ಮದುವೆಯಾದ ಒಂದೇ ತಿಂಗಳಲ್ಲಿ ಸಿಹಿಸುದ್ದಿ ಕೊಟ್ಟ ಪೃಥ್ವಿ ಭಟ್, ಇಷ್ಟು ಬೇಗ ಹೇಗೆ ಎಂದ ನೆಟ್ಟಿಗರು
May 3, 2025, 13:12 IST
|

ಕನ್ನಡ ಕಿರುತೆರೆಯ ಜನಪ್ರಿಯ ರಿಯಾಲಿಟಿ ಶೋ ಸರಿಗಮಪ ಮೂಲಕ ಜನಪ್ರಿಯತೆ ಪಡೆದಿರುವ ಪೃಥ್ವಿ ಭಟ್ ಇತ್ತೀಚಿಗಷ್ಟೇ ಹೊಸ ಜೀವನಕ್ಕೆ ಕಾಲಿಟ್ಟಿದ್ದಾರೆ. ಖ್ಯಾತ ಗಾಯಕಿ ಪ್ರಥ್ವಿ ಭಟ್ ಕಳೆದ ಕೆಲವು ದಿನಗಳ ಹಿಂದೆ ಅಭಿಷೇಕ್ ಎನ್ನುವವರನ್ನು ಮದುವೆಯಾಗಿದ್ದಾರೆ. ಹಸೆಮಣೆ ಏರಿ ಹೊಸ ಜೀವನಕ್ಕೆ ಕಾಲಿಟ್ಟ ಗಾಯಕಿ ಹಾಗೂ ಆಕೆಯ ಪತಿ ವಿರುದ್ಧ ಆರೋಪ ಕೇಳಿಬಂದಿದ್ದು, ಸ್ವತಃ ಪೃಥ್ವಿ ಭಟ್ ತಂದೆ, ಮಗಳು ನಮ್ಮ ವಿರೋಧದ ನಡುವೆಯೂ ಮನೆ ಬಿಟ್ಟು ಹೋಗಿ ಮದುವೆಯಾಗಿದ್ದಾಳೆ. ಆಕೆಯನ್ನು ವಶೀಕರಣ ಮಾಡಿಕೊಂಡು ಮದುವೆ ಮಾಡಿಕೊಳ್ಳಲಾಗಿದೆ ಎಂದು ಆರೋಪಿಸಿದ್ದರು.
ಗಾಯಕಿ ಪೃಥ್ವಿ ಭಟ್ ತಮ್ಮ ಪೋಷಕರ ವಿರೋಧದ ನಡುವೆ ಮನೆ ಬಿಟ್ಟು ಹೋಗಿ ಮದುವೆಯಾಗಿದ್ದಾರೆ ಎನ್ನುವ ಮಾಹಿತಿ ಇದರಿಂದ ಬಹಿರಂಗವಾಗಿದೆ. ಪ್ರಥ್ವಿ ಭಟ್ ತಂದೆ ಮಾತನಾಡಿದ್ದಾರೆ ಎನ್ನಲಾದ ಆಡಿಯೋವೊಂದು ಈಗ ಎಲ್ಲೆಡೆ ವೈರಲ್ ಆಗುತ್ತಿದ್ದು, ಈ ಆಡಿಯೋದಲ್ಲಿ ಪೃಥ್ವಿ ಭಟ್ ತಂದೆ ಸಂಗೀತ ಶಿಕ್ಷಕ ನರಹರಿ ದೀಕ್ಷಿತ್ ವಿರುದ್ಧ ಗಂಭೀರ ಆರೋಪ ಮಾಡಿದ್ದರು. ಆದರೆ ಇದೀಗ ಗಾಯಕಿ ಪ್ರಥ್ವಿ ಭಟ್ ಅದನ್ನು ಸಹ ಅಲ್ಲಗಳೆದಿದ್ದಾರೆ.
ಗಾಯಕಿ ಪೃಥ್ವಿ ಭಟ್ ಪ್ರೇಮ ವಿವಾಹದ ಬಳಿಕ ಮೊದಲ ಬಾರಿಗೆ ಸಾಮಾಜಿಕ ಜಾಲತಾಣದಲ್ಲಿ ಫೊಟೋವನ್ನು ಹಂಚಿಕೊಂಡಿದ್ದಾರೆ. ಪತಿ ಅಭಿಷೇಕ್ ಜೊತೆಯಾಗಿ ದೇವಸ್ಥಾನದಲ್ಲಿ ನಿಂತಿರುವ ಫೋಟೋವನ್ನು ಗಾಯಕಿ ಪೃಥ್ವಿ ಭಟ್ ಶೇರ್ ಮಾಡಿದ್ದಾರೆ. ಈ ಫೋಟೋಗೆ ಸಾಮಾಜಿಕ ಜಾಲತಾಣದಲ್ಲಿ ಶುಭಾಶಯಗಳ ಮಹಾಪೂರವೇ ಹರಿದು ಬರುತ್ತಿದೆ. ದಂಪತಿಗಳಿಬ್ಬರೂ ಸಂತೋಷವಾಗಿ ಇರುವಂತೆ ಕಾಣುತ್ತಿದೆ.
ಜೀ ಕನ್ನಡ ವಾಹಿನಿಯಲ್ಲಿ ಎಕ್ಸಿಕ್ಯೂಟಿವ್ ಪ್ರೊಡ್ಯೂಸರ್ ಆಗಿ ಕೆಲಸ ಮಾಡುವ ಅಭಿಷೇಕ್ ಅವರಿಗೆ ಸರಿಗಮಪ ಗಾಯನ ಸ್ಪರ್ಧೆ ಮೂಲಕ ಪೃಥ್ವಿ ಭಟ್ ಪರಿಚಯವಾದರು. ನಂತರ ಇವರಿಬ್ಬರ ನಡುವಿನ ಸ್ನೇಹ ಪ್ರೀತಿಯಾಗಿ ಇಬ್ಬರು ಪ್ರೇಮ ವಿವಾಹ ಮಾಡಿಕೊಂಡರು. ಆದರೆ ಪೃಥ್ವಿ ಅವರ ತಂದೆ ತಾಯಿ ಇಬ್ಬರ ಪ್ರೀತಿಯನ್ನು ಒಪ್ಪಿಕೊಂಡಿಲ್ಲ. ವಿರೋದದ ನಡುವೆ ಇಬ್ಬರು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkarunadu.tech ವಾಹಿನಿಗೆ ಬೆಂಬಲಿಸಿ)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕರುನಾಡು ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.