ಮಗನ ಕಾಲೇಜು ವೆಚ್ಚಕ್ಕಾಗಿ ಸ್ವಂತ ತಾಯಿ ಮಾಡಿದ ತ್ಯಾಗ ನೋಡಿ ದೇಶದ ಪ್ರಜೆಗಳು ಅ.ಚ್ಚರಿ

 | 
Nd

ಮಕ್ಕಳಿಗಾಗಿ ತಾಯಿ ಯಾವ ತ್ಯಾಗಕ್ಕೂ ಸಿದ್ಧರಾಗಿರುತ್ತಾರೆ ಎಂಬ ಮಾತುಗಳನ್ನು ಕೇಳಿರುತ್ತೇವೆ. ಸಿನಿಮಾ, ಕಥೆ ಕಾದಂಬರಿಗಳಲ್ಲಿ ಓದಿರುತ್ತೇವೆ. ಆದರೆ, ತಮಿಳುನಾಡು ಇದಕ್ಕೆ ಪ್ರತ್ಯಕ್ಷ ಸಾಕ್ಷಿಯಾಗಿದೆ. ತನ್ನ ಮಗನ ಭವಿಷ್ಯವನ್ನು ಉಜ್ವಲಗೊಳಿಸುವ ಬಯಕೆಯಿಂದ ತಾಯಿಯೊಬ್ಬರು ತಮ್ಮ ಪ್ರಾಣವನ್ನೇ ಬಲಿ ನೀಡಿರುವ ದಾರುಣ ಘಟನೆ ನಡೆದಿದೆ.

ತಮಿಳುನಾಡಿನಲ್ಲಿ ನಡೆದ ಈ ದಾರುಣ ಘಟನೆಯೊಂದರಲ್ಲಿ ಮಹಿಳೆಯೊಬ್ಬರು ಚಲಿಸುತ್ತಿದ್ದ ಬಸ್ಸಿನ ಮುಂದೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪಾಪತಿ ಎಂದು ಗುರುತಿಸಲಾಗಿರುವ ಮಹಿಳೆ ಸೇಲಂ ಜಿಲ್ಲೆಯ ಕಲೆಕ್ಟರ್ ಕಚೇರಿಯಲ್ಲಿ ಸ್ವಚ್ಛತಾ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದರು. 

ಮಗನ ವಿದ್ಯಾಭ್ಯಾಸಕ್ಕೆ ಸಂಬಂಧಿಸಿದ ಆರ್ಥಿಕ ಅಡಚಣೆಗಳಿಂದಾಗಿ ಅವರು ಈ ನಿರ್ಧಾರ ಕೈಗೊಂಡಿದ್ದಾರೆ ಎನ್ನಲಾಗ್ತಿದೆ. 45 ವರ್ಷದ ಪಾಪತಿ ಅವರು ಜೂನ್ 28 ರಂದು ವೇಗವಾಗಿ ಬಂದ ಬಸ್‌ಗೆ ಡಿಕ್ಕಿ ಹೊಡೆದು ಸಾವನ್ನಪ್ಪಿದರು. ಅಪಘಾತ ಸಂತ್ರಸ್ತರಿಗೆ ಸರ್ಕಾರದಿಂದ ಪರಿಹಾರ ನೀಡುತ್ತಾರೆ ಎಂದು ಯಾರೋ ತಪ್ಪು ಮಾಹಿತಿ ನೀಡಿದ ಕಾರಣ, ತನ್ನ ಮಗನ ಕಾಲೇಜು ಶುಲ್ಕ ಕಟ್ಟಲು ಹಣ ಮತ್ತು ಮಗನ ಭವಿಷ್ಯಕ್ಕೆ ಹಣ ಸಹಾಯವಾಗುತ್ತದೆ ಎಂದು ಇಂತಹ ಕೆಟ್ಟ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.

ಮಗನ ಕಾಲೇಜು ಶುಲ್ಕವನ್ನು ಪಾವತಿಸಲು ಸಾಧ್ಯವಾಗದ ಕಾರಣ ಪಾಪತಿ ಖಿನ್ನತೆಗೆ ಒಳಗಾಗಿದ್ದರು ಎಂದು ಮೂಲಗಳು ತಿಳಿಸಿವೆ. ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದರೆ ಆಕೆಯ ಕುಟುಂಬಕ್ಕೆ 45,000 ರೂ.ಗಳನ್ನು ನೀಡುವುದಾಗಿ ಹೇಳಿ ಯಾರೋ ಮೃತ ಮಹಿಳೆಗೆ ತಪ್ಪಿ ಮಾಹಿತಿ ನೀಡಿದ್ದರು. ತನ್ನ ಮಗನ ಕಾಲೇಜು ಶುಲ್ಕಕ್ಕಾಗಿ ಹಣವನ್ನು ಹೊಂದಿಸಲು ಹೆಣಗಾಡುತ್ತಿದ್ದ ಅವರಿಗೆ ಇದು ದಾರಿಯಾಗಿ ಕಾಣಿಸಿದೆ. 

ಪತಿಯಿಂದ ಬೇರ್ಪಟ್ಟ ನಂತರ ಕಳೆದ 15 ವರ್ಷಗಳಿಂದ ಪಾಪತಿ ತನ್ನ ಮಕ್ಕಳನ್ನು ಒಂಟಿಯಾಗಿ ಬೆಳೆಸಿದ್ದರು.
ಅಪಘಾತದ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು, ನೆಟ್ಟಿಗರು ಸಂತಾಪ ವ್ಯಕ್ತಪಡಿಸಿದ್ದಾರೆ. ತನ್ನ ಮಗನ ಶಿಕ್ಷಣಕ್ಕಾಗಿ ಶುಲ್ಕ ಪಾವತಿಸಲು ಇಂತಹ ಕಠಿಣ ನಿರ್ಧಾರ ತೆಗೆದುಕೊಳ್ಳಲು ತಾಯಿಯನ್ನು ಪ್ರೇರೇಪಿಸಿದ ಶಿಕ್ಷಣ ಸಂಸ್ಥೆಗಳು ಮತ್ತು ರಾಜ್ಯ ಸರ್ಕಾರದ ಕ್ರಮಗಳನ್ನು ಪ್ರಶ್ನಿಸಿದ್ದಾರೆ. ಇನ್ನು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಇತರ ಕಾರಣಗಳೇನಾದರು ಇರಬಹುದೇ ಎಂದು ತನಿಖೆ ನಡೆಸುತ್ತಿದ್ದಾರೆ.