ದರ್ಶನ್ ಮಾತಿಗೆ ತಿರುಗೇಟು ಕೊಟ್ಟ ಉಮಾಪತಿ ಗೌಡ, 'ನಾನು ಗುಮ್ಮಿದ್ರೆ ಇವ್ನೇ ಇರಲ್ಲ'
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಚಿತ್ರರಂಗಕ್ಕೆ ಎಂಟ್ರಿ ಕೊಟ್ಟು 25 ವರ್ಷಗಳಾಗುದೆ. ಈ ಸಂಭ್ರಮದ ಬೆನ್ನಲ್ಲೇ ಕಾಟೇರ ಸಿನಿಮಾ 50 ದಿನಗಳನ್ನು ಪೂರೈಸಿದೆ. ಸಕ್ಸಸ್ ಸಂಭ್ರಮದಲ್ಲಿ ನಿರ್ಮಾಪಕ ಉಮಾಪತಿಗೆ ದರ್ಶನ್ ಟಾಂಗ್ ಕೊಟ್ಟಿದ್ದಾರೆ. ತರುಣ್ ಸುಧೀರ್ ನಿರ್ದೇಶನದ ಕಾಟೇರ ಸಿನಿಮಾ 50 ದಿನಗಳನ್ನು ಪೂರೈಸಿ ಮುನ್ನುಗ್ಗುತ್ತಿದೆ. ಈ ವೇಳೆ, ಹಿರಿಯ ಶ್ರುತಿ, ನಾಯಕಿ ಆರಾಧನಾ ಸೇರಿದಂತೆ ತಂಡದ ಹಲವರಿಗೆ ಪ್ರಶಸ್ತಿ ನೀಡಿ ಚಿತ್ರತಂಡ ಗೌರವಿಸಿದೆ.
ಈ ವೇಳೆ, ಕಾಟೇರ ಟೈಟಲ್ ಕೊಟ್ಟಿದ್ದು ನಾನೇ ಎಂದ ನಿರ್ಮಾಪಕ ಉಮಾಪತಿಗೆ ದರ್ಶನ್ ಟಾಂಗ್ ಕೊಟ್ಟಿದ್ದಾರೆ. ಉಮಾಪತಿ ಆರೋಪಕ್ಕೆಲ್ಲಾ ದರ್ಶನ್ ಸ್ಪಷ್ಟನೆ ನೀಡಿದ್ದಾರೆ.ಅಯ್ಯೋ ತಗಡೆ ಅಂದು ರಾಬರ್ಟ್ ಕತೆ ಕೊಟ್ಟಿದ್ದೆ ನಾವು. ಆದರೂ ಬುದ್ಧಿ ಕಲಿತ್ತಿಲ್ಲ ಅಂದರೆ ಏನು ಹೇಳೋಣ. ಕಾಟೇರ ಎಂತಹ ಒಳ್ಳೆಯ ಕಥೆ ಯಾಕೆ ಈ ಸಿನಿಮಾ ಬಿಟ್ಟೆ ಎಂದು ದರ್ಶನ್ ಪ್ರಶ್ನಿಸಿದ್ದಾರೆ.
ಬಳಿಕ ಕಾಟೇರ ಟೈಟಲ್ ಹೇಳಿದ್ದು ಕೂಡ ನಾನು ಎಂದು ದರ್ಶನ್ ಮಾತನಾಡಿದ್ದಾರೆ. ಅಂದು ಚಿತ್ರದ ಟೈಟಲ್ ರಿಜಿಸ್ಟರ್ ಮಾಡಿಸುವಂತೆ ತರುಣ್ ಸುಧೀರ್‌ಗೆ ಹೇಳಿದ್ದೆ ಎಂದರು, ಬಳಿಕ ವೇದಿಕೆಯಲ್ಲಿ ಡೈರೆಕ್ಟರ್ ತರುಣ್ ಬಳಿಯೇ ದರ್ಶನ್ ಸ್ಪಷ್ಟನೆ ಕೊಡಿಸಿದ್ದರು.ಯಾಕಪ್ಪ, ಯಾವಾಗಲೂ ಬಂದು ಬಂದು ನಮ್ಮ ಕೈಯಲ್ಲೇ ಗುಮ್ಮಿಸಿಕೊಳ್ತಿಯಾ? ಗುಮ್ಮಿಸಿಕೊಳ್ಳಬೇಡ ಅಂತ ದರ್ಶನ್ ಟಾಂಗ್ ಕೊಟ್ಟಿದ್ದಾರೆ. ಎಲ್ಲೋ ಇದ್ಯಾ ಚೆನ್ನಾಗಿ ಇರು. ತಪ್ಪು ಇದು ಅಂತ ದರ್ಶನ್ ಹೇಳಿದರು.
ಅವರೆಲ್ಲಾ ದೊಡ್ಡವರು, ನಾವು ಚಿಕ್ಕವರು ಬಿಡಿ ಹೇಳಿಕೊಂಡು ಓಡಾಲಿ ಬಿಡಿ. ದರ್ಶನ್ ಅವರನ್ನು ಎದುರು ಹಾಕಿಕೊಂಡು ಬದುಕೋಕೆ ಆಗುತ್ತಾ? ಎಂದು ಉಮಾಪತಿ ಮಾತನಾಡಿದ್ದಾರೆ. ಕಾಟೇರ ರಿಜಿಸ್ಟರ್ ಮಾಡಿದ್ದೆ ನಾನು. ‘ಮದಗಜ’ ಸಮಯದಲ್ಲಿ ಎಲ್ಲರೂ ನನ್ನ ಮಿಸ್ ಲೀಡ್ ಮಾಡಿಬಿಟ್ಟರು. ಸಮಯ ಬಂದಾಗ ಎಲ್ಲದ್ದಕ್ಕೂ ನಾನು ಉತ್ತರ ಕೊಡುತ್ತೇನೆ. ನಾನು ಒಂದು ಜವಾಬ್ದಾರಿಯುತ ಸಮುದಾಯದ ನಾಯಕ. ನನ್ನನ್ನು ಇಲ್ಲಿಯವರೆಗೂ ಜನ ಬೆಳೆಸಿದ್ದಾರೆ ಎಂದು ಉಮಾಪತಿ ಮಾತನಾಡಿದ್ದಾರೆ.
(ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkarunadu.tech ವಾಹಿನಿಗೆ ಬೆಂಬಲಿಸಿ)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕರುನಾಡು ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.