

ಇಸ್ರೋ ಮಾಜಿ ಅಧ್ಯಕ್ಷ ಕೆ. ಶಿವನ್‌ ಅವರ ಕುರಿತ ವ್ಯಂಗ್ಯಚಿತ್ರವನ್ನು ಪ್ರಕಾಶ್‌ ರಾಜ್‌ ಹಂಚಿಕೊಂಡಿದ್ದು, ಇದರಲ್ಲಿ ಚಾಯ್‌ವಾಲಾ ಎಂಬುದಾಗಿ ಪರೋಕ್ಷವಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಗೂ ವ್ಯಂಗ್ಯ ಮಾಡಿದಂತಿದೆ. ತಾಜಾ ಸುದ್ದಿ; ಚಂದ್ರಯಾನದಿಂದ ಈಗಷ್ಟೇ ಬಂದ ಮೊದಲ ದೃಶ್ಯ ಎಂದು ಅವರು ಬರೆದುಕೊಂಡಿದ್ದಾರೆ. ಚಂದ್ರಯಾನ 3 ಮಿಷನ್‌ ಯಶಸ್ಸಿಗೆ ದೇಶವೇ ಪ್ರಾರ್ಥಿಸುವ ಹೊತ್ತಿನಲ್ಲಿ ಪ್ರಕಾಶ್‌ ರಾಜ್‌ ಅವರು ಇಂತಹ ಫೋಟೊ ಶೇರ್‌ ಮಾಡಿರುವುದಕ್ಕೆ ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಪ್ರಕಾಶ್‌ ರಾಜ್‌ ಅವರನ್ನು ಹಿಗ್ಗಾಮುಗ್ಗ ತರಾಟೆಗೆ ತೆಗೆದುಕೊಂಡಿದ್ದಾರೆ. ಪ್ರಕಾಶ್‌ ರಾಜ್‌ ಅವರನ್ನು ತರಾಟೆಗೆ ತೆಗೆದುಕೊಂಡ ವ್ಯಕ್ತಿಯೊಬ್ಬರು, ಇದು ರೋಗಿಷ್ಟ ಮನಸ್ಥಿತಿಯ ಪರಮಾವಧಿ ಎಂದಿದ್ದಾರೆ. ರಾಮ್‌ ಎಂಬುವವರು ಪ್ರತಿಕ್ರಿಯಿಸಿ, ಇಸ್ರೋ ಉನ್ನತ ಭಾರತವನ್ನು ಪ್ರತಿನಿಧಿಸುತ್ತದೆ. ಸಂಪನ್ಮೂಲ ಕೊರತೆ, ಪ್ರತಿಕೂಲ ಪರಿಸ್ಥಿತಿಗಳ ಮಧ್ಯೆಯೂ ಇಸ್ರೋ ಮಹತ್ತರವಾದುದನ್ನು ಸಾಧಿಸಲು ಹೊರಟಿದೆ. ಆದರೆ, ಈ ವ್ಯಕ್ತಿಯು ಭಾರತದ ಬಗ್ಗೆ ಕೆಟ್ಟದ್ದನ್ನೇ ಹೇಳುತ್ತಾನೆ ಎಂದು ಕುಟುಕಿದ್ದಾರೆ.

ಪ್ರಕಾಶ್ ರೈ ಅವರ ಟ್ವೀಟ್ ಸೋಷಿಯಲ್ ಮೀಡಿಯಾದಲ್ಲಿ ಪರ ವಿರೋಧ ಚರ್ಚೆಗೆ ಕಾರಣವಾಗಿದೆ. ಹೆಸರಾಂತ ನಟನಾಗಿ ಯಾವ ರೀತಿಯಲ್ಲಿ ನಡೆದುಕೊಳ್ಳಬೇಕು ಎನ್ನುವುದನ್ನು ಕಲಿಸಬೇಕಿದೆ ಎಂದು ಕೆಲವರು ಕಾಮೆಂಟ್ ಮಾಡಿದ್ದಾರೆ. ಇನ್ನೂ ಕೆಲವರು ಪ್ರಕಾಶ್ ರೈ ಪರವಾಗಿ ಕಾಮೆಂಟ್ ಮಾಡಿದ್ದಾರೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.