ಹೊಸಪೇಟೆಯಲ್ಲಿ ನಡೆದ ಅಪಘಾತ ನೋಡಿ ಸಿಎಮ್ ಕೂಡ ಕಣ್ಣೀರು

 | 
Bs

ಅವಸರವೇ ಅಪಾಯಕ್ಕೆ ಕಾರಣ ಎಂದು ಅರಿತಿದ್ದರೂ ಓವರ್ ಟೇಕ್ ಮಾಡುವುದನ್ನು ಕಡಿಮೆ ಮಾಡುವುದಿಲ್ಲ. ಅಲ್ಲದೇ ಗಾಡಿ ಓಡಿಸುವಾಗ ಮೊಬೈಲ್ ಬಳಸಿದರೆ ದಂಡ ಹಾಕಿದರೂ ಮೊಬೈಲ್ ಬಳಸುವುದನ್ನು ಕೂಡ ಬಿಡುವುದಿಲ್ಲ. ಇದೆಲ್ಲದರ ಪರಿಣಾಮವಾಗಿ ಇತ್ತೀಚಿಗೆ ರಸ್ತೆ ಅಪಘಾತಗಳು ಹೆಚ್ಚಾಗುತ್ತಿವೆ. ಇದೀಗ ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕು ವಡ್ಡರಹಳ್ಳಿ ಸೇತುವೆ ಬಳಿ ಶುಕ್ರವಾರ ಮಧ್ಯಾಹ್ನ ಎರಡು ಆಟೋ ಮತ್ತು ಲಾರಿ ನಡುವೆ ಢಿಕ್ಕಿಯಾಗಿ ಆಟೋದಲ್ಲಿದ್ದ7 ಜನರು ದಾರುಣವಾಗಿ ಮೃತಪಟ್ಟಿದ್ದಾರೆ. 

8 ಜನರು ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಲಾರಿಯ ಢಿಕ್ಕಿ ರಭಸಕ್ಕೆ ಆಟೋ ಹಲವು ಮೀಟರ್ ದೂರ ಹೋಗಿ ಬಿದ್ದಿದೆ ಎಂದು ಬಲ್ಲ ಮೂಳಗಲು ತಿಳಿಸಿವೆ. ಘಟನೆಯಲ್ಲಿ ಐವರು ಮಹಿಳೆಯರು, ಇಬ್ಬರು ಪುರುಷರು ಮೃತಪಟ್ಟಿದ್ದಾರೆ. ಅಪಘಾತಕ್ಕೀಡಾದ ಎರಡು ಆಟೋಗಳ ಪೈಕಿ ಒಂದು ಆಟೋದಲ್ಲಿ ಬಳ್ಳಾರಿಯ ಕೌಲ್‌ಬಜಾರ್‌ನ ಗೌತಮ್ ನಗರಕ್ಕೆ ಸೇರಿದವರು ಹೊಸಪೇಟೆಗೆ ತುಂಗಭದ್ರ ಜಲಾಶಯ ನೋಡಲು ಹೊರಟಿದ್ದರು. 

ಎರಡು ಆಟೋದಲ್ಲಿ 20 ಜನರಿದ್ದರು ಎನ್ನಲಾಗಿದೆ. ಈ ಇಪ್ಪತ್ತು ಜನರ ಪೈಕಿ ಒಂದು ಆಟೋದಲ್ಲಿದ್ದ ಶಾಶಮ್ಮ ಎಂಬ ಒಬ್ಬ ಮಹಿಳೆ ಮೃತಪಟ್ಟಿದ್ದಾರೆ. ಮತ್ತೊಂದು ಆಟೋದಲ್ಲಿದ್ದ ಆರು ಮಂದಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಕೆಲವು ಗಾಯಾಳುಗಳನ್ನು ಹೊಸಪೇಟೆಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇಬ್ಬರು ತೀವ್ರವಾಗಿ ಗಾಯಗೊಂಡವರನ್ನು ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. ಹೊಸಪೇಟೆ ಗ್ರಾಮೀಣ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ ನಿರ್ದೇಶನದ ಮೇರೆಗೆ ಘಟನೆಯಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ ಎರಡು ಲಕ್ಷ ರೂ. ಪರಿಹಾರ ಮತ್ತು ಆಸ್ಪತ್ರೆ ವೆಚ್ಚಕ್ಕಾಗಿ ತಲಾ 50 ಸಾವಿರ ರೂ. ಪರಿಹಾರವನ್ನು ವಿತರಿಸುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ನಾಗೇಂದ್ರ ತಿಳಿಸಿದ್ದಾರೆ. ಮೃತರೆಲ್ಲರೂ ಬಳ್ಳಾರಿಯ ಕೌಲ್ ಬಜಾರ್ ನ ಗೌತಮ್ ನಗರದವರು ಅಂತ ಹೇಳಲಾಗುತ್ತಿದೆ. ನಿನ್ನೆ ಬಕ್ರೀದ್ ಹಬ್ಬ ಆಚರಣೆ ಮಾಡಿದ್ದ ಕುಟುಂಬಸ್ಥರು ಇಂದು ಬಳ್ಳಾರಿಯಿಂದ ಟಿಬಿ ಡ್ಯಾಂ ವೀಕ್ಷಣೆಗೆ ತೆರಳಿದ್ದ ಸಂದರ್ಭದಲ್ಲಿ ದುರ್ಘಟನೆ ಸಂಭವಿಸಿದೆ. 

ಬಳ್ಳಾರಿಗೆ ವಾಪಾಸ್ ಬರುವಾಗ ವಡ್ಡರಹಳ್ಳಿ ರೈಲ್ವೆ ಬ್ರಿಡ್ಜ್ ಬಳಿ ಅಪಘಾತ ಸಂಭವಿಸಿದ್ದು, ಡಿಕ್ಕಿ ರಭಸಕ್ಕೆ ಬ್ರಿಡ್ಜ್​ನಿಂದ ಆಟೋ ಕೆಳಕ್ಕೆ ಉರುಳಿ ಬಿದ್ದಿದೆ. ಘಟನೆಯಲ್ಲಿ ಗಾಯಗೊಂಡಿರುವ ಇಬ್ಬರ ಪರಿಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ. (ಪ್ರೀಯ ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.