ಮುಸ್ಲಿಂಮರು ಮಾಡೋದು ಸ್ಪಲ್ಪ ಕಡಿಮೆ ಮಾಡಿ ಎಂದ ಪ್ರತಾಪ್ ಸಿಂಹಗೆ ರಂಗಣ್ಣ ಪಾಠ

 | 
Nz
ಭಾರತ ಭಾವೈಕ್ಯತೆ ರಾಷ್ಟ್ರ ಅನ್ನೊದು ಮಾತಿಗೆ ಮಾತ್ರ ಮೈಸೂರಿನ ಉದಯಗಿರಿ ಠಾಣೆ ಮೇಲಿನ ಕಲ್ಲು ತೂರಾಟ ಪ್ರಕರಣ ವಿಚಾರದ ಬಗ್ಗೆ ಇತ್ತೀಚೆಗೆ ಸುದ್ದಿಗಾರರೊಂದಿಗೆ ಮಾತನಾಡುವಾಗ ಬಿಜೆಪಿ ಮಾಜಿ ಸಂಸದ ಪ್ರತಾಪ್ ಸಿಂಹ ಮುಸ್ಲಿಮರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದರು. ಇದರಿಂದಾಗಿ ಅವರ ವಿರುದ್ಧ ಎಫ್‌ಐಆರ್ ಕೂಡಾ ದಾಖಲಾಗಿತ್ತು.
ದೇಶ ಇಬ್ಬಾಗ ಆದಾಗ ಮುಸ್ಲಿಮರು ದೇಶ ಬಿಟ್ಟು ತೊಲಗಬೇಕಿತ್ತು. ಆದರೆ ಅವರು ಇಲ್ಲೇ ಉಳಿದುಕೊಂಡು ಮಕ್ಕಳನ್ನು ಹುಟ್ಟಿಸುವುದನ್ನು ಬಿಟ್ಟು ಬೇರೇನು ಮಾಡುತ್ತಿಲ್ಲ ಎಂದು ಆರೋಪಿಸಿದ್ದಾರೆ. ಪ್ರತಾಪ್‌ ಸಿಂಹರ ಈ ಹೇಳಿಕೆಗೆ ಮುಸ್ಲಿಂ ಸಮುದಾಯದಿಂದ ಭಾರೀ ವಿರೋಧ ವ್ಯಕ್ತವಾಗಿದೆ.ಅಲ್ಲದೆ ಉದಯಗಿರಿ ಘಟನೆಯಲ್ಲಿ ಭಾಗಿಯಾಗಿರುವ ಅಪರಾಧಿಗಳಿಗೆ ರಾಜ್ಯ ಸರ್ಕಾರ ರಕ್ಷಣೆ ನೀಡುತ್ತಿದೆ ಎಂದು ಮಾಜಿ ಸಂಸದ ಪ್ರತಾಪ್‌ ಸಿಂಹ ಅವರು ಆರೋಪಿಸಿದ್ದಾರೆ. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಪೊಲೀಸ್ ಠಾಣೆಯ ಮೇಲೆ ದಾಳಿ ನಡೆಸಿದ ಅಪರಾಧಿಗಳ ಬಂಧನದಲ್ಲಿ ವಿಳಂಬವಾಗುತ್ತಿದೆ.
 ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ವಿರುದ್ಧ ಎಫ್‌ಐಆರ್‌ ದಾಖಲಾಗಿದ್ದರೂ, ಯಾಕೆ ಆರೋಪಿಗಳನ್ನು ಬಂಧಿಸುತ್ತಿಲ್ಲ. ರಾಜ್ಯ ಸರ್ಕಾರಕ್ಕೆ ಕೇವಲ ಮುಸಲ್ಮಾನರನ್ನು ಓಲೈಕೆ ಮಾಡುವುದೇ ಒನ್‌ಲೈನ್‌ ಅಜೆಂಡಾವಾಗಿದೆ ಎಂದು ಕಿಡಿಕಾರಿದ್ದಾರೆ. ಇನ್ನು ಸಿಎಂ ಸಿದ್ದರಾಮಯ್ಯ ಅವರಿಗೆ ರಾಜ್ಯದ ಕಾನೂನು ಸುವ್ಯವಸ್ಥೆ ಬೇಕಾಗಿಲ್ಲ. ಅವರಿಗೆ ಮುಸಲ್ಮಾನರ ಮತ ಬೇಕು ಅಷ್ಟೇ. ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದಾಗೆಲ್ಲಾ ನಿಷ್ಠಾವಂತ ಪೊಲೀಸ್‌ ಅಧಿಕಾರಿಗಳು ಆತ್ಮಹತ್ಯೆ ಮಾಡಿಕೊಳ್ಳುತ್ತಾರೆ. 
ಅಲ್ಲದೇ ರಾಜ್ಯ ಸರ್ಕಾರವನ್ನು ತಾಲಿಬಾನಿ ಸರ್ಕಾರಕ್ಕೆ ಹೋಲಿಸಿ ಸಿಎಂ ಸಿದ್ದರಾಮಯ್ಯ ಅದರ ಮುಖ್ಯಸ್ಥರಾಗಿದ್ದಾರೆಂದು ಆರೋಪ ಮಾಡಿದರು.ಮುಸ್ಲಿಂರು ಬರೀ ಕೌರ್ಯ ಮಾಡುತ್ತಿದ್ದಾರೆ. ಅವರಿಗೆ ಶೌರ್ಯ ಎಂಬುದು ತಿಳಿದಿಲ್ಲ, ಹಿಂದೂಗಳ ಮೇಲೆ ಕಲ್ಲು ಹೊಡೆಯಲು ಕಾಂಗ್ರೆಸ್ ಸರ್ಕಾರ ಪುಂಡ ಮುಸ್ಲಿಂರಿಗೆ ಫ್ರೀ ಪರ್ಮಿಟ್ ನೀಡಿದೆ. ಮುಸಲ್ಮಾನರು ಪ್ರೊಟೆಕ್ಷನ್ ಕೇಳಿದರೆ ಸರ್ಕಾರ ನೀಡಲಿ ಯಾರು ಬೇಡವೆನ್ನುತ್ತಾರೆ. ಆದರೆ, ಅವರು ದುಷ್ಕೃತ್ಯಗಳನ್ನು ನಡೆಸಿದಾಗ ಬಂಧಿಸಿ ದಂಡಿಸುವುದನ್ನು ಬಿಟ್ಟು ಯಾವುದೇ ಕ್ರಮ ತೆಗೆದುಕೊಳ್ಳದಿದ್ದರೆ ಅವರನ್ನು ತಡೆಯುವುದು ಹೇಗೆ ಎಂದು ಪ್ರಶ್ನಿಸಿದರು (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.