CSK ಸೋತಿದ್ದಕ್ಕೆ ಮುದ್ದಾದ ಯುವತಿ ಎದ್ದು ಬಿದ್ದು ಕಣ್ಣೀ ರು;

 | 
Gui

ಕೆಲ ದಿನಗಳ ಹಿಂದಷ್ಟೇ ನಡೆದ ಐಪಿಎಲ್ ಕ್ರಿಕೆಟ್ ಮ್ಯಾಚ್ ಅಲ್ಲಿ ಇಲ್ಲಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಉತ್ತಮ ರನ್‌ರೇಟ್‌ನೊಂದಿಗೆ ಗೆಲ್ಲಲೇಬೇಕಾದ ಪಂದ್ಯದಲ್ಲಿ ಐದು ಬಾರಿಯ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ 27 ರನ್ ಅಂತರದ ಗೆಲುವು ದಾಖಲಿಸಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು, ಪ್ರಸಕ್ತ ಸಾಲಿನ ಐಪಿಎಲ್ ಟೂರ್ನಿಯಲ್ಲಿ ಪ್ಲೇ-ಆಫ್‌ಗೆ ಪ್ರವೇಶಿಸಿದೆ.

ಐಪಿಎಲ್ 17ನೇ ಆವೃತ್ತಿಯ ಮೊದಲ ಎಂಟು ಪಂದ್ಯಗಳಲ್ಲಿ ಆರ್‌ಸಿಬಿ ಒಂದೇ ಒಂದು ಪಂದ್ಯದಲ್ಲಿ ಮಾತ್ರ ಗೆಲ್ಲುವಲ್ಲಿ ಯಶಸ್ವಿಯಾಗಿತ್ತು. ಅಲ್ಲದೆ ಸತತ ಆರು ಪಂದ್ಯಗಳಲ್ಲಿ ಸೋಲು ಕಂಡಿತ್ತು. ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿತ್ತು. ಆದರೆ ಬಳಿಕದ ಎಲ್ಲ ಆರು ಪಂದ್ಯಗಳನ್ನು ಗೆದ್ದು ಆರ್‌ಸಿಬಿ, ಅಂತಿಮ ನಾಲ್ಕರ ಘಟ್ಟಕ್ಕೆ ಪ್ರವೇಶಿಸಿದೆ. ಇನ್ನು 2011ರ ಆವೃತ್ತಿಯಲ್ಲಿ ಆರ್‌ಸಿಬಿ ಸತತ ಏಳು ಮತ್ತು 2009 ಹಾಗೂ 2016ರಲ್ಲಿ ಸತತ ಐದು ಪಂದ್ಯಗಳಲ್ಲಿ ಜಯ ಗಳಿಸಿತ್ತು.

ಮೊದಲು ಬ್ಯಾಟ್ ಮಾಡಿದ ಆರ್‌ಸಿಬಿ 20 ಓವರ್‌ಗಳಲ್ಲಿ 5 ವಿಕೆಟ್‌ಗೆ 218 ರನ್ ಗಳಿಸಿತು. ಇದಾದ ನಂತರ ಬೆಂಗಳೂರು ತಂಡವು ಪ್ಲೇಆಫ್‌ಗೆ ಅರ್ಹತೆ ಪಡೆಯಲು ಚೆನ್ನೈ ತಂಡವನ್ನು 191 ರನ್‌ಗಳಿಗೆ ಕಟ್ಟಿಹಾಕಿತು. ಅಂದರೆ, ಪ್ಲೇ ಆಫ್‌ಗೆ ಅರ್ಹತೆ ಪಡೆಯಲು ಆರ್​ಸಿಬಿ ಪಂದ್ಯವನ್ನು 18 ರನ್‌ಗಳಿಂದ ಗೆಲ್ಲಬೇಕಾಗಿತ್ತು. ಆದರೆ ಬೆಂಗಳೂರು ತಂಡವು 27 ರನ್‌ಗಳಿಂದ ಗೆದ್ದು ಬೀಗಿತ್ತು.

ಅದ್ರಲ್ಲೂ ಮೊನ್ನೆ ನಡೆದ ಆರ್‌ಸಿಬಿ & ಚೆನ್ನೈ ನಡುವಿನ ಕ್ರಿಕೆಟ್ ಮ್ಯಾಚ್ ಈಗ ಎಲ್ಲೆಲ್ಲೂ ಕಿಚ್ಚು ಹಬ್ಬಿಸುತ್ತಿದೆ. ಯಾಕಂದ್ರೆ ಆರ್‌ಸಿಬಿ ಫ್ಯಾನ್ಸ್ ಅಂತಾ ಹೇಳಿಕೊಂಡ ಕೆಲವರು ಚೆನ್ನೈ ಅಭಿಮಾನಿಗಳಿಗೆ ಕಿರುಕುಳ ನೀಡಿರುವ ವಿಡಿಯೋ ವೈರಲ್ ಆಗುತ್ತಿವೆ ಎಂಬ ಆರೋಪ ಈಗ ಕೇಳಿಬಂದಿದೆ. ಅದಷ್ಟೇ ಅಲ್ಲದೇ RCB ಫ್ಯಾನ್ ಎಂದಿದ್ದಕ್ಕೆ CSK ಫ್ಯಾನ್ ಆಗಿರುವ ಹುಡುಗಿ ಒಬ್ಬಳು ಬ್ರೇಕ್ ಅಪ್ ಮಾಡಿಕೊಂಡು ಸುದ್ದಿಯಾಗಿದ್ದಾಳೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.