ಕೋಟಿ ಕೋಟಿ ಅಕ್ರಮ ಬಯಲಿಗೆಳೆದಿದ್ದಕ್ಕೆ ಸಿಲ್ಲಿ ಲಲ್ಲಿ ನಟ, ಕೆಎಎಸ್ ಅಧಿಕಾರಿ ವಗಾ೯ವಣೆಯ ಶಿಕ್ಷೆ
ಬಿಬಿಎಂಪಿಯಲ್ಲಿ ಅಧಿಕಾರಿಯಾಗಿರುವ ಸಂಗಪ್ಪ ಉಪಾಸೆ ಅವರಿಗೆ ಅಂಜುಟಗಿಲು ಸಂಮಾರು ಎಂಬ ಕಾವ್ಯನಾಮವೂ ಇದೆ! ಕೆಎಎಸ್ ಮಾಡಿಕೊಂಡಿರುವ ಇವರು, ಮೂರು ವರ್ಷಗಳ ಹಿಂದೆ `ಸಿಲ್ಲಿ ಲಲ್ಲಿ’ ಧಾರಾವಾಹಿಯಲ್ಲಿ ಕಾಂಪೌಂಡರ್‌ನ ಪಾತ್ರ ಮಾಡಿಕೊಂಡಿದ್ದವರು ಅಂದರೆ ನಂಬುವುದು ಕಷ್ಟ. ಆದರೆ ಇದು ನಿಜ. ಹೊಟ್ಟೆಪಾಡಿಗಾಗಿ ಬಣ್ಣ ಹಚ್ಚಿ, ಕೋಡಂಗಿಯಂತೆ ಕ್ಯಾಮರಾ ಮುಂದೆ ಕಾಣಿಸಿಕೊಳ್ಳುತ್ತಿದ್ದ ಸಂಗಮೇಶ, ಈಗ ಹೆಸರಘಟ್ಟ ರಸ್ತೆಯಲ್ಲಿರುವ ಬಿಬಿಎಂಪಿಯಲ್ಲಿ ಹಣಕಾಸು ವಿಭಾಗದ ಅಸಿಸ್ಟೆಂಟ್ ಕಂಟ್ರೋಲರ್! ಮೂರು ವರ್ಷಗಳ ಹಿಂದೆ ಮೂರು ಹೊತ್ತಿನ ಊಟಕ್ಕೆ ಪರದಾಡುತ್ತಿದ್ದ ಸಂಗಮೇಶ, ಈಗ ಸರಕಾರದ ಗೌರವಾನ್ವಿತ ಅಧಿಕಾರಿ. ಓಡಾಡಲು ಸರಕಾರಿ ಕಾರ್ ಇದೆ. ವಾಸಕ್ಕೆ ಸರಕಾರದ ಮನೆಯಿದೆ. ಕೆಲಸ ಮಾಡಲು ಸರಕಾರಿ ಕಚೇರಿಯಿದೆ. ಜತೆಗೆ ಏಳೆಂಟು ಮಂದಿ ಸಹಾಯಕರಿದ್ದಾರೆ. ಬಿಬಿಎಂಪಿಯ ರಸ್ತೆ ಕಾಮಗಾರಿ, ನೀರು ಪೂರೈಕೆ, ಪಾರ್ಕ್ ನಿರ್ಮಾಣ ಹಾಗೂ ಸ್ವಚ್ಛತಾ ಕಾರ್ಯಗಳಿಗೆ ಈ ಸಂಗಪ್ಪ ಉಪಾಸೆಯವರೇ ಬಜೆಟ್ ಪೂರೈಸಬೇಕು!
ಹೇಳಲೇಬೇಕಾದ ಮಾತೆಂದರೆ, ಈ ಒಂದು ಹಂತಕ್ಕೆ ಬಂದು ನಿಲ್ಲಬೇಕಾದೆ ಸಂಗಮೇಶ ವಿಪರೀತ ಸೈಕಲ್ ಹೊಡೆದಿದ್ದಾರೆ. ಹತ್ತು ಜನ್ಮಕ್ಕೆ ಆಗುವಷ್ಟು ಕಷ್ಟಪಟ್ಟಿದ್ದಾರೆ. ಒಂದು ದೊಡ್ಡ ಎತ್ತರಕ್ಕೆ ತಂದು ನಿಲ್ಲಿಸುವುದಕ್ಕೂ ಮೊದಲು ಬದುಕೆಂಬುದು ಅವರನ್ನು ಕ್ಷಣಕ್ಷಣವೂ ಹೆದರಿಸಿದೆ. ಆಟ ಆಡಿಸಿದೆ. ಕಷ್ಟ ಕೊಟ್ಟಿದೆ. ಪರೀಕ್ಷೆಗೆ ಒಡ್ಡಿದೆ. ಅಳಿಸಿದೆ. ಅವಮಾನಕ್ಕೆ ಈಡು ಮಾಡಿದೆ. ಹಂಗಿಸಿದೆ. ಅಪಹಾಸ್ಯ ಮಾಡಿದೆ. ಒಂದರ ಹಿಂದೊಂದು ಸಂಕಟಗಳನ್ನು ತಂದಿಟ್ಟು ಮಜಾ ತೆಗೆದುಕೊಂಡಿದೆ. ಒಂದು ಸಂತೋಷವೆಂದರೆ, ಸಂಗಪ್ಪ ಎಲ್ಲವನ್ನೂ cool ಆಗಿಯೇ ತೆಗೆದುಕೊಂಡಿದ್ದಾರೆ. ಒಂದೊಂದು ಅವಮಾನ ಕೈ ಹಿಡಿದಾಗಲೂ `ನಾಳೆ ಗೆಲ್ತೀನಿ’ ಎನ್ನುತ್ತಲೇ ನೋವು ಮರೆತಿದ್ದಾರೆ. ಮತ್ತು ಇದೀಗ ನೂರಲ್ಲ, ಸಾವಿರ ಮಂದಿಗೂ ಮಾದರಿಯಾಗಬಲ್ಲ ಸಾಹಸವನ್ನೂ ಮಾಡಿ ತೋರಿಸಿದ್ದಾರೆ. ಹೇಳಿದರೆ, ಅವರ ಹೋರಾಟದ ಬದುಕಿನದ್ದು ನಂಬಲು ಸಾಧ್ಯವೇ ಇಲ್ಲದಂಥ ಸಾಹಸದ ಕಥೆ.
ಹೌದು ನಗರಸಭೆ ಕೋಟಿ ಕೋಟಿ ಅಕ್ರಮ ಬಯಲಿಗೆಳೆದ ಪೌರಾಯುಕ್ತ ಸಂಗಪ್ಪ ಉಪಾಸೆ ಅವರಿಗೆ ಜೀವ ಬೆದರಿಕೆ ಕರೆಗಳು ಬರುಲಾರಂಭಿಸಿದ್ದು, ರಕ್ಷಣೆ ಕೋರಿ ಉಪಾಸೆ ಅವರು ಪೊಲೀಸರ ಮೊರೆ ಹೋಗಿದ್ದಾರೆ. ಹಿಂದಿನ ಅಧಿಕಾರಿಗಳ ಅಕ್ರಮ ಬಯಲಿಗೆಳೆದಿದ ನಂತರ ಸಂಗಪ್ಪ ಅವರಿಗೆ ಜೀವ ಬೆದರಿಕೆ ಕರೆಗಳು ಬರಲಾರಂಭಿಸಿದ್ದು, ಕಚೇರಿ ಬಳಿ ಪ್ರತಿನಿತ್ಯ ಅನಾಮಿಕ ವ್ಯಕ್ತಿಗಳು ಓಡಾಡಲು ಆರಂಭಿಸಿದ್ದಾರೆ ಎಂದು ಆರೋಪಿಸಲಾಗಿದೆ.
ನಕಲಿ ದಾಖಲಗಳನ್ನು ಸೃಷ್ಟಿಸಿ ಕೃಷಿ ಭೂಮಿಯಲ್ಲಿ 1,310 ಖಾತಾ ನೀಡಿ ಸರ್ಕಾರದ ಬೊಕ್ಕಸಕ್ಕೆ 18 ಕೋಟಿ ರೂ. ನಷ್ಟ ಆಗಿರುವುದನ್ನು ಪೌರಾಯುಕ್ತ ಸಂಗಪ್ಪ ಅವರು ಪತ್ತೆ ಹಚ್ಚಿದ್ದರು. ಅಲ್ಲದೇ ನಾಲ್ಕು ಕೋಟಿ ಮೌಲ್ಯದ ಸರ್ಕಾರಿ ಜಾಗವನ್ನ ಖಾಸಗಿ ವ್ಯಕ್ತಿಗಳ ಹೆಸರಿಗೆ ಪರಭಾರೆ ಮಾಡಿದ್ದನ್ನ ಬಯಲಿಗೆ ಎಳೆದಿದ್ದರು.
ನಿಷ್ಪಕ್ಷಪಾತ ತನಿಖೆ ನೆಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸಿದ್ದರಿಂದ ಈಗಾಗಲೇ 15 ಇಲಾಖೆಗೆ 26 ಸಲ ಇವರನ್ನು ಟ್ರಾನ್ಸ್ಫರ್ ಮಾಡಲಾಗಿದೆ.ಆದರೂ ಅವರು ಆಫೀಸರ್ ಆಗಬೇಕು ಎಂಬ ಕನಸಿತ್ತು. ಅದು ನನಸಾಗಿದೆ. ನಾನು ಅನುಭವಿಸಿದ ಕಷ್ಟ ನನ್ನ ಕಿರಿಯರಿಗೆ ಬರಬಾರದು ಅನ್ನೋದು ನನ್ನಾಸೆ ಎಂದಿದ್ದಾರೆ.
ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ.)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.