ಬಿಗ್ ಬಾಸ್ ಮನೆಯಿಂದ ಹೊರಬಂದು ಎಲ್ಲಾ ಸತ್ಯ ಬಿಚ್ಚಿಟ್ಟ ಸ್ನೇಕ್ ಶ್ಯಾಮ್, ಒಳಗಡೆ ಏನಾಯಿತು ಗೊತ್ತಾ

 | 
Nvf

ಬಿಗ್ ಬಾಸ್ ಕನ್ನಡ ಸೀಸನ್ 10ರ ಮೊದಲ‌ ವೀಕೆಂಡ್ ಎಪಿಸೋಡಿನ‌ ಕಿಚ್ಚನ ಪಂಚಾಯಿತಿ ಶನಿವಾರ ನಡೆದಿತ್ತು. ಇಂದಿನ ಸೂಪರ್ ಸಂಡೆ ಸುದೀಪ್ ಜೊತೆಯಲ್ಲಿ ಸ್ಪರ್ಧಿಗಳ ಜೊತೆಗೆ ಮಾತುಕತೆಗೆ ಇಳಿದ ಕಿಚ್ಚ, ತಮಾಷೆಯಾಗಿ ಮಾತಾಡುತ್ತಾ ಕೆಲವರಿಗೆ ಎಚ್ಚರಿಕೆ ಮಾತುಗಳನ್ನು ಕೂಡ ಹೇಳಿದ್ರು.

ನಾಮಿನೇಷನ್ ಪಟ್ಟಿಯಲ್ಲಿ ಸ್ನೇಕ್ ಶ್ಯಾಮ್, ಮೈಕಲ್ ಅಜಯ್, ಸಿರಿ, ನೀತು, ಡ್ರೋಣ್ ಪ್ರತಾಪ್, ಇವರೆಲ್ಲ ಇದ್ದರು. ಇವರಲ್ಲಿ ಮೊದಲು ಸೇಫ್‌ ಆಗಿದ್ದು ನೀತು ಅವರು. ನಂತರ ಕೊನೆಯಲ್ಲಿ ಮೈಕಲ್, ಸಿರಿ ಮತ್ತು ಸ್ನೇಕ್‌ ಶ್ಯಾಮ್‌ ಹೆಸರು ಉಳಿದಿತ್ತು. ಅವರಲ್ಲಿ ಬಿಗ್ ಬಾಸ್ ಕನ್ನಡ ಹತ್ತನೇ ಸೀಸನ್ ನ ಮೊದಲ ಎಲಿಮಿನೇಟ್​ ಕಂಟೆಸ್ಟೆಂಟ್ ಆಗಿ ಸ್ನೇಕ್ ಶ್ಯಾಮ್ ಬಿಗ್​ ಬಾಸ್​ ಮನೆಯಿಂದ ಹೊರಗೆ ಬಿದ್ದಿದ್ದಾರೆ.

ಐವತ್ತೆಂಟು ಸಾವಿರ ಹಾವುಗಳನ್ನು ಹಿಡಿದು ಸುರಕ್ಷಿತ ಸ್ಥಳಕ್ಕೆ ಬಿಟ್ಟ ಖ್ಯಾತಿ ಹೊಂದಿದ್ದ ಶ್ಯಾಮ್ ಅವರನ್ನು ಜನರು ಹೋಲ್ಡ್ ನಲ್ಲಿಟ್ಟಿದ್ದರು. ಬಿಗ್ ಬಾಸ್ ಅವರನ್ನು ಉಳಿದ ಹೋಲ್ಡ್ ಸ್ಪರ್ಧಿಗಳ ಜೊತೆಗೆ ಮನೆಯೊಳಗೆ ಕಳಿಸಿದ್ದರು. ಒಂದು ವಾರ ನಿಮ್ಮ ಪರ್ಫಾರ್ಮೆನ್ಸ್ ನೋಡಿ ಮುಂದಿನ ನಿರ್ಧಾರ ತಿಳಿಸಲಾಗುತ್ತದೆ ಎಂದೂ ಆಸಮಯದಲ್ಲಿ ಕಿಚ್ಚ ಸುದೀಪ್ ಹೇಳಿದ್ದರು. 

ಹೋಗುವಾಗ ಇಂಟ್ರೆಸ್ಟಿಂಗ್ ಕಂಟೆಸ್ಟೆಂಟ್ ಆಗಿಯೇ ಕಾಣಿಸಿದ್ದ ಶ್ಯಾಮ್, ಬಿಗ್ ಬಾಸ್ ಮನೆಯೊಳಗೆ ಸದ್ದು ಮಾಡಿದ್ದು ಕಡಿಮೆ. ಇಂದಿನ ಎಪಿಸೋಡ್‌ನಲ್ಲಿಯೂ ಉಳಿದ ಸ್ಪರ್ಧಿಗಳಲ್ಲಿ ಹೆಚ್ಚಿನ ಜನರು ಶ್ಯಾಮ್ ಅವರೇ ಹೊರಗೆ ಹೋಗಬೇಕು ಎಂದು ಅಭಿಪ್ರಾಯಪಟ್ಟರು. ಇದೀಗ ಅವರು ಮೊದಲ ವಾರವೇ ಬಿಗ್ ಬಾಸ್ ಮನೆಯಿಂದ ಹೊರಗೆ ಬಿದ್ದಿದ್ದಾರೆ.

ನನಗೆ ಇಲ್ಲಿ ಸಾಕಷ್ಟು ಸ್ನೇಹಿತರು ಇದ್ದರು. ಆದ್ರೆ ಇಲ್ಲಿ ನನಗೆ ಹೆಲ್ತ್ ಕೈಕೊಟ್ಟಿತು. ಹಾಗೆಯೇ ಪ್ರಾಣಿಗಳ ನೆನಪು ತುಂಬ ಕಾಡುತ್ತಿತ್ತು. ಅದೇ ಕಾರಣಕ್ಕೆ ನನಗೆ ಇಲ್ಲಿ ಚಟುವಟಿಕೆಗಳಲ್ಲಿ ಭಾಗವಹಿಸಲು ಸಾಧ್ಯವಾಗಲಿಲ್ಲ ಎಂದು ಅಭಿಪ್ರಾಯ ಹಂಚಿಕೊಂಡರು. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkarunadu.tech ವಾಹಿನಿಗೆ ಬೆಂಬಲಿಸಿ)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕರುನಾಡು ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.