ಮಂಗಳೂರಿನ ನ ಟಿ ಜೊತೆ ತರುಣ್ ಸುಧೀರ್ ಮದುವೆ ಫಿಕ್ಸ್; ಹುಡುಗಿ ಮಾತ್ರ ದಂತದಗೊಂಬೆ
ಖ್ಯಾತ ಖಳನಟ ಸುಧೀರ್ ಅವರ ಕಿರಿಯ ಪುತ್ರ ಕನ್ನಡ ಚಿತ್ರರಂಗದ ಖ್ಯಾತ ನಿರ್ದೇಶಕ ತರುಣ್ ಸುಧೀರ್ ಸದ್ಯದಲ್ಲೇ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ ಎನ್ನುವ ಸುದ್ದಿ ಎಲ್ಲೆಡೆ ಹರಿದಾಡುತ್ತಿದೆ. ಸದ್ಯ ಕಿರುತೆರೆಯ ಮಹಾನಟಿ ರಿಯಾಲಿಟಿ ಶೋನಲ್ಲಿ ತೀರ್ಪುಗಾರರಾಗಿ ಕಾಣಿಸಿಕೊಳ್ಳುತ್ತಿರುವ ತರುಣ್ ಸುಧೀರ್, ಹೊಸ ಜೀವನ ಆರಂಭಿಸಲು ಸಜ್ಜಾಗಿದ್ದಾರೆ ಎನ್ನುವ ಮಾತುಗಳು ಜೋರಾಗಿಯೇ ಕೇಳಿ ಬರುತ್ತಿದೆ.
ನಟರಾಗಿದ್ದ ತರುಣ್ ಸುಧೀರ್ ಚೌಕ ಚಿತ್ರದ ಮೂಲಕ ನಿರ್ದೇಶಕರಾದರು. ಚೌಕ ಸೂಪರ್ ಹಿಟ್ ಆದ ಬಳಿಕ ನಟ ದರ್ಶನ್ ಜೊತೆ ಬ್ಯಾಕ್ ಟು ಬ್ಯಾಕ್ ಎರಡು ಹಿಟ್ ಸಿನಿಮಾಗಳನ್ನು ನೀಡಿದ್ದು, ಕಾಟೇರ ಚಿತ್ರ ಸೂಪರ್ ಡೂಪರ್ ಹಿಟ್ ಆಗಿತ್ತು. ಹೀಗೆ ಸಾಲು ಸಾಲು ಸಿನಿಮಾಗಳ ಯಶಸ್ಸಿನ ಬಳಿಕ ಸದ್ಯ 4ನೇ ಸಿನಿಮಾದ ತಯಾರಿಯಲ್ಲಿರುವ ತರುಣ್ ಸುಧೀರ್ ಮದುವೆಗೂ ಕೂಡ ತಯಾರಿ ನಡೆಸುತ್ತಿದ್ದಾರೆ ಎನ್ನುವ ಮಾತು ಹರಿದಾಡುತ್ತಿದೆ.
ಖಳನಟ ಸುಧೀರ್ ಹಾಗೂ ಮಾಲತಿ ಅವರ ಕಿರಿಯ ಪುತ್ರ ತರುಣ್ ಸುಧೀರ್ 40ರ ವಯಸ್ಸಿನ ಗಡಿಯಲ್ಲಿದ್ದಾರೆ. ಜೊತೆಗೆ ನಿರ್ದೇಶಕನಾಗಿ ಇತ್ತೀಚಿನ ವರ್ಷಗಳಲ್ಲಿ ಯಶಸ್ಸು ಕಾಣುತ್ತಿರುವ ತರುಣ್, ಕನ್ನಡ ಚಿತ್ರರಂಗಕ್ಕೆ ಮತ್ತಷ್ಟು ಉತ್ತಮ ಸಿನಿಮಾಗಳನ್ನು ನೀಡಬೇಕು ಎನ್ನುವ ಅಭಿಲಾಷೆಯಲ್ಲಿದ್ದಾರೆ.
ಹೌದು ನಟ, ನಿರ್ದೇಶಕ ತರುಣ್ ಸುಧೀರ್ ಕನ್ನಡ ಚಿತ್ರರಂಗದ ಖ್ಯಾತ ನಟಿ ಸೋನಾಲ್ ಮೊಂತೆರೊ ಅವರ ಕೈ ಹಿಡಿಯಲಿದ್ದಾರೆ ಎನ್ನುವ ಸುದ್ದಿ ಜೋರಾಗಿಯೇ ಕೇಳಿ ಬರುತ್ತಿದೆ. ರಾಬರ್ಟ್ ಚಿತ್ರದಲ್ಲಿ ವಿನೋದ್ ಪ್ರಭಾಕರ್ ಜೋಡಿಯಾಗಿ ಕಾಣಿಸಿಕೊಂಡಿದ್ದ ಸೋನಾಲ್ ಮೊಂತೆರೊ, ಝೈದ್ ಖಾನ್ ಅಭಿನಯದ ಬನರಾಸ್ ಚಿತ್ರದಲ್ಲಿ ಮತ್ತಷ್ಟು ಮಿಂಚಿದ್ದರು.
ಇನ್ನು ತರುಣ್ ಸುಧೀರ್ ಹಾಗೂ ಸೋನಲ್ ಆಗಸ್ಟ್ 10ರಂದು ಹಸೆಮಣೆ ಏರಲಿದ್ದಾರೆ ಎನ್ನಲಾಗುತ್ತಿದ್ದು, ಈ ಬಗ್ಗೆ ಯಾವುದೇ ಅಧೀಕೃತ ಮಾಹಿತಿ ಹೊರ ಬಿದ್ದಿಲ್ಲ. ತರುಣ್ ಸುಧೀರ್ ಆಗಲೀ, ನಟಿ ಸೋನಲ್ ಆಗಲೀ, ಅವರ ಕುಟುಂಬಸ್ಥರು ಹಾಗೂ ಆಪ್ತರು ಯಾರೂ ಈ ಬಗ್ಗೆ ಅಧೀಕೃತ ಮಾಹಿತಿ ನೀಡಿಲ್ಲ. ಆದರೆ ತರುಣ್ ಸುಧೀರ್ ಹಾಗೂ ಸೋನಲ್ ಮದುವೆಯಾಗಲಿದ್ದಾರೆ ಎನ್ನುವ ಸುದ್ದಿ ಸ್ಯಾಂಡಲ್‌ವುಡ್‌ನಲ್ಲಿ ಹರಿದಾಡುತ್ತಿದೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.