ಮೋದಿಗೆ ಸ್ಪೆಷಲ್ ಆರ್ಡರ್ ಕೊಟ್ಟ ರೂಪೇಶ್ ಶೆಟ್ಟಿ, ಒಬ್ಬರನ್ನು ಬಿಡಬೇಡಿ ಎಂದ ನಟ
Apr 24, 2025, 08:51 IST
|

ಪ್ರವಾಸಿಗರ ಮೇಲೆ ನಡೆದ ಈ ದಾಳಿಯನ್ನು ಜಗತ್ತಿನ ಮುಖಂಡರು ಖಂಡಿಸಿದ್ದಾರೆ. ಟ್ರಂಪ್ ಸೇರಿದಂತೆ ಶಕ್ತಿಶಾಲಿ ದೇಶದ ಮುಖಂಡರು ಆಕ್ರೋಶವನ್ನು ಹೊರ ಹಾಕಿದ್ದಾರೆ. ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ, ರಾಹುಲ್ ಗಾಂಧಿ, ಸಿಎಂ ಸಿದ್ಧರಾಮಯ್ಯ ಕೂಡ ಈ ಕೃತ್ಯವನ್ನು ಖಂಡಿಸಿದ್ದು, ಮೃತರ ಕುಟುಂಬಕ್ಕೆ ಸಂತಾಪವನ್ನು ಸೂಚಿಸಿದ್ದಾರೆ. ಹಾಗೇ ಸಿನಿಮಾ ತಾರೆಯರು ಕೂಡ ವಿರೋಧವನ್ನು ವ್ಯಕ್ತಪಡಿಸುತ್ತಿದ್ದಾರೆ.
ಬಾಲಿವುಡ್ ನಟ ಅಕ್ಷಯ್ ಕುಮಾರ್, ರವೀನಾ ಟಂಡನ್, ಸೋನು ಸೂದ್, ವಿವೇಕ್ ಓಬೆರಾಯ್ ಸೇರಿದಂತೆ ಹಲವು ಸ್ಟಾರ್‌ಗಳು ತಮ್ಮ ಸೋಶಿಯಲ್ ಮೀಡಿಯಾ ಪ್ಲಾಟ್‌ಫಾರ್ಮ್ ಬಳಿಕ ವಿರೋಧ ವ್ಯಕ್ತಪಡಿಸಿದ್ದರು. ಹಾಗೇ ಸ್ಯಾಂಡಲ್‌ವುಡ್ ಕಿಂಗ್ ಶಿವರಾಜ್‌ಕುಮಾರ್ ಕೂಡ ಪಹಲ್ಗಾಮ್ ಉಗ್ರರ ದಾಳಿಯನ್ನು ಖಂಡಿಸಿ ಪೋಸ್ಟ್ ಮಾಡಿದ್ದಾರೆಂದು ಅವರ ಫ್ಯಾನ್ ಫೇಜ್ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದೆ.
ಇನ್ನು ಈ ಕುರಿತಾಗಿ ಮಾತನಾಡಿದ ಮಾಜಿ ಬಿಗ್ಬಾಸ್ ವಿನ್ನರ್ ಹಾಗೂ ನಟ ರೂಪೇಶ್ ಶೆಟ್ಟಿ ದಾಳಿ ನಡೆಸಿದ ಒಬ್ಬರನ್ನು ಕೂಡ ಬಿಡ್ಬೇಡಿ. ಅವರು ಮಾಡಿರೋದು ಕ್ಷಮಿಸಲಾಗದ ಕೃತ್ಯ ಇವರನ್ನೆಲ್ಲ ಸುಮ್ನೆ ಬಿಟ್ರೆ ಮತ್ತೆ ಇಂತಹ ಘಟನೆ ನಡೆಯುತ್ತಲೇ ಇರುತ್ತವೆ. ಹಾಗಾಗಿ ಅವರ ತಪ್ಪಿಗೆ ಕಠಿನ ಶಿಕ್ಷೆ ನೀಡಿ. ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ನಡೆದಿರುವ ಉಗ್ರರ ದಾಳಿಯನ್ನ ತೀವ್ರವಾಗಿ ಖಂಡಿಸುತ್ತೇನೆ. ಶಾಂತಿ ಸೌಹಾರ್ದದ ಭಾರತದಲ್ಲಿ ಇಂತಹ ಕೃತ್ಯಗಳು ಮರುಕಳಿಸದಿರಲಿ.
ಹಾಗೆಯೇ ಈ ಕೃತ್ಯ ಎಸಗಿದವರಿಗೆ ಕಠಿಣ ಶಿಕ್ಷೆ ಆಗಲಿ ಮತ್ತು ನಮ್ಮನ್ನು ಅಗಲಿದ ಎಲ್ಲಾ ಭಾರತೀಯರಿಗೆ ಭಾವಪೂರ್ಣ ಶ್ರದ್ಧಾಂಜಲಿ ಕೋರುತ್ತಾ ಎಲ್ಲಾ ಕುಟುಂಬಸ್ಥರಿಗೆ ಈ ದುಃಖವನ್ನು ಭರಿಸುವ ಶಕ್ತಿ ಹಾಗೂ ಧೈರ್ಯವನ್ನು ದೇವರು ನೀಡಲಿ. ಈ ಪೈಶಾಚಿಕ ಕೃತ್ಯ ಎಸಗುವವರ ವಿರುದ್ಧದ ಸರ್ಕಾರದ ಹೋರಾಟಕ್ಕೆ ಸದಾ ಬೆಂಬಲವಿರುತ್ತದೆ ಎಂದಿದ್ದಾರೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkarunadu.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕರುನಾಡು ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.
Mon,10 Jul 2023
ಭಾರತೀಯ ಆಟಗಾರ ಕೆ ಎಲ್ ರಾಹುಲ್ ಅವರ ಸಂಭಾವನೆ ಎಷ್ಟು ಕೋಟಿ ಇರಬಹುದು
Sat,8 Jul 2023