ಸದಾನಂದರ ಹಳೆ ವಿಡಿಯೋ ಮತ್ತೆ ಲೀ.ಕ್; ಬಿಜೆಪಿ ಒಳಯದಲ್ಲಿ ಹೆಚ್ಚಾಯಿತಿ ಸದ್ದು

 | 
Uuu

ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಕೈತಪ್ಪಿದ ಕಾರಣದಿಂದ ಅಸಮಾಧಾನಗೊಂಡಿರುವ ಮಾಜಿ ಮುಖ್ಯಮಂತ್ರಿ ಡಿವಿ ‌ಸದಾನಂದ ಗೌಡ ಮಂಗಳವಾರ ಕರೆದಿದ್ದ ಪತ್ರಿಕಾಗೋಷ್ಠಿಯನ್ನು ದಿಢೀರ್‌ ರದ್ದುಗೊಳಿಸಿದ್ದಾರೆ. ಈ ಮಾಧ್ಯಮಗೋಷ್ಠಿಯಲ್ಲಿ ಎಲ್ಲಾ ವಿಚಾರಗಳನ್ನೂ ಬಹಿರಂಗಪಡಿಸುವುದಾಗಿ ಅವರು ಹೇಳಿದ್ದರು. ಆದರೆ, ಬಿಎಸ್‌ ಯಡಿಯೂರಪ್ಪ ಹಾಗೂ ಬಿವೈ ವಿಜಯೇಂದ್ರ ದಿಲ್ಲಿಗೆ ತೆರಳುತ್ತಿದ್ದಂತೆ ಪತ್ರಿಕಾಗೋಷ್ಠಿಯನ್ನು ರದ್ದು ಮಾಡಿರುವುದು ಕುತೂಹಲ ಹುಟ್ಟಿಸಿದೆ.

ಡಿವಿಎಸ್ ಮಂಗಳವಾರ ತಮ್ಮ ನಿವಾಸದಲ್ಲಿ ಪತ್ರಿಕಾಗೋಷ್ಠಿಯನ್ನು ಇಟ್ಟುಕೊಂಡಿದ್ದರು. ಎಲ್ಲ ಮಾಧ್ಯಮಗಳಿಗೂ ಇದರಲ್ಲಿ ಭಾಗವಹಿಸುವಂತೆ ಸಂದೇಶವನ್ನೂ ನೀಡಿದ್ದರು. ಇದರಲ್ಲಿ ಅವರು ತಮ್ಮ ಮುಂದಿನ ನಿಲುವನ್ನು ವ್ಯಕ್ತಪಡಿಸುವವರಿದ್ದರು. ಆದರೆ, ಇದೀಗ ಪತ್ರಿಕಾಗೋಷ್ಠಿಯನ್ನು ದಿಢೀರಾಗಿ ಮುಂದೂಡಿದ್ದಾರೆ. ಅಸಮಾಧಾನಗೊಂಡಿದ್ದ ಹಿನ್ನೆಲೆಯಲ್ಲಿ ಅವರಿಗೆ ವರಿಷ್ಠರಿಂದ ಸಂದೇಶವೇನಾದರೂ ಬಂದಿದೆಯಾ ಎಂಬ ಪ್ರಶ್ನೆ ಹುಟ್ಟಿಕೊಂಡಿದೆ.

ಇನ್ನು ಕೆಲವು ಮೂಲಗಳ ಪ್ರಕಾರ ಅವರ ಹಳೇ ವೀಡಿಯೊ ಒಂದು ವೈರಲ್ ಆಗಿದ್ದು ಬಿಜೆಪಿಯಲ್ಲಿ ಬಹಳಷ್ಟು ವರ್ಷ ಕಾರ್ಯ ನಿರ್ವಹಿಸಿದ್ದೇನೆ ಬಿಜೆಪಿ ಎಲ್ಲವನ್ನೂ ನೀಡಿದೆ ಮತ್ತೆ ಚುನಾವಣೆಯಲ್ಲಿ ಸ್ಪರ್ಧಿಸುವ ಆಸೆಯಿಲ್ಲ ಎಂದು ಹಿಂದೊಮ್ಮೆ ಹೇಳಿದ ವೀಡಿಯೊ ಒಂದು ವೈರಲ್ ಆಗ್ತಿದ್ದು ಅದು ಅವರ ಮನಸ್ಸಿಗೆ ಬೇಸರ ಮೂಡಿಸಿದೆ.

ಹಿಂದೊಮ್ಮೆ ಬೇಡ ನಾನು ಟಿಕೆಟ್ ಬಯಸುವುದಿಲ್ಲ ಹೇಳಿ ಇದೀಗ ಕಾಂಗ್ರೆಸ್ ಪಕ್ಷಕ್ಕೆ ಹೊಗುವ. ಕುರಿತು ಯೋಚಿಸುವುದಿಲ್ಲ. ಸದಾನಂದ ಗೌಡ ಮಾಜಿ ಮುಖ್ಯಮಂತ್ರಿಯಾಗಿದ್ದು, ಈಗಾಗಲೇ ಮತ್ತೋರ್ವ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ‌ ಅವರಿಗೆ ಟಿಕೆಟ್ ನೀಡಲಾಗಿದೆ. ಇನ್ನೋರ್ವ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರಿಗೂ ಟಿಕೆಟ್ ಬಹುತೇಕ ಖಚಿತವಾಗಿದೆ. ಇಂತಹ ಸಂದರ್ಭದಲ್ಲಿ ತಮಗೆ ಟಿಕೆಟ್ ಕೈತಪ್ಪಿಸಿರುವುದು ಡಿವಿಎಸ್‌ ಅಸಮಾಧಾನಕ್ಕೆ ಕಾರಣವಾಗಿತ್ತು. ಆದರೆ ಈಗಿಲ್ಲ ಪಕ್ಷದ ನಾಯಕರ ನಿಲುವಿನಂತೆ ನಡೆಯುತ್ತೇನೆ ಎಂದಿದ್ದಾರೆ.
( ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ.)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.