ದರ್ಶನ್ ನನ್ನ ಗುರು ಎನ್ನುತ್ತಾ ಮೆಲ್ಲನೆ ಜಾರಿಕೊಂಡ ರಚಿತಾ ರಾಮ್; ಕನ್ನಡಿಗರು ಗರಂ
Jun 20, 2024, 15:35 IST
|

ದರ್ಶನ್ರ ಆಪ್ತವಲಯದಲ್ಲಿ ಗುರುತಿಸಿಕೊಂಡಿದ್ದ, ದರ್ಶನ್ ರನ್ನು ಗಾಡ್ಫಾದರ್, ಗುರು ಎಂದೇ ಭಾವಿಸಿದ್ದ, ಈ ಹಿಂದೆ ಕೆಲವು ವಿವಾದಗಳಾದ ದರ್ಶನ್ ಪರವಹಿಸಿದ್ದ ನಟಿ ರಚಿತಾ ರಾಮ್ ಇದೀಗ ಮೊದಲ ಬಾರಿಗೆ ರೇಣುಕಾ ಸ್ವಾಮಿ ಕೊಲೆ ಪ್ರಕರಣ ವಿಷಯವಾಗಿ ತುಟಿ ಬಿಚ್ಚಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ರೇಣುಕಾ ಸ್ವಾಮಿ ಪ್ರಕರಣದ ಬಗ್ಗೆ ತಮ್ಮ ಅಭಿಪ್ರಾಯವನ್ನು ನಟಿ ರಚಿತಾ ರಾಮ್ ಹಂಚಿಕೊಂಡಿದ್ದಾರೆ, ಈ ನೋಟ್ ಅನ್ನು ನಾನು ನಟಿಯಾಗಿ ಅಲ್ಲ ಸಾಮಾನ್ಯ ಪ್ರಜೆಯಾಗಿ ಬರೆಯುತ್ತಿದ್ದಾನೆ.
ಇತ್ತಿಚೆಗೆ ನಡೆದ ಪ್ರಕರಣದ ಬಗ್ಗೆ ನನ್ನ ಮಾತು, ಮೊದಲಿಗೆ ರೇಣುಕಾಸ್ವಾಮಿ ಅವರ ಆತ್ಮಕ್ಕೆ ಶಾಂತಿ ಸಿಗಲಿ, ಅವರ ಕುಟುಂಬಕ್ಕೆ ಭಗವಂತ ಧೈರ್ಯ ಭರಿಸುವ ಶಕ್ತಿ ನಿಡಲಿ ಎಂಬ ಪ್ರಾರ್ಥನೆ ಮಾಡುತ್ತೇನೆ. ಈ ಹತ್ಯೆಗೆ ಕಾನೂನಾತ್ಮಕವಾಗಿ ನ್ಯಾಯ ಸಿಗುತ್ತದೆಂಬ ಭರವಸೆ ನನಗಿದೆ ಎಂದಿದ್ದಾರೆ.ನನ್ನನ್ನು ಚಿತ್ರರಂಗಕ್ಕೆ ಪರಿಚಯಿಸಿದ ನಟ ದರ್ಶನ್ ಸರ್. ದರ್ಶನ್ ನನಗೆ ಗುರು ಸಮಾನರು, ನನ್ನ ಜೀವನದ ತಪ್ಪುಗಳನ್ನು ತಿದ್ದಿ ಮಾರ್ಗದರ್ಶನ ನೀಡಿದಂತಹ ವ್ಯಕ್ತಿ.
ಇಂತಹ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎನ್ನುವುದು ನಂಬಲು ಸ್ವಲ್ಪ ಕಷ್ಟವಾಗುತ್ತಿದೆ. ಏನಿದ್ದರೂ ಸತ್ಯ ಪೊಲೀಸ್ ತನಿಖೆಯಿಂದ ನಮ್ಮ ಮುಂದೆ ಬರಲಿದೆ ಎನ್ನುವುದೆ ನನ್ನ ನಂಬಿಕೆ. ನನ್ನ ಮಾಧ್ಯಮ ಮಿತ್ರರು ಈ ಕೇಸ್‌ನ ವರದಿಯಲ್ಲಿ ಪಾರದರ್ಶಕವಾಗಿರುತ್ತಿರಿ ಮತ್ತು ನಿಷ್ಪಕ್ಷವಾಗಿ ಕೆಲಸ ಮಾಡುತ್ತಿರಿ ಎಂದು ಆಶಿಸುತ್ತೇನೆಎಂದು ರಚಿತಾ ರಾಮ್ ಹೇಳಿದ್ದಾರೆ. ಇದೀಗ ಅವರ ಮಾತನ್ನು ಹಲವಾರು ಜನ ಟ್ರೊಲ್ ಮಾಡಿದ್ದಾರೆ. ಕೊಲೆ ಮಾಡಿದರೂ ಸರಿಯೇ ಎಂದು ಹಲವಾರು ಜನ ಖಂಡಿಸಿ ರಿಪ್ಲೇ ಮಾಡಿದ್ದಾರೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkarunadu.tech ವಾಹಿನಿಗೆ ಬೆಂಬಲಿಸಿ)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕರುನಾಡು ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.
Mon,10 Jul 2023
ಭಾರತೀಯ ಆಟಗಾರ ಕೆ ಎಲ್ ರಾಹುಲ್ ಅವರ ಸಂಭಾವನೆ ಎಷ್ಟು ಕೋಟಿ ಇರಬಹುದು
Sat,8 Jul 2023