ಸೋನು ಗೌಡಗೂ ರೇಣುಕಾಸ್ವಾಮಿ ಅ ಶ್ಲೀಲ ವಿಡಿಯೋ; ಸಿ ಡಿದೆದ್ದ ಕನ್ನಡಿಗರು

 | 
H

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಈಗಾಗಲೇ ಎ1 ಆರೋಪಿ ಪವಿತ್ರಾ ಗೌಡ, ಎ2 ಆರೋಪಿ ನಟ ದರ್ಶನ್‌ ಹಾಗೂ ಪಟಾಲಂ ಗ್ಯಾಂಗ್ ಜೈಲು ಪಾಲಾಗಿದೆ. ಇನ್ನು ಪ್ರಕರಣದ ಬಗ್ಗೆ ಕನ್ನಡ ಚಿತ್ರರಂಗದ ಹಲವರು ಪ್ರತಿಕ್ರಿಯಿಸಿದ್ದು, ಇನ್ನು ಕೆಲವರು ಯಾವುದೇ ಪ್ರತಿಕ್ರಿಯೆ ನೀಡದೇ ಹಿಂದೆ ಸರಿಯುತ್ತಿದ್ದಾರೆ. ಇದೀಗ ಬಿಗ್‌ ಬಾಸ್‌ ಸ್ಪರ್ಧಿ ಸೋನು ಗೌಡ ಅವರು ಪ್ರತಿಕ್ರಿಯೆ ನೀಡಿದ್ದಾರೆ.

ದರ್ಶನ್ ಗೆಳತಿ, ನಟಿ ಪವಿತ್ರಾ ಗೌಡಗೆ ಕೆಟ್ಟದಾಗಿ ಮೆಸೇಜ್ ಮಾಡಿದ್ದಕ್ಕೆ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ನಡೆದಿದೆ ಎಂಬುದು ಪೊಲೀಸರ ಪ್ರಾಥಮಿಕ ತನಿಖೆಯಿಂದ ಮಾಹಿತಿ ಹೊರಬಿದ್ದಿದೆ. ಕೊಲೆ ಕೇಸ್ ನಲ್ಲಿ ನಟ ದರ್ಶನ್, ಪವಿತ್ರಾ ಸೇರಿದಂತೆ 17 ಮಂದಿ ಪರಪ್ಪನ ಅಗ್ರಹಾರ ಜೈಲು ಸೇರಿದ್ದಾರೆ. ನಟ ದರ್ಶನ್ ಜೈಲಿಗೆ ಹೋದ ಬಳಿಕ ಕೊಲೆಯಾದ ರೇಣುಕಾಸ್ವಾಮಿ ನನಗೂ ಕೆಟ್ಟದಾಗಿ ಮೆಸೇಜ್ ಮಾಡಿದ್ದ ಅಂತ ಸೋನು ಗೌಡ ಹೇಳಿಕೊಂಡಿದ್ದಾರೆ.

ನೆಚ್ಚಿನ ನಟ ದರ್ಶನ್ ಜೈಲು ಸೇರಿದ ಬಗ್ಗೆ ಕೂಡ ಸೋನು ಗೌಡ ಬೇಸರ ಹೊರಹಾಕಿದ್ದಾರೆ. ಅಷ್ಟೇ ಅಲ್ಲದೇ ರೇಣುಕಾಸ್ವಾಮಿ ಕ್ರಿಯೇಟ್ ಮಾಡಿದ್ದಾನೆ ಎನ್ನಲಾಗಿರುವ ಫೇಕ್ ಅಕೌಂಟ್ ನಿಂದ ನನಗೂ ಕೂಡ ಕೆಟ್ಟದಾಗಿ ಮೆಸೇಜ್ ಬಂದಿದೆ ಅಂತ ತನ್ನದೇ ಯ್ಯೂಟೂಬ್ ಚಾನೆಲ್ ನಲ್ಲಿ ಸೋನು ಗೌಡ ಹೇಳಿಕೊಂಡಿದ್ದಾರೆ. ಇತ್ತೀಚಿಗೆ ಯ್ಯೂಟೂಬ್ ನಲ್ಲಿ ನಾನು ಕೂಡ ಒಂದು ವಿಡಿಯೋ ನೋಡಿದೆ. ಅದೇ ಅಕೌಂಟ್ನಿಂದ ಸಾಕಷ್ಟು ಹುಡುಗಿಯರಿಗೆ ಈತ ಕೆಟ್ಟ ಕೆಟ್ಟದಾಗಿ ಮೆಸೇಜ್ ಮಾಡಿದ್ದಾನೆ.

ಹಾಗಾಗಿ ನಾನೂ ನನ್ನ ಫೋನ್ ನಲ್ಲಿ ಚೆಕ್ ಮಾಡಿದೆ. ಆಗ ಆ ಯಪ್ಪ ನನಗೂ ಮೆಸೇಜ್ ಮಾಡಿದ್ದಾರೆ ಅನ್ನೋದು ಗೊತ್ತಾಯ್ತು ಎಂದು ಸೋನು ಗೌಡ ಹೇಳಿದ್ದಾರೆ. ಆತ ತಪ್ಪು ಮಾಡಿದ್ದಾನೆ ಅಂತ ಅವರ ಕುಟುಂಬಕ್ಕೆ ನಾನು ಏನು ಹೇಳೋದಿಲ್ಲ. ನನಗೂ ಕೆಟ್ಟದಾಗಿ ಅನೇಕರು ಕಮೆಂಟ್ ಮಾಡುತ್ತಾರೆ. ನಿಮ್ಮ ಮನೆ ಹೆಣ್ಣು ಮಕ್ಕಳಿಗೆ ಕಮೆಂಟ್ ಮಾಡಿದ್ರೆ ಸುಮ್ಮನೆ ಇರ್ತೀರಾ? ಎಂದು ಪ್ರಶ್ನೆ ಮಾಡಿದ್ದಾರೆ.
(ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.