ವಿದ್ಯಾಮಂದಿರದಲ್ಲಿ ಮುದ್ದಾದ ಟೀಚರ್ ಜೊತೆ ಪ್ರಿನ್ಸಿಪಲ್ ‌ಗುದ್ದಾಟ, ಇದು ಯಾವ ಪಾಠ ಎಂದ ವಿದ್ಯಾರ್ಥಿಗಳು

 | 
Bji
ಹಿಂದಿನ ಕಾಲದಲ್ಲಿ ಶಾಲೆಯನ್ನು ವಿದ್ಯಾ ದೇಗುಲ ಅಂತ ಕರಿತಾರೆ. ಅಂತಹ ಶಾಲೆಯಲ್ಲಿಯೇ ಹೆಡ್‌ ಮಾಸ್ಟರ್‌ ಹಾಗೂ ಲೇಡಿ ಟೀಚರ್‌ ಒಬ್ರು ನಾಚಿಕೆಗೇಡಿನ ಕೃತ್ಯ ಎಸಗಿದ್ದು, ಇದಕ್ಕೆ ಸಂಬಂಧಿಸಿದ ವಿಡಿಯೋವೊಂದು ಇದೀಗ ಸೋಷಿಯಲ್‌ ಮೀಡಿಯಾದಲ್ಲಿ ಭಾರೀ ವೈರಲ್‌ ಆಗುತ್ತಿದೆ. ಹೌದು ನಾವು ಶಾಲೆಯಲ್ಲಿ ಇದ್ದೇವೆ ಎಂಬುದನ್ನು ಮರೆತು, ಪರಿಜ್ಞಾನವೇ ಇಲ್ಲದೆ ಶಿಕ್ಷಕಿಯೊಂದಿಗೆ ಹೆಡ್‌ ಮಾಸ್ಟರ್‌ ರೊಮ್ಯಾನ್ಸ್‌ ಮಾಡಿದ್ದು, ಇವರಿಬ್ಬರ ಈ ಹೇಯ ಕೃತ್ಯಕ್ಕೆ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ.
ಅಷ್ಟಕ್ಕೂ ಈ ಘಟನೆ ನಡೆದಿರುವುದು ರಾಜಸ್ಥಾನದ ಚಿತ್ತೋರ್‌ಗಢ ಜಿಲ್ಲೆಯಲ್ಲಿ ಇಲ್ಲಿನ ಗಂಗ್ರಾರ್ ಬ್ಲಾಕ್‌ನ ಸಲೇರಾ ಎಂಬಲ್ಲಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹೆಡ್‌ ಮಾಸ್ಟರ್‌ ಮತ್ತು ಲೇಡಿ ಟೀಚರ್‌ ಕರ್ತವ್ಯ ಪ್ರಜ್ಞೆಯನ್ನು ಮರೆತು ರೊಮ್ಯಾನ್ಸ್‌ ಮಾಡಿದ್ದಾರೆ. ಪ್ರಿನ್ಸಿಪಾಲ್‌ ಕೊಠಡಿಯಲ್ಲಿ ಈ ಇಬ್ಬರು ಮುದ್ದಾಡುತ್ತಾ ಸರಸ ಸಲ್ಲಾಪದಲ್ಲಿ ತೊಡಗಿದ್ದು, ಈ ದೃಶ್ಯ ಅಲ್ಲಿದ್ದ ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. 
ಈ ದೃಶ್ಯವನ್ನು ಯಾರೋ ಸೋಷಿಯಲ್‌ ಮೀಡಿಯಾದಲ್ಲಿ ಹರಿಬಿಟ್ಟಿದ್ದು, ವಿದ್ಯಾ ದೇಗುಲದಲ್ಲಿ ನಾಚಿಕೆಗೇಡಿನ ವರ್ತನೆಯನ್ನು ತೋರಿದ ಈ ಇಬ್ಬರೂ ಶಿಕ್ಷಕರನ್ನು ಅಮಾನತು ಮಾಡುವಂತೆ ಆಗ್ರಹಿಸಲಾಗಿದೆ. News4rajasthan ಹೆಸರಿನ ಎಕ್ಸ್‌ ಖಾತೆಯಲ್ಲಿ ಈ ವಿಡಿಯೋವನ್ನು ಶೇರ್‌ ಮಾಡಲಾಗಿದ್ದು, ವೈರಲ್‌ ಆಗುತ್ತಿರುವ ವಿಡಿಯೋದಲ್ಲಿ ತಮ್ಮ ಕೊಠಡಿಗೆ ಬಂದಂತಹ ಶಿಕ್ಷಕಿಯನ್ನು ತಬ್ಬಿಕೊಂಡು ಆಕೆಯೊಂದಿಗೆ ಹೆಡ್‌ ಮಾಸ್ಟರ್‌ ರೊಮ್ಯಾನ್ಸ್‌ ಮಾಡುತ್ತಿರುವ ದೃಶ್ಯವನ್ನು ಕಾಣಬಹುದು.
Mooಜನವರಿ 19 ರಂದು ಹಂಚಿಕೊಳ್ಳಲಾದ ಈ ವಿಡಿಯೋ 1.2 ಲಕ್ಷ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸ್‌ಗಳನ್ನು ಪಡೆದುಕೊಂಡಿದೆ. ಒಬ್ಬ ಬಳಕೆದಾರರು ʼಇಂತಹವರ ವಿರುದ್ಧ ಅಗತ್ಯ ಕಾನೂನು ಕ್ರಮ ಕೈಗೊಳ್ಳಬೇಕು. ಇನ್ನೊಂದು ವಿಚಾರ ಏನಪ್ಪಾ ಅಂದ್ರೆ ಇಂತಹ ದೃಶ್ಯಗಳನ್ನು ಸೋಷಿಯಲ್‌ ಮೀಡಿಯಾದಲ್ಲಿ ಹರಿ ಬಿಡುವುದು ತಪ್ಪುʼ ಎಂದು ಹೇಳಿದ್ದಾರೆ. 
ಇನ್ನೊಬ್ಬ ಬಳಕೆದಾರರು ʼಈ ಇಬ್ಬರನ್ನೂ ಮೊದಲು ವಜಾ ಗೊಳಿಸಬೇಕುʼ ಎಂದು ಹೇಳಿದ್ದಾರೆ. ಇನ್ನೂ ಅನೇಕರು ಶಿಕ್ಷಕರಿಬ್ಬರ ಈ ನಾಚಿಕೆಗೇಡಿನ ಕೃತ್ಯಕ್ಕೆ ಭಾರೀ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಾಗಾಗಿ ಇವರಿಬ್ಬರನ್ನು ಕೆಲಸದಿಂದ ತೆಗೆದುಹಾಕಲಾಗಿದೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.