ಧಾರಾವಾಹಿ ನಟ ಶ್ರೀಧರ್ ಕೊನೆಯ ಆಡಿಯೋ ರೆಕಾರ್ಡಿಂಗ್, ಹಣದ ಸಹಾಯಕ್ಕೆ ಮನವಿ ಮಾಡಿದ ಕಲಾವಿದ
May 1, 2025, 12:59 IST
|

ನಟ ಶ್ರೀಧರ್ ಅವರು ವಧು ಸೀರಿಯಲ್‌ನಲ್ಲಿ ನಟಿಸುತ್ತಿದ್ದರು. ಪಾರು ಸೀರಿಯಲ್‌ನಲ್ಲಿ ನಾಯಕಿಯ ಚಿಕ್ಕಪ್ಪನ ಪಾತ್ರದಲ್ಲಿ ನಟಿಸುತ್ತಿದ್ದರು. ಅನಾರೋಗ್ಯದ ಕಾರಣದಿಂದ ಸೀರಿಯಲ್‌ನಿಂದ ಹೊರಬಂದಿದ್ದರು. ಇವರು ನಿರ್ವಹಿಸುತ್ತಿದ್ದ ಪಾತ್ರಕ್ಕೆ ಬೇರೆ ನಟನ ಎಂಟ್ರಿಯಾಗಿತ್ತು. ಇದೀಗ ಇವರು ಅನಾರೋಗ್ಯದಲ್ಲಿ ಗುರುತೇ ಸಿಗದಂತೆ ಬದಲಾಗಿರುವ ಫೋಟೋ ಅಭಿಮಾನಿಗಳ ಅಚ್ಚರಿಗೆ ಕಾರಣವಾಗಿದೆ.
ಇನ್‌ಫೆಕ್ಷನ್‌ನಿಂದಾಗಿ ನಟ ಶ್ರೀಧರ್ ತೀವ್ರ ಅಸ್ವಸ್ಥರಾಗಿದ್ದಾರೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅವರು ಆರ್ಥಿಕ ಸಹಾಯಕ್ಕಾಗಿ ಮನವಿ ಮಾಡಿದ್ದಾರೆ. ಸದ್ಯ ನಟನನ್ನು ಅವರ ತಾಯಿ ನೋಡಿಕೊಳ್ಳುತ್ತಿದ್ದಾರೆ. ಪ್ರತಿ ದಿನ ಚಿಕಿತ್ಸೆಗೆ 10ರಿಂದ 15 ಸಾವಿರ ರೂ. ಖರ್ಚಾಗುತ್ತಿದೆ. ಹಾಗಾಗಿ ಹೆಚ್ಚಿನ ಹಣ ಸಹಾಯಕ್ಕಾಗಿ ಅವರ ತಾಯಿ ಕೈ ಮುಗಿದು ಬೇಡಿಕೊಂಡಿದ್ದಾರೆ. ಈಗಾಗಲೇ ಕೆಲ ಧಾರವಾಹಿ ನಟ ನಟಿಯರು ಹಣದ ಸಹಾಯ ನೀಡಿದ್ದು ಕೂಡಾ ಸಾಲುತ್ತಿಲ್ಲ.
ದಯಮಾಡಿ ತಾವೆಲ್ಲರೂ ಶ್ರೀಧರನಿಗೆ ಕೈಲಾದ ಹಣದ ಸಹಾಯ ಮಾಡಬೇಕೆಂದು ಅಂಗಲಾಚಿ ಬೇಡಿಕೊಳ್ಳುತ್ತಿದ್ದೇನೆ. ಶ್ರೀಧರನನ್ನು ಕಾಪಾಡಿ.. ನನ್ನನ್ನು ಬದುಕಿಸಲು ಪ್ರಯತ್ನಿಸಿ.. ಕೈಲಾದಷ್ಟು ಹಣದ ಸಹಾಯ ಮಾಡಿ ಎಂದು ಶ್ರೀಧರ್ ಹೇಳಿರುವುದನ್ನ ನಟಿ ಸಪ್ನಾ ದೀಕ್ಷಿತ್ ತಮ್ಮ ಇನ್ಸ್ಟಾಗ್ರಾಮ್ ಸ್ಟೋರಿಯಲ್ಲಿ ಬರೆದುಕೊಂಡಿದ್ದಾರೆ.ಕೆಲವೇ ತಿಂಗಳ ಹಿಂದೆಯಷ್ಟೇ ರಿಲೀಸ್ ಆದ ಕಿಚ್ಚ ಸುದೀಪ್ ನಟನೆಯ ಮ್ಯಾಕ್ಸ್ ಸಿನಿಮಾದಲ್ಲೂ ಶ್ರೀಧರ್ ನಟಿಸಿದ್ದರು. ಜೊತೆಗೆ ಸಾಕಷ್ಟು ಸಿನಿಮಾಗಳಲ್ಲಿ ಅವರು ಪೋಷಕ ಪಾತ್ರಗಳಲ್ಲಿ ನಟಿಸಿದ್ದಾರೆ. ಆದ್ರೆ ಈಗ ಅಚ್ಚರಿ ಎಂಬಂತೆ ಶ್ರೀಧರ್ ತಮ್ಮ ಚಿಕಿತ್ಸೆಗಾಗಿ ಜನರಲ್ಲಿ ಸಹಾಯ ಕೋರಿದ್ದಾರೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.
Mon,10 Jul 2023
ಭಾರತೀಯ ಆಟಗಾರ ಕೆ ಎಲ್ ರಾಹುಲ್ ಅವರ ಸಂಭಾವನೆ ಎಷ್ಟು ಕೋಟಿ ಇರಬಹುದು
Sat,8 Jul 2023
ದಕ್ಷಿಣ ಕನ್ನಡದ ಕಂಬಳ ಕ್ರೀಡೆ ನೋಡುವುದೇ ಎಷ್ಟು ಚೆಂದ ಗೊತ್ತಾ
Thu,15 May 2025