ಅಯೋಧ್ಯೆಗೆ ತೆರಳುವ ಭಕ್ತರಿಗೆ ಸಿಹಿಸುದ್ದಿ ಕೊಟ್ಟ ಸಿದ್ದರಾಮಯ್ಯ, ಮೆಚ್ಚಿಕೊಂಡ ಕನ್ನಡಿಗರು
ಅಯೋಧ್ಯೆಯಲ್ಲಿ ದಶಕಗಳಿಂದ ಕೋಟ್ಯಾಂತರ ಹಿಂದೂಗಳು ಕಾಯುತ್ತಿದ್ದ ರಾಮಮಂದಿರ ಉದ್ಘಾಟನೆಗೆ ದಿನಗಣೆನೆ ಶುರುವಾಗಿದೆ. ಇದೇ ಜನವರಿ 22ರಂದು ಶ್ರೀರಾಮನ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮ ನಡೆಯಲಿದೆ. ಈ ಅಮೃತಗಳಿಗೆಗಾಗಿ ರಾಮಭಕ್ತರು ಉತ್ಸಾಹದಿಂದ ಕಾಯುತ್ತಿದ್ದಾರೆ.
ಈ ಕಾರ್ಯಕ್ರಮಕ್ಕೆ ದೇಶದ ಚಿತ್ರನಟರು, ವಿವಿಧ ಕ್ಷೇತ್ರಗಳ 7000 ಗಣ್ಯರನ್ನ ಆಹ್ವಾನಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಜನವರಿ 22ರಂದು ಪ್ರಾಣ ಪ್ರತಿಷ್ಠಾ ಕಾರ್ಯಕ್ರಮವನ್ನು ನೆರವೇರಿಸಲಿದ್ದಾರೆ. ಭವ್ಯ ರಾಮ ಮಂದಿರದ ಬಳಿ ತಮ್ಮ ರಾಜ್ಯಗಳಿಂದ ಆಗಮಿಸುವ ಭಕ್ತರಿಗಾಗಿ ಹಲವಾರು ರಾಜ್ಯಗಳು ಇಲ್ಲಿನ ಸುತ್ತಮುತ್ತಲ ಪ್ರದೇಶದಲ್ಲಿ ಅತಿಥಿ ಗೃಹ ನಿರ್ಮಾಣಕ್ಕೆ ಆಸಕ್ತಿ ತೋರಿಸಿವೆ.
ಕರ್ನಾಟಕ ಸರ್ಕಾರ ಕೂಡ ರಾಜ್ಯದ ರಾಮ ಭಕ್ತರಿಗೆ ರಾಮಭಕ್ತರಿಗೆ ಗುಡ್ ನ್ಯೂಸ್ ನೀಡಿದೆ. ಅಯೋಧ್ಯೆಯಲ್ಲಿ ರಾಜ್ಯ ಸರ್ಕಾರದ ವತಿಯಿಂದ ಕರ್ನಾಟಕ ಯಾತ್ರಿಗಳಿಗಾಗಿಯೇ ಅತಿಥಿ ಗೃಹ ನಿರ್ಮಾಣ ಮಾಡಲು ಸಿದ್ಧವಾಗಿದೆ.ಅಯೋಧ್ಯೆಯಲ್ಲಿ ಕನ್ನಡಿಗರಿಗಾಗಿ ಕರ್ನಾಟಕ ಅತಿಥಿ ಗೃಹ ನಿರ್ಮಿಸಲು ಅನುಮತಿ ನೀಡುವಂತೆ ರಾಜ್ಯದ ಮುಜರಾಯಿ ಇಲಾಖೆ ಉತ್ತರ ಪ್ರದೇಶ ಸರ್ಕಾರಕ್ಕೆ ಶ್ರೀರಾಮ ಮಂದಿರ ಉದ್ಘಾಟನೆ ಸಮಯದಲ್ಲೇ ಪತ್ರ ಬರೆದಿದೆ.
ಕರ್ನಾಟಕದಿಂದ ಹೆಚ್ಚಿನ ಸಂಖ್ಯೆಯಲ್ಲಿ ಯಾತ್ರಿಗಳು, ರಾಮಭಕ್ತರ ಅಯೋಧ್ಯೆಗೆ ಪ್ರಯಾಣಿಸಿದರೆ ವಸತಿ, ಊಟದ ವ್ಯವಸ್ಥೆಗಾಗಿ ಅತಿಥಿ ಗೃಹ ನಿರ್ಮಾಣ ರಾಜ್ಯದ ಭಕ್ತಾದಿಗಳ ಅನುಕೂಲಕ್ಕೆ ಮುಜರಾಯಿ ಇಲಾಖೆ ಅತಿಥಿ ಗೃಹ ನಿರ್ಮಾಣ ಮಾಡಲಿದೆ. 5 ಎಕರೆ ಜಾಗದಲ್ಲಿ 10 ಕೋಟಿ ವೆಚ್ಚದಲ್ಲಿ ಅತಿಥಿ ಗೃಹ ನಿರ್ಮಾಣಕ್ಕೆ ಮನವಿ ಮಾಡಲು ಸಿದ್ಧವಾಗಿರುವುದಾಗಿ ರಾಜ್ಯ ಸರ್ಕಾರ ತಿಳಿಸಿದೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkarunadu.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕರುನಾಡು ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ