ಪರಪ್ಪನ ಅಗ್ರಹಾರದಿಂದ ರಿಲೀಸ್ ಬಳಿಕ ದರ್ಶನ್ ಅವರಂತೆ ನಡೆದಾಡಿಕೊಂಡು ಬಂದ ರಜತ್
Mar 29, 2025, 21:14 IST
|

ಆದ್ರೆ, ವಿನಯ್ ಗೌಡ ಹಾಗೂ ರಜತ್ ಕಿಶನ್ ಫೈಬರ್ ಮಚ್ಚು ನೀಡಿ ಯಾಮಾರಿಸಿದ್ದರು. ಹೀಗಾಗಿ ಪೊಲೀಸರು ಆ ರಿಯಲ್ ಮಚ್ಚಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.ಇದರ ಮಧ್ಯೆ 24ನೇ ಎಸಿಎಂಎಂ ನ್ಯಾಯಾಲಯವು ರಜತ್ ಹಾಗೂ ವಿನಯ್ ಗೌಡಗೆ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ. ಇಂದು ಆರೋಪಿಗಳನ್ನ ನ್ಯಾಯಾಂಗ ಬಂಧನಕ್ಕೆ ನೀಡುವಂತೆ ಪೊಲೀಸರಿಂದ ಮನವಿ ಮಾಡಿಕೊಂಡಿದ್ದರು. ಆದ್ರೆ, ಆರೋಪಿಗಳ ಪರ ವಕೀಲ ಪ್ರಕಾಶ್ ಅವರ ವಾದ ಪ್ರತಿವಾದವನ್ನು ಆಲಿಸಿದ ನ್ಯಾಯಮೂರ್ತಿಗಳು ರಜತ್ ಹಾಗೂ ವಿನಯ್ ಗೌಡಗೆ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ.
ರೀಲ್ಸ್ ಪ್ರಕರಣದಲ್ಲಿ ಇಬ್ಬರಿಗೂ 24ನೇ ಎಸಿಎಂಎಂ ಕೋರ್ಟ್ ನಿನ್ನೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿತ್ತು. ಆದರೆ ಸಮಯಕ್ಕೆ ಸರಿಯಾಗಿ ಜಾಮೀನು ಆದೇಶ ಪ್ರತಿ ತಲುಪದ ಹಿನ್ನೆಲೆಯಲ್ಲಿ ನಿನ್ನೆ ರಾತ್ರಿ ಜೈಲಿನಲ್ಲೇ ಕಳೆದಿದ್ದರು. ಇಂದು ಬಿಡುಗಡೆಗೆ ಸಂಬಂಧಿಸಿದ ಎಲ್ಲಾ ಪ್ರಕ್ರಿಯೆಗಳನ್ನು ಪೂರೈಸಿ ರಿಲೀಸ್ ಆಗಿದ್ದಾರೆ. ಇಬ್ಬರು ಒಂದು ಕೈಯಲ್ಲಿ ಬ್ಯಾಗ್ ಹಿಡಿದು, ಇನ್ನೊಂದು ಕೈಯಲ್ಲಿ ಸೇಬು ಹಣ್ಣು ತಿನ್ನುತ್ತ ಹೊರ ಬಂದಿದ್ದಾರೆ.
ಈ ವೇಳೆ ಕೆಲವು ವಿಸಿಟರ್ ಸೆಲ್ಫಿ ಕೇಳಿದ್ದಾರೆ. ಸೆಲ್ಫಿಗೂ ಪೋಸ್ ನೀಡಿದ್ದಾರೆ.ರಿಲೀಸ್ ಆದ ಬೆನ್ನಲ್ಲೇ ಮಾಧ್ಯಮಕ್ಕೆ ಮಾತನಾಡಿದ ವಿನಯ್, ಎಲ್ಲರೂ ತುಂಬಾ ಸಪೋರ್ಟ್ ಮಾಡಿದ್ದೀರಾ. ಎಲ್ಲರೂ ಸೇರಿ ಮಾತಾಡೋಣ ಎಂದು ಹೇಳಿ ವಿನಯ್ ತೆರಳಿದ್ದಾರೆ.ಇನ್ನೂ ರಜತ್ ಅವರು ದರ್ಶನ್ ನಟನೆಯ ಕರಿಯ ಸಿನಿಮಾ ಲುಕ್‌ನಲ್ಲಿ ನಟಿಸಿದ್ರೆ, ಇತ್ತ ವಿನಯ್ ಪುಷ್ಪರಾಜ್ ಲುಕ್‌ನಲ್ಲಿ ಮಚ್ಚು ಹಿಡಿದು ಇಬ್ಬರು ರೀಲ್ಸ್ ಮಾಡಿ ಕಾನೂನು ಸಂಕಷ್ಟಕ್ಕೆ ಸಿಲುಕಿದ್ದರು. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkanrunadu.tech ವಾಹಿನಿಗೆ ಬೆಂಬಲಿಸಿ)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕರುನಾಡು ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.
Mon,10 Jul 2023
ಭಾರತೀಯ ಆಟಗಾರ ಕೆ ಎಲ್ ರಾಹುಲ್ ಅವರ ಸಂಭಾವನೆ ಎಷ್ಟು ಕೋಟಿ ಇರಬಹುದು
Sat,8 Jul 2023