FactCheckಸೋನು ನಿಗಮ್ ದುರಾಂಕರದ ಮಾತಿಗೆ ಕರ್ನಾಟಕದಲ್ಲಿ ಬ್ಯಾನ್, ತಕ್ಷಣ ಕ್ಷಮೆಯಾಚಿಸಿದ ಸೋನು
May 6, 2025, 11:32 IST
|

ಸೋನು ನಿಗಮ್ಗೆ ಕನ್ನಡದ ಮೇಲೆ ವಿಶೇಷ ಪ್ರೀತಿ-ಗೌರವ ಇದ್ದಿದ್ದು ನಿಜ. ಆದರೆ, ಅವರು ನೀಡಿದ ಹೇಳಿಕೆ ಸಾಕಷ್ಟು ಚರ್ಚೆ ಹುಟ್ಟುಹಾಕಿತ್ತು. ಕನ್ನಡ ಕನ್ನಡ.. ಹೀಗೆ ಹೇಳಿದ್ದರಿಂದಲೇ ಪಹಲ್ಗಾಮ್ ದಾಳಿ ಆಯಿತು’ ಎನ್ನುವ ಮೂಲಕ ಸೋನು ನಿಗಮ್ ಸುಖಾ ಸುಮ್ಮನೆ ತಮ್ಮ ಮೇಲೆ ವಿವಾದವನ್ನು ಎಳೆದುಕೊಂಡರು. ಆ ಬಳಿಕ ಅವರು ಹೇಳಿಕೆಗೆ ಸ್ಪಷ್ಟನೆ ಕೊಟ್ಟರೇ ಹೊರತು ಕ್ಷಮೆ ಕೇಳಿಲ್ಲ. ಈಗ ಇದನ್ನು ಗಂಭೀರವಾಗಿ ಪರಿಗಣಿಸಿರೋ ಕರ್ನಾಟಕ ಫಿಲ್ಮ್ ಚೇಂಬರ್ ಅವರಿಗೆ ಅವಕಾಶ ನೀಡದಿರಲು ನಿರ್ಧಾರ ತೆಗೆದುಕೊಂಡಿದೆ.
ಈ ಬಗ್ಗೆ ಮಾತನಾಡಿರೋ ಫಿಲ್ಮ್ ಚೇಂಬರ್ ಅಧ್ಯಕ್ಷ ನರಸಿಂಹಲು, ಘಟನೆ ಬಳಿಕ ಈವರೆಗೂ ಸೋನು ನಿಗಮ್ ಕನ್ನಡಿಗರ ಬಳಿ ಕ್ಷಮೆ ಕೇಳಿಲ್ಲ. ಇನ್ನು ಮುಂದೆ ಸೋನು ನಿಗಮ್ ಅವರಿಂದ ಚಿತ್ರರಂಗದವರು ಮ್ಯೂಸಿಕಲ್ ನೈಟ್ಸ್ ಮಾಡುವುದಿಲ್ಲ. ಅವರ ಬಳಿ ಹಾಡನ್ನು ಹಾಡಿಸೋದಿಲ್ಲ. ಈ ಕ್ಷಣದಿಂದಲೇ ಸೋನುಗೆ ಅಸಹಕಾರ ತೋರಬೇಕೆಂದು ನಿರ್ಧಾರ ಮಾಡಲಾಗಿದೆ ಎಂದಿದ್ದಾರೆ.
ಸೋನು ನಿಗಮ್ ಅವರು ಸಂಗೀತವನ್ನೇ ನಂಬಿಕೊಂಡು ಇದ್ದವರು. ಮ್ಯೂಸಿಕಲ್ ನೈಟ್ಸ್ ಹಾಗೂ ಹಾಡು ಹೇಳುವುದರಿಂದ ಅವರಿಗೆ ಗಳಿಕೆ ಆಗುತ್ತಿದೆ. ಆದರೆ, ಈಗ ಅವರು ಕನ್ನಡ ಸಿನಿಮಾಗಳಿಗೆ ಹಾಡನ್ನು ಹೇಳಲು ಸಾಧ್ಯವಾಗದೇ ಇರೋದು ಅವರಿಗೆ ಒಂದು ರೀತಿಯಲ್ಲಿ ನಷ್ಟವೇ. ಈ ನಿರ್ಧಾರದ ಬಗ್ಗೆ ಅವರು ಯಾವ ರೀತಿಯಲ್ಲಿ ಪ್ರತಿಕ್ರಿಯಿಸುತ್ತಾರೆ ಎಂಬುದನ್ನು ನೋಡಬೇಕಿದೆ. ಈಗಾಗಲೇ ಅವರು ಕ್ಷಮೆ ಕೇಳಿದ್ದಾರೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.
Mon,10 Jul 2023
ಭಾರತೀಯ ಆಟಗಾರ ಕೆ ಎಲ್ ರಾಹುಲ್ ಅವರ ಸಂಭಾವನೆ ಎಷ್ಟು ಕೋಟಿ ಇರಬಹುದು
Sat,8 Jul 2023
ದಕ್ಷಿಣ ಕನ್ನಡದ ಕಂಬಳ ಕ್ರೀಡೆ ನೋಡುವುದೇ ಎಷ್ಟು ಚೆಂದ ಗೊತ್ತಾ
Wed,21 May 2025
ರಾಧಿಕಾ ಕುಮಾರಸ್ವಾಮಿ ಮಗಳು ಎಷ್ಟು ಮುದ್ದಾಗಿದ್ದಾರೆ, ತಾಯಿಗೆ ತಕ್ಕ ಮಗಳು
Tue,20 May 2025