ಕೊನೆಗೂ ಅಕ್ಷಯ್ ಕೊ.ಲೆಗೆ ಕಾರಣ ಬಿಚ್ಚಿಟ್ಟ ಪುತ್ತೂರು MLA ಅಶೋಕ್ ರೈ, ಬೆಚ್ಚಿಬಿದ್ದ ಜನ

 | 
Bbb

ದುಷ್ಕರ್ಮಿಗಳಿಂದ ಹತ್ಯೆಗೊಳಗಾದ ಕಲ್ಲೇಗ ಟೈಗರ್ಸ್ ನ ಅಕ್ಷಯ್ ಕಲ್ಲೇಗ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಒಂದೆಡೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದರೆ, ಇನ್ನೊಂದೆಡೆ ಅಕ್ಷಯ್ ಮನೆಯಲ್ಲಿ ಮನೆಮಂದಿಯ ಆರ್ತನಾದ ಮುಗಿಲು ಮುಟ್ಟಿದೆ. ಅಕ್ಷಯ್ ಪಿಲಿ ನಲಿಕೆಯ ಯಜಮಾನಿಕೆಯನ್ನು ಮಾಡುವ ಮೂಲಕ ಪರಿಸರದಲ್ಲಿ ಜನಪ್ರಿಯನಾಗಿದ್ದು, ಹಲವರಿಗೆ ನೆರವಾಗಿದ್ದ. 

ಈ ನಡುವೆ ಪುತ್ತೂರು ಕ್ಷೇತ್ರ ಶಾಸಕ ಅಶೋಕ್‌ ಕುಮಾರ್ ರೈ ಅವರು ಮೃತ ಅಕ್ಷಯ್‌ ಮನೆಗೆ ಬಂದು, ಮನೆ ಮಂದಿಗೆ ಸಾಂತ್ವನದ ನುಡಿಗಳನ್ನಾಡಿದ್ದಾರೆ. ಆರೋಪಿಗಳ ಬಂಧಿಸಿ ಕಠಿಣ ಕ್ರಮ ಕೈಗೊಳ್ಳಲು ಪೊಲೀಸರಿಗೆ ನಿರ್ದೇಶನ ನೀಡುವುದಾಗಿ ಅವರು ಭರವಸೆ ಮಾತುಗಳನ್ನಾಡಿದ್ದಾರೆ. ಇನ್ನು ಈ ಪ್ರಕರಣ ಸಂಬಂಧ ಇದೀಗ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.

ಆರೋಪಿಗಳನ್ನು ಚೇತನ್, ಮನೀಶ್, ಮಂಜ ಹಾಗೂ ಕೇಶವ ಎಂದು ಗುರುತಿಸಲಾಗಿದೆ. ಗಾಂಜಾ ಮತ್ತಿನಲ್ಲಿ ಅಕ್ಷಯ್ ಮೇಲೆ ಮಚ್ಚು ಬೀಸಿರೋ ಶಂಕೆ ವ್ಯಕ್ತವಾಗುತ್ತಿದೆ. 58 ಬಾರಿ ತಲವಾರಿನಿಂದ ಹಲ್ಲೆ ಮಾಡಿರುವುದು ಮರಣೋತ್ತರ ಪರೀಕ್ಷೆ ವೇಳೆ ಬೆಳಕಿಗೆ ಬಂದಿದೆ. ಅಕ್ಷಯ್ ದೇಹದ ಮೇಲಿನ ಗಾಯ ಕಂಡು ವೈದ್ಯರೇ ಶಾಕ್ ಆಗಿದ್ದಾರೆ. ಹಂತಕರು ಮನಸೋ ಇಚ್ಛೆ ಅಕ್ಷಯ್ ಮೇಲೆ ತಲವಾರು ಬೀಸಿದ್ದಾರೆ. 

ಮರಣೋತ್ತರ ಪರೀಕ್ಷೆಯ ಬಳಿಕ ಕುಟುಂಬಸ್ಥರಿಗೆ ಮೃತದೇಹವನ್ನು ಹಸ್ತಾಂತರಿಸಲಾಯಿತು. ಪುತ್ತೂರಿನ ನೆಹರು ನಗರದ ಅಕ್ಷಯ್ ಮನೆಗೆ ಮೃತದೇಹ ಆಗಮಿಸುತ್ತಿದ್ದಂತೆಯೇ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿತು. ಈ ಮಧ್ಯೆ ಆರೋಪಿಗಳೊಂದಿಗೆ ಪೋಲೀಸರು ಸ್ಥಳ ಮಹಜರು ನಡೆಸಿದ್ದಾರೆ. ಪುತ್ತೂರು ನಗರ ಪೊಲೀಸ್ ಠಾಣೆಯ ಸರ್ಕಲ್ ಇನ್ಸ್ ಪೆಕ್ಟರ್ ಸುನಿಲ್ ಕುಮಾರ್ ನೇತೃತ್ವದಲ್ಲಿ ಮೂವರು ಆರೋಪಿಗಳನ್ನು ಕೃತ್ಯ ನಡೆದ ಸ್ಥಳಕ್ಕೆ ಕರಕೊಂಡು ಹೋಗಿ ಮಹಜರು ನಡೆಸಿದರು.

ನಗರಕ್ಕೆ ಆರೋಪಿಗಳನ್ನು ಬಿಗಿ ಭದ್ರತೆಯಲ್ಲಿ ಕರಕೊಂಡು ಬಂದಾಗ ಆರೋಪಿಗಳನ್ನು ನೋಡಲು ನೂರಾರು ಸಂಖ್ಯೆಯಲ್ಲಿ ಜನ ಸೇರಿದ್ದರು. ಮಹಜರು ಸ್ಥಳದಲ್ಲೇ ಅಕ್ಷಯ್ ಕಲ್ಲೇಗ ಗುಂಪು ಆರೋಪಿಗಳಿಗೆ ಎಚ್ಚರಿಕೆ ನೀಡಿದ್ದು ನಿಮ್ಮನ್ನು ಬಿಡುವುದಿಲ್ಲ ಎಂದು ಆಕೋಶ ವ್ಯಕ್ತಪಡಿಸಿ ಪರಿಸ್ಥಿತಿ ವಿಕೋಪಕ್ಕೆ ತೆರಳುವುದನ್ನು ಗಮನಿಸಿದ ಪೋಲಿಸರು ಕೂಡಲೇ ಜನರನ್ನು ಚದುರಿಸಿ ಮಹಜರಿಗೆ ಅನುವು ಮಾಡಿಕೊಟ್ಟರು. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.