ಕೋಟ್೯ ಮೆಟ್ಟಲೇರಿದ ಸ್ಟಾರ್ ಜೋಡಿ ಯಶ್ ರಾಧಿಕಾ, ಅಭಿಮಾನಿಗಳಿಗೆ ಹಾ ಟ್೯ ಅಟ್ಯಾಕ್
Nov 7, 2024, 10:18 IST
|

ಅವಕಾಶ ಸಿಕ್ಕಾಗಲೆಲ್ಲ ಯಶ್ ತಮ್ಮ ದಾಂಪತ್ಯದ ಬಗ್ಗೆ, ಹೆಂಡತಿ ಬಗ್ಗೆ ನಾಲ್ಕು ಒಳ್ಳೆ ಮಾತು ಹೇಳದೇ ಮುಂದೆ ಹೋಗಲ್ಲ. ಹೆಚ್ಚಿನೆಲ್ಲ ಇಂಟರ್‌ವ್ಯೂಗಳಲ್ಲಿ ರಾಧಿಕಾ ಬಗ್ಗೆ ಪ್ರಶ್ನೆ ಕೇಳಿದಾಗಲೆಲ್ಲ ಆಕೆಯ ಬಗ್ಗೆ ಸಾಕಷ್ಟು ಉತ್ತಮ ಮಾತುಗಳನ್ನು ಯಶ್ ಆಡಿದ್ದರು.
ಆದರೆ ಯಶ್ ಸದ್ಯ ಸಿಕ್ಕಾಪಟ್ಟೆ ಫೇಮಸ್ ಆಗಿರುವ ಕಾರಣ ಎಲ್ಲರೂ ಯಶ್ ಬಳಿ ರಾಧಿಕಾ ಬಗ್ಗೆ ವಿಚಾರಿಸೋದೆ ಜಾಸ್ತಿ ಆಗಿದೆ. ರಾಧಿಕಾ ಪತಿ ಬಗ್ಗೆ ಮಾತನಾಡೋದು ಸೋಷಿಯಲ್ ಮೀಡಿಯಾದಲ್ಲಿ ಮಾತ್ರ ಅನ್ನೋ ಹಾಗಾಗಿದೆ. ಆದ್ರೆ ಇದೀಗ ಇವರಿಬ್ಬರೂ ಕೋರ್ಟ್ ಮೆಟ್ಟಿಲು ಏರಿದ್ದಾರೆ.
ಸೆಲೆಬ್ರಿಟಿಗಳು ಕೋರ್ಟಿಗೆ ಹೋಗೋದು ಇತ್ತೀಚೆಗೆ ಸಾಮಾನ್ಯ ಅಂತಾಗಿದೆ. ಆದರೆ ಯಶ್, ರಾಧಿಕಾ ಕೋರ್ಟ್ ಮೆಟ್ಟಿಲೇರಿದ್ದಕ್ಕೆ ಕಾರಣ ಬೇರೆ ಇದೆ. ಇದು ನೀವೆಲ್ಲ ಅಂದುಕೊಂಡಿರುವ ಹಾಗೆ ರಿಯಲ್ ಲೈಫ್ ಕಥೆ ಅಲ್ಲ. ಬದಲಾಗಿ ಜಾಹೀರಾತು. ಹೌದು, ಇತ್ತೀಚೆಗೆ ಯಶ್ ಜಾಹೀರಾತೊಂದರಲ್ಲಿ ನಟಿಸಿದ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಅದರಲ್ಲಿ ಯಶ್ ವಕೀಲರ ಡ್ರೆಸ್‌ನಲ್ಲಿ ಕಾಣಿಸಿಕೊಂಡಿದ್ದರು.
ಇದು ಟಾಕ್ಸಿಕ್ ಸೀನ್ ಅನ್ನೋ ಮಾತು ಅಲ್ಲಲ್ಲಿ ಕೇಳಿಬರುತ್ತಿತ್ತು. ಆದರೆ ಅದು ಜಾಹೀರಾತು ಅನ್ನೋದು ಆಮೇಲೆ ಗೊತ್ತಾಯ್ತು. ಇದೀಗ ಆ ಜಾಹೀರಾತನ್ನು ಗಂಡ ಹೆಂಡತಿ ಇಬ್ಬರೂ ಹಂಚಿಕೊಂಡಿದ್ದಾರೆ. ಇದರಲ್ಲಿ ನಟಿ ರಾಧಿಕಾ ಪಂಡಿತ್ ಅವರು ಒಂದು ವಿಷಯಕ್ಕೆ ಕೋರ್ಟ್ ಕಟಕಟೆಯಲ್ಲಿ ನಿಂತಿದ್ದಾರೆ. ಅವರ ಪತಿ ಯಶ್ ಜೋರು ಜೋರಾಗಿ ವಾದ ಮಾಡಿದ್ದಾರೆ.
ಹಾಗಾದರೆ, ಅವರಿಬ್ಬರ ತಕರಾರು ಏನು ಎಂಬ ಪ್ರಶ್ನೆ ಮೂಡುವುದು ಸಹಜ. ಇದರಲ್ಲಿ ರಾಧಿಕಾ ಪಂಡಿತ್ ಮೋಸಕ್ಕೆ ಒಳಗಾದ ಗ್ರಾಹಕಿಯ ಪಾತ್ರ ಮಾಡಿದ್ದಾರೆ. ಅವರಿಗೆ ನ್ಯಾಯ ಕೊಡಿಸಲು ಬಂದ ಲಾಯರ್ ಪಾತ್ರದಲ್ಲಿ ಯಶ್ ಕಾಣಿಸಿಕೊಂಡಿದ್ದಾರೆ. ಕಂಪನಿಯ ನಿಜವಾದ ಅಡುಗೆ ಎಣ್ಣೆ ಯಾವುದು ಎಂಬುದನ್ನು ಸಾಬೀತು ಮಾಡಲು ಯಶ್ ಫುಲ್ ಜೋಶ್‌ನಲ್ಲಿ ವಾದ ಮಾಡಿದ್ದಾರೆ. ಸದ್ಯ ಯಶ್ ರಾಧಿಕಾ ಅವರ ಈ ಜಾಹೀರಾತು ಸಖತ್ ವೈರಲ್ ಆಗ್ತಿದೆ.
( ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ.)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.
Mon,10 Jul 2023
ಭಾರತೀಯ ಆಟಗಾರ ಕೆ ಎಲ್ ರಾಹುಲ್ ಅವರ ಸಂಭಾವನೆ ಎಷ್ಟು ಕೋಟಿ ಇರಬಹುದು
Sat,8 Jul 2023
ದಕ್ಷಿಣ ಕನ್ನಡದ ಕಂಬಳ ಕ್ರೀಡೆ ನೋಡುವುದೇ ಎಷ್ಟು ಚೆಂದ ಗೊತ್ತಾ
Wed,21 May 2025
ರಾಧಿಕಾ ಕುಮಾರಸ್ವಾಮಿ ಮಗಳು ಎಷ್ಟು ಮುದ್ದಾಗಿದ್ದಾರೆ, ತಾಯಿಗೆ ತಕ್ಕ ಮಗಳು
Tue,20 May 2025