ಮೋಹಕ ತಾರೆ ರಮ್ಯಾ ಜಿಮ್ ವರ್ಕೌಟ್, ತೂಕ ಇಳಿಸಲು ಕಸರತ್ತು

 | 
ಬರಕ

ಮೋಹಕ ತಾರೆ ರಮ್ಯಾ ಮತ್ತೆ ಜಿಮ್ ನಲ್ಲಿ ಬೆವರಿಳಿಸುತ್ತಿದ್ದಾರೆ. ಆ ವಿಡಿಯೋವನ್ನು ಅವರು ಸೋಷಿಯಲ್ ಮೀಡಿಯಾದಲ್ಲಿ ಅಪ್ ಲೋಡ್ ಮಾಡಿದ್ದಾರೆ. ನೆಚ್ಚಿನ ತಾರೆಯ ವರ್ಕೌಟ್ ವಿಡಿಯೋ ಕಂಡು ಅಭಿಮಾನಿಗಳು ಸಂಭ್ರಮಿಸಿದ್ದಾರೆ. ರಮ್ಯಾ ಫಿಟ್ನೆಸ್ ಗೆ ಫ್ಯಾನ್ಸ್ ಫಿದಾ ಆಗಿದ್ದಾರೆ.

ಸಿನಿಮಾ ರಂಗದಿಂದ ದೂರವಾಗಿ ರಾಜಕೀಯ ಕ್ಷೇತ್ರಕ್ಕೆ ಕಾಲಿಟ್ಟರು ರಮ್ಯಾ. ನಂತರ ಅಲ್ಲಿಂದನೂ ದೂರವಾಗಿ ಅಜ್ಞಾತವಾಸದಲ್ಲಿ ಇದ್ದರು. ಸ್ವಾತಿ ಮುತ್ತಿನ ಮಳೆ ಹನಿಯೇ ಸಿನಿಮಾ ಮೂಲಕ ಮತ್ತೆ ಚಿತ್ರರಂಗಕ್ಕೆ ಬಂದಿದ್ದಾರೆ. ಇದೀಗ ನಾಯಕಿಯಾಗಿಯೂ ಮತ್ತೆ ಕಮ್ ಬ್ಯಾಕ್ ಆಗಲಿದ್ದಾರೆ.

ಡಾಲಿ ಧನಂಜಯ್ ನಟನೆಯ ಉತ್ತರಕಾಂಡ ಸಿನಿಮಾದಲ್ಲಿ ರಮ್ಯಾ ನಾಯಕಿಯಾಗಿ ನಟಿಸಲಿದ್ದಾರೆ ಎಂದು ಹೇಳಲಾಗುತ್ತಿದೆ. ಸಪ್ತಮಿ ಗೌಡ ಕೂಡ ನಟಿಸುತ್ತಿದ್ದಾರೆ. ಇದೇ ಸಿನಿಮಾಗಾಗಿಯೇ ರಮ್ಯಾ ತಯಾರಿ ಮಾಡಿಕೊಳ್ಳುತ್ತಿದ್ದಾರೆ. ಆ ವಿಡಿಯೋವನ್ನು ಹಂಚಿಕೊಂಡು ತಮ್ಮ ತಯಾರಿಯನ್ನೂ ಸಾಬೀತು ಪಡಿಸಿದ್ದಾರೆ.

ಅಂದುಕೊಂಡಂತೆ ಆಗಿದ್ದರೆ ಸ್ವಾತಿ ಮುತ್ತಿನ ಮಳೆ ಹನಿಯೇ ಚಿತ್ರಕ್ಕೆ ರಮ್ಯಾ ನಾಯಕಿಯಾಗಬೇಕಿತ್ತು. ಆದರೆ, ಕೊನೆಯ ಗಳಿಗೆಯಲ್ಲಿ ಆ ಚಿತ್ರದಿಂದ ರಮ್ಯಾ ಹಿಂದೆ ಸರಿದರು. ಕೇವಲ ನಿರ್ಮಾಪಕಿಯಾಗಿ ಮುಂದುವರೆದರು. ಈಗ ಚೆನ್ನಾಗಿ ವರ್ಕೌಟ್ ಮಾಡಿ ಹೊಸ ಸಿನೆಮಾ ಒಪ್ಪಿಕೊಳ್ಳುತ್ತಾರ ಕಾದು ನೋಡಬೇಕಿದೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.