ಮೋದಿ ಪಿಎಂ ಸ್ಥಾನಕ್ಕೆ ಕಣ್ಣು ಹಾಕಿದ ಸಿದ್ದರಾಮಯ್ಯ? ಸಿದ್ದು ಹೊಸ ಪ್ಲಾನ್ ಗೆ ಬಿಜೆಪಿ ಗಡಗಡ
ಲೋಕಸಭಾ ಚುನಾವಣೆಗೆ ಇನ್ನೂ ಒಂದು ವರ್ಷ ಬಾಕಿಯಿರುವಂತೆಯೇ ರಾಜ್ಯದಲ್ಲಿ ಭರ್ಜರಿ ಜಯ ಭೇರಿ ಕಾಂಗ್ರೆಸ್ ಪ್ರತಿಪಕ್ಷಗಳನ್ನು ಒಗ್ಗೂಡಿಸುವ ನಿಟ್ಟಿನಲ್ಲಿಯೂ ಕಾರ್ಯತಂತ್ರ ರೂಪಿಸುತ್ತಿದೆ. ಈ ನಿಟ್ಟಿನಲ್ಲಿ
ನೂತನ ಮುಖ್ಯಮಂತ್ರಿ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಮಮತಾ ಬ್ಯಾನರ್ಜಿ, ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್, ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಸೇರಿದಂತೆ ವಿವಿಧ ಪ್ರತಿಪಕ್ಷಗಳ ಮುಖಂಡರು ಪಾಲ್ಗೊಳ್ಳುವಂತೆ ಆಹ್ವಾನ ನೀಡಿದ್ದರು.
ಹಾಗೆ ಅದರಂತೆ ಆಹ್ವಾನಿತ ಅತಿಥಿಗಳು ಕೂಡ ಆಗಮಿಸಿದ್ದರು. ಆದರೆ, ಈ ಕಾರ್ಯಕ್ರಮಕ್ಕೆ ಮಮತಾ ಬ್ಯಾನರ್ಜಿ ಆಗಮಿಸಲಿಲ್ಲ. ಅವರ ಬದಲಿಗೆ ಪಕ್ಷದ ನಾಯಕ ಕಾಕೋಲಿ ಘೋಷ್ ದಸ್ತಿದಾರ್ ಆಗಮಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ರಾಜ್ಯಸಭಾ ಪಕ್ಷದ ನಾಯಕ ಡೆರೆಕ್ ಓ ಬ್ರಿಯಾನ್, ಕರ್ನಾಟಕದ ನಿಯೋಜಿತ ಸಿಎಂ ಸಿದ್ದರಾಮಯ್ಯ ಮತ್ತು ಅವರ ಸಹೋದ್ಯೋಗಿಗಳ ಪ್ರಮಾಣ ವಚನ ಸಮಾರಂಭಕ್ಕೆ ಎಐಸಿಸಿ ಅಧ್ಯಕ್ಷರೇ ವೈಯಕ್ತಿಕವಾಗಿ ಮಮತಾ ಬ್ಯಾನರ್ಜಿ ಅವರನ್ನು ಆಹ್ವಾಸಿದ್ದರು.
ಆದರೆ, ಅವರ ಪರವಾಗಿ ಲೋಕಸಭೆಯಲ್ಲಿನ ಟಿಎಂಸಿ ಉಪ ನಾಯಕ ಕಾಕೊಲಿ ಘೋಷ್ ದಸ್ತಿದಾರ್ ಪಾಲ್ಗೊಂಡಿದ್ದರು ಎಂದು ತಿಳಿಸಿದ್ದಾರೆ. ಇನ್ನು ಪ್ರಾದೇಶಿಕ ಪಕ್ಷಗಳ ಒಗ್ಗಟ್ಟು ಹೆಚ್ಚಿಸಿದರೆ ಮುಂದಿನ ದಿನಗಳಲ್ಲಿ ಮೋದಿಗೆ ಟಕ್ಕರ್ ನೀಡಬಹುದು ಎನ್ನುವುದು ಜನನಾಯಕರ ಅಂದಾಜಾಗಿದೆ. ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್, ಛತ್ತೀಸ್ ಗಢ ಸಿಎಂ ಭೂಪೇಶ್ ಬಘೇಲ್, ಬಿಹಾರ ಸಿಎಂ ನಿತೀಶ್ ಕುಮಾರ್, ಹಿಮಾಚಲ ಪ್ರದೇಶ ಮುಖ್ಯಮಂತ್ರಿ ಸುಖ್ ವಿಂದರ್ ಸಿಂಗ್ ಸುಖು, ಪುದುಚೆರಿ ಸಿಎಂ ರಂಗಸ್ವಾಮಿ, ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್, ಜಾರ್ಖಂಡ್ ಸಿಎಂ ಹೇಮಂತ್ ಸುರೇನ್ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ.
ಇನ್ನು ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ, ಪ್ರೀಯಾಂಕಾ ಗಾಂಧಿ ಸೇರಿದಂತೆ ಹಲವು ಗಣ್ಯರು ನಟಿ, ಮಾಜಿ ಸಂಸದೆ ರಮ್ಯಾ, ನಟ ಶಿವರಾಜ್ ಕುಮಾರ್, ದುನಿಯಾ ವಿಜಯ್, ಕಮಲ್ ಹಾಸನ್ ಸೇರಿದಂತೆ ಹಲವು ಗಣ್ಯರು ಭಾಗಿಯಾಗಿ ಪ್ರಾದೇಶಿಕ ಪಕ್ಷಗಳ ಬೆಂಬಲ ಕೋರಿದ್ದಲ್ಲದೆ ಬಿಜೆಪಿ ಸರ್ಕಾರದ ವಿರುದ್ಧ ತೊಡೆತಟ್ಟಿದ್ದಾರೆ. (ಪ್ರೀಯ ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.