DYSp ಆತನ ಮನೆಗೂ ಕರೆದಿದ್ದ, ಸಹಾಯ ಮಾಡುವ ನೆಪದಲ್ಲಿ ನನ್ನ ಮಾನಕಳೆದ; ಸಂತ್ರಸ್ತೆ
Jan 10, 2025, 16:48 IST
|
ಪೋಲಿಸ್ ನಮ್ಮ ಕಾಯುತ್ತಾರೆ ಎಂದುಕೊಂಡರೆ ಅವರೇ ಮಾನ ತೆಗೆಯುತ್ತಿದ್ದಾರೆ.ದೂರು ನೀಡಲೆಂದು ಪೊಲೀಸ್ ಠಾಣೆಗೆ ಬಂದ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಅಮಾನತುಗೊಂಡು ನ್ಯಾಯಾಂಗ ಬಂಧನದಲ್ಲಿರುವ ಡಿವೈಎಸ್‌ಪಿ ಎ ರಾಮಚಂದ್ರಪ್ಪ ವಿರುದ್ಧ ಮತ್ತೊಬ್ಬ ಮಹಿಳೆ ಗುರುವಾರ ಲೈಂಗಿಕ ಕಿರುಕುಳದ ಆರೋಪ ಮಾಡಿದ್ದಾರೆ.
ಕೊರಟಗೆರೆ ತಾಲ್ಲೂಕಿನ ಮಹಿಳೆಯೊಬ್ಬರು ಈ ಸಂಬಂಧ ಗುರುವಾರ ಮಧುಗಿರಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.ತಮ್ಮ ಕಚೇರಿಯಲ್ಲಿ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪದಡಿ ಬಂಧಿತರಾಗಿದ್ದ ಡಿವೈಎಸ್‌ಪಿ ಎ ರಾಮಚಂದ್ರಪ್ಪ ಅವರನ್ನು ಜೆಎಂಎಫ್‌ಸಿ ನ್ಯಾಯಾಲಯ ಜನವರಿ 4ರಂದು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ಲೈಂಗಿಕ ದೌರ್ಜನ್ಯದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ ನಂತರ ಕರ್ನಾಟಕ ಪೊಲೀಸ್ ಮಹಾನಿರ್ದೇಶಕರು ರಾಮಚಂದ್ರಪ್ಪ ಅವರನ್ನು ಸೇವೆಯಿಂದ ಅಮಾನತು ಮಾಡಿದ್ದರು. ನ್ಯಾಯಾಂಗ ಬಂಧನದ ಆದೇಶದ ನಂತರ ರಾಮಚಂದ್ರಪ್ಪ ಅವರನ್ನು ತಾಲ್ಲೂಕು ಉಪಕಾರಾಗೃಹಕ್ಕೆ ಕಳುಹಿಸಲಾಯಿತು.
ನಿವೇಶನ ನೀಡುವುದಾಗಿ ಹೇಳಿ ತನ್ನಿಂದ 12 ಲಕ್ಷ ರೂ. ಹಣ ಪಡೆದ ಪ್ರಭಾವಿ ವ್ಯಕ್ತಿಯೊಬ್ಬ ನಿವೇಶನವನ್ನೂ ನೀಡದೆ, ಹಣವನ್ನೂ ಹಿಂತಿರುಗಿಸದೆ ವಂಚಿಸಿದ್ದಾನೆ. ಆತನ ವಿರುದ್ಧ ಅಗತ್ಯ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ನಿರ್ದೇಶನ ನೀಡಬೇಕೆಂದು ಕೋರಿ ಮಹಿಳೆಯು ರಾಜ್ಯ ಮಹಿಳಾ ಆಯೋಗದ ಮೊರೆ ಹೋಗಿದ್ದರು. ಈ ಸಂಬಂಧ ಮಹಿಳಾ ಆಯೋಗವು ತುಮಕೂರು ಜಿಲ್ಲಾ ಪೊಲೀಸ್ ಕಚೇರಿಗೆ ಪತ್ರ ಬರೆದಿತ್ತು. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.