ಮದುವೆಯಾದ ಬಳಿಕ ಅಭಿಷೇಕ್ ಹಾಗೂ ಅವಿವಾ ಭರ್ಜರಿ ಡ್ಯಾನ್ಸ್, ಎಂಜಾಯ್ ಮಾಡಿದ ಸುಮಲತಾ

 | 
Dfg

ರೆಬೆಲ್​ಸ್ಟಾರ್ ಅಂಬರೀಶ್ ಹುಟ್ಟುಹಬ್ಬ ಹಿನ್ನೆಲೆ ಪುತ್ರ ಅಭಿಷೇಕ್‌ ಅಂಬರೀಶ್‌ ವಿಶೇಷ ವಿಡಿಯೋ ಬಿಡುಗಡೆ ಮಾಡಿದ್ದಾರೆ. ಭಾವಿ ಪತ್ನಿ ಅವಿವಾ ಜೊತೆ ಹೆಜ್ಜೆ ಹಾಕಿರುವ ವಿಡಿಯೋ ಇದಾಗಿದ್ದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. 

ಈ ವಿಡಿಯೋದಲ್ಲಿ ಅಭಿಷೇಕ್ ಮತ್ತು ಭಾವಿ ಪತ್ನಿ ಅವಿವಾ ಬಿದ್ದಪ್ಪ, ಅಂಬರೀಶ್​ ಅವರ ಹಲವು ಜನಪ್ರಿಯ ಹಾಡುಗಳಿಗೆ ಹೆಜ್ಜೆ ಹಾಕಿದ್ದಾರೆ. ಫುಲ್ ರೆಟ್ರೋ ಸ್ಟೈಲ್​ನಲ್ಲಿ ಅಭಿಷೇಕ್ ಅಂಬರೀಶ್ ಹಾಗೂ ಅವಿವಾ ಬಿದ್ದಪ್ಪ ಹೆಜ್ಜೆ ಹಾಕಿರುವ ಹಾಡು ಸಾಮಾಜಿಕ ಜಾಲತಾಣದಲ್ಲೂ ವೈರಲ್ ಆಗುತ್ತಿದೆ. ಈ ಸಂಭ್ರಮಕ್ಕೆ ಕೆಆರ್‌ಜಿ ಕನೆಕ್ಟ್ಸ್ ಜೊತೆಯಾಗಿ ಕೈಜೋಡಿಸಿದೆ. 

ಈ ವಿಡಿಯೋದಲ್ಲಿ ಅಭಿಷೇಕ್ ಮತ್ತು ಅವೀವಾ, ಅಂಬರೀಶ್​ ಅವರ ಹಲವು ಜನಪ್ರಿಯ ಹಾಡುಗಳಿಗೆ ಹೆಜ್ಜೆ ಹಾಕಿದ್ದಾರೆ. ಒಲವಿನ ಉಡುಗೊರೆ’, ಚಕ್ರವ್ಯೂಹ’, ‘ಮಂಡ್ಯದ ಗಂಡು' ಸೇರಿದಂತೆ ಮುಂತಾದ ಚಿತ್ರಗಳ ಜನಪ್ರಿಯ ಹಾಡುಗಳಿಗೆ ಇಬ್ಬರು ಜೊತೆ ಜೊತೆಯಾಗಿ ಹೆಜ್ಜೆ ಹಾಕಿದ್ದಾರೆ. ಹಾಡುಗಳು ಸಾಮಾಜಿಕ ಜಾಲತಾಣಗಳಲ್ಲಿ ಬಿಡುಗಡೆಯಾಗಿದ್ದು, ಕೆಲವೇ ನಿಮಿಷಗಳಲ್ಲಿ ನೆಟಿಜನ್​ಗಳಿಂದ ಮೆಚ್ಚುಗೆ ವ್ಯಕ್ತವಾಗಿದೆ. 

ಇನ್ನು ಅಭಿಷೇಕ್ ಅಂಬರೀಶ್ ಎರಡನೇ ಸಿನಿಮಾ 'ಬ್ಯಾಡ್ ಮ್ಯಾನರ್ಸ್' ಮುಗಿದಿದ್ದು ಶೀಘ್ರದಲ್ಲೆ ತೆರೆ ಕಾಣಲಿದೆ. 'ಬ್ಯಾಡ್ ಮ್ಯಾನರ್ಸ್' ಚಿತ್ರದಲ್ಲಿ ಅಭಿಷೇಕ್​ಗೆ ರಚಿತಾ ರಾಮ್ ಮತ್ತು ಪ್ರಿಯಾಂಕಾ ನಾಯಕಿಯರಾಗಿ ನಟಿಸಿದ್ದು, ದುನಿಯಾ ಸೂರಿ ಈ ಚಿತ್ರವನ್ನು ನಿರ್ದೇಶಿಸಿದ್ದಾರೆ. ಇದರ ನಡುವೆ ಅವರು 'ಕಾಳಿ' ಎಂಬ ಚಿತ್ರಕ್ಕೂ ಒಪ್ಪಿಗೆ ಸೂಚಿಸಿದ್ದಾರೆ. 

ಈ ಚಿತ್ರವನ್ನು 'ಮುಂಗಾರು ಮಳೆ' ಖ್ಯಾತಿಯ ಕೃಷ್ಣ ನಿರ್ದೇಶನ ಮಾಡಲಿದ್ದಾರೆ. ಇದಾದ ಬಳಿಕ ರಾಕ್‌ಲೈನ್ ವೆಂಕಟೇಶ್ ನಿರ್ಮಾಣ ಹಾಗೂ ಮಹೇಶ್ ಕುಮಾರ್ ನಿರ್ದೇಶನದ ಮತ್ತೊಂದು ಸಿನಿಮಾ ಕೂಡ ಸೆಟ್ಟೇರಬೇಕಿದೆ. (ಪ್ರೀಯ ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkarunadu.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕರುನಾಡು ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.