ರಾಧರಮಣ ಸೀರಿಯಲ್ ನಟಿ ಒಮ್ಮೆಲೇ ಸಾ.ವು; ಕನ್ನಡಿಗರಿಗೆ ನುಂಗಲಾರದ ನಷ್ಟ

 | 
೬೬

ಕಿರುತೆರೆಯಲ್ಲಿ ಮಿಂಚಿ ಹಲವರ ಮೆಚ್ಚುಗೆಗೆ ಪಾತ್ರವಾಗಿದ್ದ ನಟಿ ಇನಿಲ್ಲವಾಗಿದ್ದಾರೆ. ಹೌದು ಕಿರುತೆರೆ ನಟಿ ಪವಿತ್ರಾ ಜಯರಾಂ  ಅಪಘಾತದಲ್ಲಿ ದುರಂತ ಸಾವು ಕಂಡಿದ್ದಾರೆ. ಆಂಧ್ರಪ್ರದೇಶದ ಕರ್ನೂಲು ಸಮೀಪ ಅಪಘಾತಕ್ಕೀಡಾಗಿ ಪವಿತ್ರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೂಲತಃ ಕನ್ನಡಿಗರಾದ ಪವಿತ್ರ ಜಯರಾಂ, ತೆಲುಗಿನ ತ್ರಿನಯನಿ ಧಾರವಾಹಿಯಲ್ಲಿ ಜನಪ್ರಿಯರಾಗಿದ್ದರು. 

ಕನ್ನಡದ ರೋಬೋ ಫ್ಯಾಮಿಲಿ ಮೂಲಕ ಕಿರುತೆರೆಗೆ ಎಂಟ್ರಿಕೊಟ್ಟಿದ್ದ ಪವಿತ್ರ ಮೂಲತಃ ಮಂಡ್ಯ ತಾಲೂಕಿನ ಹನಕೆರೆಯವರು. ನಟಿ ಪವಿತ್ರಾ ಅವರು ರೋಬೋ ಫ್ಯಾಮಿಲಿ, ಜೋಕಾಲಿ, ನೀಲಿ, ರಾಧಾರಮಣ ಧಾರವಾಹಿಯಲ್ಲಿ ನಟಿಸಿ ಜನಪ್ರಿಯರಾಗಿದ್ದರು.ತೆಲುಗಿನ ತ್ರಿನಯನಿ ಮೂಲಕ ತೆಲುಗರ ಮನೆಮಾತಾಗಿದ್ದ ಪವಿತ್ರ ನಿನ್ನೆ ಮುಂಜಾನೆ ಅಪಘಾತದಲ್ಲಿ ಸಾವಿಗೀಡಾಗಿದ್ದಾರೆ.

ಆಂಧ್ರಪ್ರದೇಶದ ಕರ್ನೂಲ್ ಸಮೀಪ ನಡೆದ ಕಾರು ಅಪಘಾತದಲ್ಲಿ ನಟಿ ಪವಿತ್ರಾ ಸ್ಥಳದಲ್ಲೇ ಮರಣ ಹೊಂದಿದ್ದಾರೆ. ಹೈದರಾಬಾದ್ ಸಮೀಪದ ಮೆಹಬೂಬ್ ನಗರದಲ್ಲಿ ಅಪಘಾತಕ್ಕೀಡಾಗಿ ಪವಿತ್ರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಪವಿತ್ರ ಪ್ರಯಾಣಿಸುತ್ತಿದ್ದ ಕಾರು ಮತ್ತು ಅಲ್ಲಿ ಸಂಚರಿಸುತ್ತಿದ್ದ ಬಸ್ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಈ ದುರಂತದಲ್ಲಿ ನಟಿ ಪವಿತ್ರಾ ಜಯರಾಂ ಅವರು ಸ್ಥಳದಲ್ಲೇ ಅಸು ನೀಗಿದ್ದಾರೆ. 

ಮೂಲತಃ ಕನ್ನಡಿಗರಾದ ಪವಿತ್ರ ತೆಲುಗಿನ ತ್ರಿನಯನಿ ಧಾರವಾಹಿಯಲ್ಲಿ ನಟಿಸುತ್ತಿದ್ದು, ಅಲ್ಲಿ ಕೂಡ ಬಹಳಷ್ಟು ಜನಪ್ರಿಯತೆ ಪಡೆದಿದ್ದರು. ನಟಿ ಪವಿತ್ರಾ ಜರಾಂ ಸಾವಿಗೆ ಕನ್ನಡ ಹಾಗೂ ತೆಲುಗಿನ ಕಿರುತೆರೆ ಲೋಕ ದಿಗ್ಭ್ರಮೆ ವ್ಯಕ್ತಪಡಿಸಿದೆ. ಈ ಅನಿರೀಕ್ಷಿತ ಸಾವಿನಿಂದ ಕಂಗಾಲಾಗಿರುವ ಕುಟುಂಬದ ಸದಸ್ಯರನ್ನು ನೆನದು ಹಲವರು ಕಂಬನಿ ಮಿಡಿದಿದ್ದಾರೆ. ಶೂಟಿಂಗ್‌ಗೆಂದು ಹೊರಟಿದ್ದ ನಟಿ ಮರಳಿ ಬಾರದ ಲೋಕಕ್ಕೆ ಹೊರಟುಹೋಗಿದ್ದು, ಈ ಸಾವಿಗೆ ಎಲ್ಲರೂ ಮರುಗುತ್ತಿದ್ದಾರೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.