DK ಶಿವಕುಮಾರ್ ಮಾತಿಗೆ ಕೆರಳಿ ಕೆಂಡವಾದ ರಂಗಣ್ಣ, ಸ್ಟೂಡಿಯೋದಲ್ಲೇ ಕೌಂಟರ್
Mar 4, 2025, 20:51 IST
|

ಈ ಕುರಿತು ವಿಧಾನಸೌಧದಲ್ಲಿ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಮಾತನಾಡಿ, ಟೀಕೆ ಮಾಡಲಿ ಎಂದು ನಾನು ಹೇಳಿಕೆ ನೀಡಿದ್ದು. ನಾನು ಅವರಿಗೆಲ್ಲಾ ಎಷ್ಟು ಸಹಾಯ ಮಾಡಿದ್ದೇನೆ ಎನ್ನುವುದು ನನಗೆ ಗೊತ್ತಿದೆ. ಸಹಾಯ ತೆಗೆದುಕೊಂಡವರಿಗೆ ಗೊತ್ತಿದೆ. ನಾನು ಅವರಿಗೆ ರಾಜ್ಯದ ಹಿತಕ್ಕಾಗಿ ಹೇಳಿದ್ದೇನೆ. ನೆಲ, ಜಲ, ಭಾಷೆ ಉಳಿಯಬೇಕು. ಅಂತರಾಷ್ಟ್ರೀಯ ಚಲನಚಿತ್ರ ಉತ್ಸವ ಯಾರಿಗಾಗಿ ಮಾಡಿರುವುದು. ಚಿತ್ರರಂಗ ಬೆಳೆಯಲಿ ಎಂದು. ಅವರ ಕ್ಷೇತ್ರದ ಬಗ್ಗೆ ಅವರೇ ಪ್ರಚಾರ ಮಾಡಿಕೊಳ್ಳದೇ ಇದ್ದರೆ ನಾವು ಬೆಳಗ್ಗೆ ಸಂಜೆ ಪ್ರಚಾರ ಮಾಡಿಕೊಳ್ಳಲು ಆಗುತ್ತದೆಯೇ? ಎಂದು ತಿರುಗೇಟು ನೀಡಿದರು.
ಚಿತ್ರರಂಗದವರಿಗೆ ಆಹ್ವಾನವನ್ನೇ ಮಾಡಿಲ್ಲ ಎನ್ನುವ ನಾಗಭರಣ ಅವರ ಹೇಳಿಕೆ ಕುರಿತು ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿ, ಆಹ್ವಾನ ಮಾಡದೇ ಇರಬಹುದು. ಈ ಬಗ್ಗೆ ನಮ್ಮ ಇಲಾಖೆಯ ತಪ್ಪಿದೆಯೋ ಯಾರ ತಪ್ಪಿದೆ ಗೊತ್ತಿಲ್ಲ. ಆದರೆ ಈ ಕಾರ್ಯಕ್ರಮ ಅವರದ್ದು. ನನಗೆ ಗೊತ್ತು ಟೀಕೆ ಮಾಡುತ್ತಾರೆ ಎಂದು. ಆದರೆ ಎಚ್ಚರಿಕೆ ಕೊಡಬೇಕಲ್ಲವೇ? ಟೀಕೆ ಮಾಡುವುದರಿಂದ ನನಗೆ ಬೇಸರವಿಲ್ಲ. ನಾವು ತಪ್ಪು ಮಾಡಿದ್ದರೇ ಸರಿ ಮಾಡಿಕೊಳ್ಳೋಣ, ಅವರು ತಪ್ಪು ಮಾಡಿದ್ದರೆ ಅವರು ಸರಿ ಮಾಡಿಕೊಳ್ಳಲಿ. ಸಿನಿಮಾ ಇಲ್ಲದೇ ಬದುಕುವ ಶಕ್ತಿ ನನಗಿದೆ. ಅವರು ಬೆಳೆಯಬೇಕು ಎಂದರೆ ಸರ್ಕಾರ ಹಾಗೂ ಜನ ಬೇಕು ಎಂದು ಖಡಕ್ ಉತ್ತರ ನೀಡಿದರು.
ಭಾಷಣದ ವೇಳೆ, ಸಿನಿಮಾ ನಟ, ನಟಿಯರಿಗೆ ಪರೋಕ್ಷವಾಗಿ ಎಚ್ಚರಿಕೆ ಕೊಟ್ಟರು. ನಿಮ್ಮ ಚಲನ ವಲನ, ವರ್ತನೆ ಎಲ್ಲವೂ ನನಗೆ ಅರ್ಥವಾಗುತ್ತದೆ. ನಾನು ಎಲ್ಲವನ್ನೂ ಗಮನಿಸುತ್ತಿರುತ್ತೇನೆ. ನಮ್ಮ ಸಿನಿಮಾ ರಂಗದ ನಟ, ನಟಿಯರ ಮೇಲೆ ನನಗೆ ಕೋಪ ಇದೆ ಎಂದು ನೇರವಾಗಿಯೇ ಹೇಳಿದರು. ಇನ್ನು ಈ ಕುರಿತಾಗಿ ಟಾಂಗ್ ಕೊಟ್ಟ ಪಬ್ಲಿಕ್ ಟಿವಿ ರಂಗಣ್ಣ ಹೆಚ್ಚಾಗಿ ಮಾತಾಡಿದ್ದಾರೆ. ಇವರಿಗೆಲ್ಲ ಮಾತಾಡೋವಾಗ ಜ್ಞಾನ ಇರಲ್ಲ ಪುಡಿ ರೌಡಿಯೇನು ಇವರು ಅಂತ ಕಿಡಿ ಕಾರಿದ್ದಾರೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.
Mon,10 Jul 2023
ಭಾರತೀಯ ಆಟಗಾರ ಕೆ ಎಲ್ ರಾಹುಲ್ ಅವರ ಸಂಭಾವನೆ ಎಷ್ಟು ಕೋಟಿ ಇರಬಹುದು
Sat,8 Jul 2023
ದಕ್ಷಿಣ ಕನ್ನಡದ ಕಂಬಳ ಕ್ರೀಡೆ ನೋಡುವುದೇ ಎಷ್ಟು ಚೆಂದ ಗೊತ್ತಾ
Fri,16 May 2025