ಕಾಂತಾರದಿಂದ ಸಪ್ತಮಿ ಗೌಡನನ್ನು ಹೊರದಬ್ಬಿದ ರಿಷಬ್, ರ ಹೆಸರಿನ ನಾಯಕಿ ಆಯ್ಕೆ

 | 
ಕ್

      2022ರಲ್ಲಿ ಬಿಡುಗಡೆಯಾಗಿ ವಿಶ್ವ ಮಟ್ಟದಲ್ಲಿ ಭಾರೀ ಯಶಸ್ಸು ಮತ್ತು ಪ್ರಶಂಸೆ ಗಳಿಸಿದ ʻಕಾಂತಾರʼ ಚಿತ್ರ. ಕಾಂತಾರ ಸಿನಿಮಾದಲ್ಲಿ ನಟಿ ಸಪ್ತಮಿ ಗೌಡ ಅವರು ನಟಿಸಿದ್ದರು. . ಈ ಚಿತ್ರ ಸೂಪರ್ ಹಿಟ್ ಆಯಿತು. ಈಗ 'ಕಾಂತಾರ: ಚಾಪ್ಟರ್ 1' ಸಿನಿಮಾ ಸೆಟ್ಟೇರುತ್ತಿದೆ. ʻಕಾಂತಾರ ಚಾಪ್ಟರ್‌ 1' ಚಿತ್ರವು ಇದೇ ವರ್ಷ ಅಕ್ಟೋಬರ್‌ 2ರಂದು ವಿಶ್ವದಾದ್ಯಂತ ಬಿಡುಗಡೆಯಾಗಲಿದೆ. ರಿಷಬ್ ಶೆಟ್ಟಿ ನಟಿಸೋದು ಖಚಿತವಾಗಿದೆ.

      'ಕಾಂತಾರ'ದಲ್ಲಿ ಲೀಲಾ ಹೆಸರಿನ ಪಾತ್ರ ಮಾಡಿದ್ದ ಸಪ್ತಮಿ ಗೌಡ ಅವರು 'ಕಾಂತಾರ: ಚಾಪ್ಟರ್ 1'ನಲ್ಲಿ ನಟಿಸುತ್ತಾರೆ ಎಂದು ಅಭಿಮಾನಿಗಳು ನಿರೀಕ್ಷೆ ಇಟ್ಟುಕೊಂಡಿದ್ದರು. ಆದರೆ, ಆ ನಿರೀಕ್ಷೆ ಹುಸಿಯಾಗಿದ್ದು, ಇದಕ್ಕೆ ಸಪ್ತಮಿ ಗೌಡ ಅವರೇ ಸ್ಪಷ್ಟನೆ ನೀಡಿದ್ದಾರೆ.
     ಕಾಂತಾರಾ: ಚಾಪ್ಟರ್ 1' ಸಿನಿಮಾದಲ್ಲಿ ನಟಿಸಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ನಾನು ನಟಿಸುತ್ತಿಲ್ಲ. ಆ ಪಾತ್ರಕ್ಕೆ ಬೇರೆಯವರು ಬಂದಿದ್ದಾರೆ. ಈಗ ಸಿದ್ಧವಾಗುತ್ತಿರುವುದು ಪ್ರೀಕ್ವೆಲ್. ಆ ಪಾತ್ರವೇ ಇಲ್ಲ ಎಂದಾಗ ನಾನು ನಟಿಸೋದು ಹೇಗೆ ಎಂದು ಸಪ್ತಮಿ ಗೌಡ ಕೇಳಿದ್ದಾರೆ .  ರ
     ನನಗೆ ಏನೇ ಸಿಕ್ಕಿದ್ದರೂ ಅದು ಕಾಂತಾರದಿಂದ. ಸಿನಿಮಾ ರಿಲೀಸ್ ಆಗಿ ಎರಡು ವರ್ಷ ಕಳೆದರೂ ಈಗಲೂ ಅದರ ಬಗ್ಗೆ ಎಲ್ಲರೂ ಮಾತನಾಡುತ್ತಿದ್ದಾರೆ ಎಂದು ನಟಿ ಸಪ್ತಮಿ ಗೌಡ ಅವರು ಹೇಳಿದ್ದರು. ಇದೀಗ ಹೊಂಬಾಳೆ ಫಿಲ್ಮ್ಸ್ ನಿರ್ಮಾಣದ, ರಿಷಬ್ ಶೆಟ್ಟಿ ನಿರ್ದೇಶಿಸಿರುವ ಬಹುನಿರೀಕ್ಷಿತ ಕಾಂತಾರ ಚಾಪ್ಟರ್ 1 ಚಿತ್ರದಲ್ಲಿ ಕನಕವತಿ ಪಾತ್ರದ ಪೋಸ್ಟರ್ ರಿಲೀಸ್ ಆಗಿದೆ.
     ವರಮಹಾಲಕ್ಷ್ಮಿ ಹಬ್ಬದ ಈ ಶುಭದಿನದಂದು, ಚಿತ್ರತಂಡವು ಅವರ ಮೊದಲ ನೋಟವನ್ನು ಅನಾವರಣಗೊಳಿಸಿದೆ. ಈ ಹಿಂದೆ ನಾಯಕ ನಾಯಕ ನಟ ರಿಷಬ್ ಶೆಟ್ಟಿ ಅವರ ಹುಟ್ಟುಹಬ್ಬದಂದು ಬಿಡುಗಡೆಯಾಗಿದ್ದ ಅವರ ಫಸ್ಟ್‌ಲುಕ್ ಮತ್ತು ನಂತರ ಬಂದ ಶೂಟಿಂಗ್ ಮುಕ್ತಾಯದ ವೀಡಿಯೋಗಳು ಈಗಾಗಲೇ ಭಾರೀ ಕುತೂಹಲ ಮೂಡಿಸಿವೆ. 
     ಇದೀಗ ಇಂದು ವರಮಹಾಲಕ್ಷ್ಮಿ ಹಬ್ಬದ ದಿನದಂದು 'ಕನಕವತಿ'ಯ ಪಾತ್ರದ ಪರಿಚಯದಲ್ಲಿ ನಟಿ ರುಕ್ಮಿಣಿ ವಸಂತ್‌ ಅವರು ಕಾಣಿಸಿಕೊಂಡಿದ್ದಾರೆ. ಅಲ್ಲದೇ ಚಿತ್ರದ ಕುರಿತು ಇನ್ನಷ್ಟು ನಿರೀಕ್ಷೆ ಹೆಚ್ಚಾಗುವಂತೆ ಮಾಡಿದೆ.