ರಾಮ ಮಂದಿರ ಉದ್ಘಾಟನೆ ದಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ, ದೇಶಾದ್ಯಂತ ರಾಮನ ಭಜನೆ

 | 
ಪ್

ರಾಮ ಮಂದಿರ ಲೋಕಾರ್ಪಣೆಗೆ ತಯಾರಿ ನಡೆಯುತ್ತಿದೆ. ಜನವರಿ 22 ರಂದು ರಾಮಲ್ಲಾ ಪ್ರಾಣಪ್ರತಿಷ್ಠೆ ನಡೆಯಲಿದೆ. ಐತಿಹಾಸಿಕ ದಿನಕ್ಕಾಗಿ ವಿಶ್ವವೇ ಕಾಯುತ್ತಿದೆ. ರಾಮ ಮಂದಿರ ಪ್ರಾಣಪ್ರತಿಷ್ಠೆದಿನ ಉತ್ತರ ಪ್ರದೇಶದ ಎಲ್ಲಾ ಶಾಲಾ ಕಾಲೇಜಿಗೆ ರಜೆ ಘೋಷಿಸಲಾಗಿದೆ. ಇಷ್ಟೇ ಅಲ್ಲ ಪ್ರಾಣ ಪ್ರತಿಷ್ಠೆ ದಿನ ಉತ್ತರ ಪ್ರದೇಶದಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದೆ.

ಈ ಮಹತ್ವದ ಆದೇಶವನ್ನು ಸಿಎಂ ಯೋಗಿ ಆದಿತ್ಯನಾಥ್ ಹೊರಡಿಸಿದ್ದಾರೆ. ಇದೇ ವೇಳೆ ಪ್ರಾಣಪ್ರತಿಷ್ಠೆಯ ಐತಿಹಾಸಿಕ ದಿನ ಶಾಂತಿಯುತವಾಗಿ ಸಂಭ್ರಮಿಸಲು ಮನವಿ ಮಾಡಿದ್ದಾರೆ.500 ವರ್ಷಗಳ ಹೋರಾಟದ ಬಳಿಕ ಶ್ರೀರಾಮ ಮಂದಿರ ನಿರ್ಮಾಣವಾಗಿದೆ. ಈ ಐತಿಹಾಸಿಕ ದಿನ ನಮ್ಮೆಲ್ಲರಿಗೂ ಅತ್ಯಂತ ಮಹತ್ವ ಹಾಗೂ ಸಂಭ್ರಮದ ದಿನವಾಗಿದೆ. ಈ ದಿನವನ್ನು ಆಚರಿಸಲು ಎಲ್ಲಾ ಶಾಲಾ ಕಾಲೇಜಿಗೆ ರಜೆ ಘೋಷಿಸಿ ಎಂದು ಯೋಗಿ ಆದಿತ್ಯನಾಥ್, ಎಲ್ಲಾ ಜಿಲ್ಲಾಧಿಕಾರಿಗಳಿಗೆ ಆದೇಶ ಹೊರಡಿಸಿದ್ದಾರೆ.

ಶ್ರೀರಾಮ ಪ್ರಾಣಪ್ರತಿಷ್ಠೆ ಅತ್ಯಂತ ಪವಿತ್ರವಾಗಿದೆ. ಹೀಗಾಗಿ ಈ ದಿನ ಉತ್ತರ ಪ್ರದೇಶದಲ್ಲಿ ಮದ್ಯ ಮಾರಾಟ ನಿಷೇಧಿಸಲು ಆದೇಶ ಹೊರಡಿಸಲಾಗಿದೆ. ಸಾರ್ವಜನಿಕರು ರಾಮ ಮಂದಿರ ಪ್ರಾಣಪ್ರತಿಷ್ಠೆಯನ್ನು ಸಂಭ್ರಮಿಸಲು ಕೆಲ ಸೂಚನೆ ನೀಡಲಾಗಿದೆ. ಶಾಂತಿಯುತವಾಗಿ ಸಂಭ್ರಮ ಆಚರಿಸಿ, ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿ, ಮನೆಯಲ್ಲೇ ದೀಪ ಬೆಳಗಿ ರಾಮನ ಭವ್ಯ ಮಂದಿರದ ಲೋಕಾರ್ಪಣೆ ಹಾಗೂ ಪ್ರಾಣಪತಿಷ್ಠೆಯಲ್ಲಿ ಪಾಲ್ಗೊಳ್ಳಿ ಎಂದು ಯೋಗಿ ಆದಿತ್ಯನಾಥ್ ಹೇಳಿದ್ದಾರೆ. 

ಶಾಂತಿಯುತವಾಗಿ ಹಾಗೂ ಕೋವಿಡ್ ಮಾರ್ಗಸೂಚಿಗಳನ್ನು ಪಾಲಿಸಿಕೊಂಡು ಸಂಭ್ರಮದಲ್ಲಿ ಪಾಲ್ಗೊಳ್ಳಲು ಯೋಗಿ ಆದಿತ್ಯನಾಥ್ ಮನವಿ ಮಾಡಿದ್ದಾರೆ. ರಾಮ ಮಂದಿರ ಪ್ರಾಣಪ್ರತಿಷ್ಠೆಗೆ ಆಹ್ವಾನ ನೀಡಲಾಗುತ್ತಿದೆ. ಬರೋಬ್ಬರಿ 7 ಸಾವಿರ ಗಣ್ಯರಿಗೆ ಆಹ್ವಾನ ನೀಡಲಾಗುತ್ತಿದೆ. ಈಗಾಗಲೇ ಹಲವು ಗಣ್ಯರನ್ನು ಆಹ್ವಾನಿಸಲಾಗಿದೆ. ಪ್ರತಿಯೊಬ್ಬ ಗಣ್ಯರಿಗೂ ಮುಖತಃ ಭೇಟಿ ಮಾಡಿ ಆಹ್ವಾನ ಪತ್ರಿಕೆಗಳನ್ನು ನೀಡಲಾಗುವುದು. 

ದೇವಾಲಯ ಟ್ರಸ್ಟ್‌ನ ಪ್ರತಿನಿಧಿಗಳು ಹಾಗೂ ಸ್ವಯಂಸೇವಕರು ಗಣ್ಯರನ್ನು ಭೇಟಿ ಮಾಡಿ ಆಹ್ವಾನ ನೀಡಲಿದ್ದಾರೆ ಎಂದು ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ ಅಧಿಕಾರಿಗಳು ಹೇಳಿದ್ದಾರೆ.  (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.