ಆ ಭಗವಂತ ಎಲ್ಲರಿಗೂ 24 ಗಂಟೆ ಕೊಟ್ಟಿದ್ದಾನೆ, ಕೋಟಿಯ ಒಡತಿಯಿಂದ ಯುವಕರಿಗೆ ಬುದ್ದಿವಾದ
Mar 25, 2025, 10:27 IST
|

ಇಂದಿನ ನವ ಯುವಕರಿಗೆ ಮಾದರಿ ಆಗಿರುವ ಇನ್ಫೋಸಿಸ್ ಸಂಸ್ಥೆ ಮಾಲಿಕರು ಭಾರತೀಯ ಯುವಕರು ವಾರಕ್ಕೆ 70 ಗಂಟೆ ಕೆಲಸ ಮಾಡಬೇಕು ಎಂದು ಕಳೆದ ವರ್ಷ ಇನ್ಫೋಸಿಸ್ ಸಹ ಸಂಸ್ಥಾಪಕ ನಾರಾಯಣ ಮೂರ್ತಿ ನೀಡಿದ್ದ ಹೇಳಿಕೆ ಸಾಮಾಜಿಕ ಮಾಧ್ಯಮದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿತ್ತು. ಈ ವಿಚಾರವಾಗಿ ಪರ-ವಿರೋಧ ಚರ್ಚೆಗಳು ನಡೆದಿದ್ದವು.
ಬಳಿಕ ಮುಂಬೈನ ಎಎಂಸಿಯ ಕಿಲಾಚಂದ್ ಸ್ಮಾರಕ ಉಪನ್ಯಾಸದಲ್ಲಿ ಮಾತನಾಡುವಾಗ ಸ್ಪಷ್ಟನೆ ನೀಡಿದ್ದ ಅವರು, ಯಾರೊಬ್ಬರು ಯಾರ ಮೇಲೂ ಒತ್ತಾಯಪೂರ್ವಕವಾಗಿ ಅದನ್ನು ಹೇರುವಂತಿಲ್ಲ ಎಂದಿದ್ದರು.ಇದೀಗ ಪತಿ ನಾರಾಯಣ ಮೂರ್ತಿಯವರ ವಾರಕ್ಕೆ 70 ಗಂಟೆ ಕೆಲಸ ಮಾಡಬೇಕು ಎನ್ನುವ ಹೇಳಿಕೆಗೆ ಪ್ರತಿಕ್ರಿಯಿಸಿರುವ ರಾಜ್ಯಸಭಾ ಸದಸ್ಯೆ ಸುಧಾ ಮೂರ್ತಿ, ಜನರು ಗಂಭೀರವಾಗಿ ಮತ್ತು ಉತ್ಸಾಹದಿಂದ ಏನನ್ನಾದರೂ ಮಾಡಲು ಎದುರು ನೋಡಿದಾಗ ಸಮಯ ಎಂದಿಗೂ ಮಿತಿಯಾಗುವುದಿಲ್ಲ ಎಂದು ಹೇಳಿದ್ದಾರೆ.
ಎನ್‌ಡಿಟಿವಿ ಆಯೋಜಿಸಿದ್ದ ಇಂಡಿಯಾ ಥ್ರೂ ದಿ ಐಸ್ ಆಫ್ ಇಟ್ಸ್ ಐಕಾನ್ಸ್ ಕಾರ್ಯಕ್ರಮದಲ್ಲಿ ಮಾತನಾಡಿ, ತಮ್ಮ ಪತಿ ಯಾವುದೇ ಹಣವಿಲ್ಲದೆ, ಆದರೆ, ಸಮರ್ಪಿತ ಸಹೋದ್ಯೋಗಿಗಳೊಂದಿಗೆ ಇನ್ಫೋಸಿಸ್ ಅನ್ನು ಕಟ್ಟಲು ನಿರ್ಧರಿಸಿದರು. ಅವರು ಆಗ 70 ಗಂಟೆಗಳ ಕಾಲ ಅಥವಾ ಕೆಲವೊಮ್ಮೆ ಇನ್ನೂ ಹೆಚ್ಚು ಗಂಟೆ ಕೆಲಸ ಮಾಡಿದರು. ಹಾಗಾಗಿಯೇ ಅಷ್ಟು ದೊಡ್ಡ ಸಂಸ್ಥೆಯನ್ನು ಕಟ್ಟಲು ಸಾಧ್ಯವಾಯಿತು ಎಂದಿದ್ದಾರೆ.
ಇಲ್ಲದಿದ್ದರೆ ಅದು ಸಾಧ್ಯವಾಗುತ್ತಿರಲಿಲ್ಲ. ಇನ್ಫೋಸಿಸ್‌ನ ಯಶಸ್ಸು ಯಾವುದೇ ಶಾರ್ಟ್‌ಕಟ್‌ಗಳು ಅಥವಾ ಮಂತ್ರದಂಡದಿಂದ ಆಗಿಲ್ಲ. ಬದಲಾಗಿ, ಇದು ಕಠಿಣ ಪರಿಶ್ರಮ, ಸ್ವಲ್ಪ ಅದೃಷ್ಟ, ಸರಿಯಾದ ಸಮಯದಲ್ಲಿ ಸರಿಯಾದ ಸ್ಥಳದಲ್ಲಿರುವುದು ಮತ್ತು ಎಲ್ಲವೂ ಸರಿಯಾಗಿ ನಡೆದುದರ ಪರಿಣಾಮವಾಗಿದೆ ಎಂದು ಶ್ರೀಮತಿ ಮೂರ್ತಿ ಹೇಳಿದರು.ವೈಯಕ್ತಿಕ ಜೀವನದ ಬಗ್ಗೆ ಮಾತನಾಡಿದಾಗ, ನಾನು ಮೂರ್ತಿ ಅವರಿಗೆ ಇನ್ಫೋಸಿಸ್ ಅನ್ನು ನೋಡಿಕೊಳ್ಳಿ ಎಂದು ಹೇಳಿದ್ದೆ.
ನಾನು ನನ್ನ ಕುಟುಂಬವನ್ನು ನೋಡಿಕೊಳ್ಳುತ್ತಿದ್ದೆ. ನಾನು ಆಗ ಗಟ್ಟಿ ನಿರ್ಧಾರವನ್ನು ತೆಗೆದುಕೊಂಡೆ ಮತ್ತು ನನ್ನ ಪತಿ ಹೆಚ್ಚಿನ ಸಮಯ ಮನೆಯಲ್ಲಿರುವುದಿಲ್ಲ ಎಂದು ಹೇಳುವುದರಲ್ಲಿ ಅರ್ಥವಿಲ್ಲ ಎಂಬುದನ್ನು ನಾನು ಕಂಡುಕೊಂಡೆ. ಏಕೆಂದರೆ, ಅವರು ದೊಡ್ಡ ಕೆಲಸ ಮಾಡುತ್ತಿದ್ದರು ಎಂದು ಅವರು ಹೇಳಿದರು.(ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.