ಕಾಂಗ್ರೆಸ್ ವೇದಿಕೆಯಲ್ಲಿ ಶಿವಣ್ಣ ಬಾವುಕ; 'ಸುಡು ಬಿಸಿಳಿನಲ್ಲಿ ಕಣ್ಣೀರಿಟ್ಟ ಜೋಗಿ'
6 ದಶಕಗಳಿಗೂ ಹೆಚ್ಚು ಕಾಲ ಚಿತ್ರರಂಗದಲ್ಲಿ ಮಿಂಚಿದ ದ್ವಾರಕೀಶ್ ಇಂದು ಕಣ್ಮರೆಯಾಗಿದ್ದಾರೆ. ಅಭಿಮಾನಿಗಳನ್ನು ನಕ್ಕು-ನಲಿಸಿದ ಪ್ರಚಂಡ ಕುಳ್ಳ ಹೃದಯಾಘಾತದಿಂದ ಇಹಲೋಕ ತ್ಯಜಿಸಿದ್ದಾರೆ. ದ್ವಾರಕೀಶ್ ನಿಧನದಿಂದ ಕನ್ನಡ ಚಿತ್ರರಂಗದ ಮತ್ತೊಂದು ಕೊಂಡಿ ಕಳಚಿದೆ.
ಇಡೀ ಸ್ಯಾಂಡಲ್ವುಡ್ ಶೋಕ ಸಾಗರದಲ್ಲಿ ಮುಳುಗಿದೆ. ಹಿರಿಯ ನಟನ ನಿಧನಕ್ಕೆ ಅನೇಕ ಗಣ್ಯರು ಕಂಬನಿ ಹಾಕಿದ್ದಾರೆ. ಸ್ಟಾರ್ ನಟ-ನಟಿಯರು ಸಂತಾಪ ಸೂಚಿಸಿದ್ದಾರೆ. ದ್ವಾರಕೀಶ್ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಅಂತ್ಯಕ್ರಿಯೆ ನಡೆದಿದೆ.
ಡಾ.ರಾಜ್ ಕುಮಾರ್ ಹಾಗೂ ದ್ವಾರಕೀಶ್ ಕುಟುಂಬದ ಜೊತೆ ಉತ್ತಮ ಸಂಬಂಧ ಹೊಂದಿದ್ರು. ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಕೂಡ ಸಂತಾಪ ಸೂಚಿಸಿದ್ದಾರೆ. ಕನ್ನಡ ಚಿತ್ರರಂಗಕ್ಕೆ ನಿಮ್ಮ ಕೊಡುಗೆ ಅಪಾರ. ನಿಮ್ಮ ನಗುಮುಖವನ್ನೇ ಸದಾ ನೆನೆಯುತ್ತ ಬೀಳ್ಕೊಡುವೆ. ಹೋಗಿ ಬನ್ನಿ ದ್ವಾರಕೀಶ್ ಮಾಮ ಎಂದು ಶಿವಣ್ಣ ಟ್ವೀಟ್ ಮಾಡಿದ್ದಾರೆ.
ಚುನಾವಣಾ ಪ್ರಚಾರದ ಹಿನ್ನೆಲೆ ಶಿವಮೊಗ್ಗದಲ್ಲಿರುವ ಶಿವರಾಜ್ ಕುಮಾರ್ ಅವರು ದ್ವಾರಕೀಶ್ ನಿಧನಕ್ಕೆ ಸಂತಾಪ ಸೂಚಿಸಿದ್ರು. ದ್ವಾರಕೀಶ್ ಅವರೊಂದಿಗೆ ಕಳೆದ ದಿನಗಳನ್ನು ನೆನೆಪಿಸಿಕೊಂಡು ಭಾವುಕರಾದ್ರು. ದ್ವಾರಕೀಶ್ ಮಾಮನಿಗೆ ಅಪ್ಪಾಜಿ ಅವರ ಜೊತೆ ಒಳ್ಳೆಯ ಸ್ನೇಹ ಇತ್ತು. ಅವರು ಕೂಡ ನಮ್ಮ ಕುಟುಂಬದ ಭಾಗವಾಗಿದ್ದರು. ದ್ವಾರಕೀಶ್ ಮಾಮ ನಿಧನರಾಗಿದ್ದು, ನನಗೆ ಬಹಳ ನೋವುಂಟು ಮಾಡಿದೆ.
ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಶಿವಣ್ಣ ಕೂಡ ಭಾವುಕರಾಗಿ ಕಣ್ಣೀರು ಹಾಕಿದ್ರು. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkarunadu.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕರುನಾಡು ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.