ವರ್ತೂರ್ ಸಂತುಗೆ ತಾಯಿ ಮೇಲೆ ಎಷ್ಟು ಪ್ರೀತಿ ನೋಡಿ, 'ಅಮ್ಮ ಎಂದರೆ ಏನೋ ಹರುಷವೂ' ಎಂದ ವರ್ತೂರ್

 | 
Hedid

ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗಲಿರುವ ನನ್ನಮ್ಮ ಸೂಪರ್ ಸ್ಟಾರ್ ಮತ್ತೆ ಬಂದಿದೆ. ಮಕ್ಕಳ ಮುದ್ದು ಮಾತುಗಳು, ಅವರ ಆಟಗಳು ನೋಡುಗರನ್ನು ರಂಜಿಸುತ್ತಲೇ ಬರುತ್ತಿದೆ. ಎರಡು ಸೀಸನ್‌ ಪ್ರಸಾರವಾದ ಬಳಿಕ ಈಗ ಮೂರನೇ ಸೀಸನ್‌ ಶುರುವಾಗಿದೆ. ಕಲರ್ಸ್‌ ಕನ್ನಡ ಸೀರಿಯಲ್‌ ಸಂತೆ, ಕಾಮಿಡಿ ಶೋಗಳು, ಸೇರಿದಂತೆ ಅನೇಕ ಕಾರ್ಯಕ್ರಮಗಳಿಗೆ ಬಿಗ್‌ ಬಾಸ್‌ ಸೀಸನ್‌ 10ರ ಸ್ಪರ್ಧಿಗಳು ಅತಿಥಿಗಳಾಗಿ ಭಾಗವಹಿಸುತ್ತಿದ್ದಾರೆ. 

ಇದೀಗ ನನ್ನಮ್ಮ ಸೂಪರ್ ಸ್ಟಾರ್ ವೇದಿಕೆಗೆ ವರ್ತೂರ್‌ ಸಂತೋಷ್‌ ಹಾಗೂ ಅವರ ತಾಯಿ ಬಂದಿದ್ದರು. ಇದೇ ವೇಳೆ ವೇದಿಕೆಯಲ್ಲಿ ವರ್ತೂರ್‌ ಅವರು ತಾಯಿಗೆ ಪಾದಪೂಜೆ ಮಾಡಿ ಕ್ಷಮೆ ಕೋರಿದ್ದಾರೆ. ವರ್ತೂರ್‌ ಅವರು ಮಾತನಾಡಿ ನಮ್ಮ ತಾಯಿ ಇರಲಿಲ್ಲ ಅಂದರೆ ವರ್ತೂರ್‌ ಸಂತೋಷ್‌ ಇವತ್ತು ಇರುತ್ತಿರಲ್ಲ. ಸಣ್ಣ ವಯಸ್ಸಿನಲ್ಲಿಯೇ ನನ್ನ ತಂದೆ ತೀರಿಕೊಂಡಾಗ, ತನ್ನ ಜೀವನವನ್ನೇ ಮುಡುಪಾಗಿಟ್ಟಿದ್ದಾರೆ. ಅದನ್ನು ಪದಗಳಲ್ಲಿ ಹೇಳಲು ಸಾಧ್ಯವಿಲ್ಲ. ತಂದೆ ತಾಯಿ ದೇವರುಗಳು. 

ದೇವರುಗಳನ್ನು ಬೇರೆಯವರು ಸೃಷ್ಟಿ ಮಾಡಲು ಆಗುವುದಿಲ್ಲ. ನಮ್ಮ ತಾಯಿಗೆ ನನ್ನ ಕಡೆಯಿಂದ ತುಂಬಾ ನೋವಾಗಿದೆ. ನನ್ನ ಕ್ಷಮಿಸಮ್ಮಾ ಎಂದು ಭಾವುಕರಾದರು.ಮೊದಲ ಸೀಸನ್‍ನಲ್ಲಿ ವನ್ಷಿಕಾ ಮತ್ತು ಯಶಸ್ವಿನಿ ಭಾಗವಹಿಸಿದ್ದರು. ವಿಜೇತರಾಗಿ ಹೊರಹೊಮ್ಮಿದ್ದರು. ಎರಡನೇ ಸೀಸನ್‌ನಲ್ಲಿ ಗ್ರಾಮೀಣ ಭಾಗದ ಪ್ರತಿಭೆಗೆ ಅಂದರೆ ಚೈತ್ರಾ ಮತ್ತು ಅವರ ಅವಳಿ ಮಕ್ಕಳು ಚಿರಂತ್-ಚಿನ್ಮಯ್ ವಿಜೇತರಾಗಿದ್ದರು.

ಎರಡನೇ ಸೀಸನ್‌ನಲ್ಲಿ ನಮ್ಮಮ್ಮ ಸೂಪರ್‌ ಸ್ಟಾರ್ ಕಾರ್ಯಕ್ರಮದಲ್ಲಿ ಪ್ರತಿಭಾವಂತ ಅಮ್ಮ ಮಕ್ಕಳ ಜತೆಗೆ ಕಿರುತೆರೆಯ ಚಿನಕುರುಳಿ ಎಂತಲೇ ಖ್ಯಾತಿ ಪಡೆದ ವನ್ಷಿಕಾ ನಿರೂಪಕಿಯಾಗಿ ಪ್ರೇಕ್ಷಕರ ಗಮನ ಸೆಳೆದಿದ್ದರು. ಅಷ್ಟೇ ಅಲ್ಲದೇ ಎರಡನೇ ಸೀಸನ್‌ನಲ್ಲಿ ನಮ್ಮಮ್ಮ ಸೂಪರ್ ಸ್ಟಾರ್ ಶೋ ಬಹಳ ವಿಶೇಷವಾಗಿತ್ತು. ಏಕೆಂದರೆ ಶೋನಲ್ಲಿ ಸಾಮಾನ್ಯರಿಗೂ ಅವಕಾಶ ನೀಡಲಾಗಿತ್ತು.

ಕಳೆದ ಸೀಸನ್‌ನಂತೆ ಈ ಬಾರಿಯೂ ಸೃಜನ್ ಲೋಕೇಶ್, ತಾರಾ ಅನುರಾಧಾ, ಅನುಪ್ರಭಾಕರ್ ತೀರ್ಪುಗಾರರಾಗಿ ಕಾಣಿಸಿಕೊಳ್ಳಲಿದ್ದಾರೆ. ಹೊಸ ಸ್ಪರ್ಧಿಗಳ ಜತೆಗೆ ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ‘ಭಾಗ್ಯಲಕ್ಷ್ಮಿ’ ಧಾರಾವಾಹಿಯಲ್ಲಿ ನಾಯಕಿ ಭಾಗ್ಯಳಾಗಿ ನಟಿಸುತ್ತಿರುವ ಸುಷ್ಮಾ ರಾವ್ ‘ನನ್ನಮ್ಮ ಸೂಪರ್ ಸ್ಟಾರ್’ನ ನಿರೂಪಕಿಯಾಗಿ ದ್ದಾರೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.