ಇನ್ನುಮುಂದೆ ಪ್ರೀತಿ ಮಾಡಿದ ಜೋಡಿ 'ಆ ಕೆಲಸ ಮಾಡಿದರೆ ತಪ್ಪಿಲ್ಲ‌ ಎಂದ ಹೈಕೋರ್ಟ್;

 | 
ಹಗ೭

ಪ್ರೀತಿಸಿ ಮೋಸ ಮಾಡಿ ವಂಚಿಸಿದ ಎಂದು ಇನ್ಮುಂದೆ ಹೇಳುವಂತಿಲ್ಲ. ಹೌದು ಪ್ರೀತಿಸಿ ಮದುವೆ ಅಗದಿರೋದು ವಂಚನೆಯಲ್ಲ ಎಂದು ಹೈಕೋರ್ಟ್ ಹೇಳಿಕೆ ನೀಡಿದೆ.
ಮದುವೆಯಾಗುವ ಭರವಸೆ ನೀಡಿ ಬಳಿಕ ಅದನ್ನು ಉಲ್ಲಂಘಿಸಿದ್ದರೆ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 420 ಅಡಿಯಲ್ಲಿ ವಂಚನೆ ಅಪರಾಧವೆಂದು ಪರಿಗಣಿಸಲಾಗದು ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.

ಅಲ್ಲದೇ ಈ ಕುರಿತಂತೆ ಆರೋಪಿ ಯುವಕ ಹಾಗೂ ಆತನ ಕುಟುಂಬ ಸದಸ್ಯರ ವಿರುದ್ಧ ಪೊಲೀಸರು ದಾಖಲಿಸಿದ್ದ ಎಫ್ಐಆರ್ ನ್ನು ರದ್ದುಪಡಿಸಿದೆ. ಯುವತಿ ದಾಖಲಿಸಿರುವ ಎಫ್ಐಆರ್ ಅನ್ನು ರದ್ದುಪಡಿಸುವಂತೆ ಕೋರಿ ಬೆಂಗಳೂರಿನ ಕೆ.ಆರ್ ಪುರ ನಿವಾಸಿ ವೆಂಕಟೇಶ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ. ನಟರಾಜನ್ ಅವರಿದ್ದ ಏಕಸದಸ್ಯ ಪೀಠ ಈ ಆದೇಶ ಮಾಡಿದೆ.

ಪೀಠ ತನ್ನ ತೀರ್ಪಿನಲ್ಲಿ, ಅರ್ಜಿದಾರ ವ್ಯಕ್ತಿ ಯುವತಿಗೆ ಮದುವೆಯಾಗುವ ಭರವಸೆ ನೀಡಿ ಬಳಿಕ ಅದನ್ನು ಉಲ್ಲಂಘಿಸಿದ್ದಾರೆ ಎನ್ನಲಾಗಿದೆ. ಆದರೆ, ಮದುವೆಯಾಗುವ ಭರವಸೆ ನೀಡಿ ಬಳಿಕ ಅದನ್ನು ಉಲ್ಲಂಘಿಸಿದ್ದರೆ ವಂಚನೆ ಎನ್ನಲಾಗದು. ಭಾರತೀಯ ದಂಡ ಸಂಹಿತೆಯ ಸೆಕ್ಷನ್ 415ರಲ್ಲಿ ವಂಚನೆ ಕುರಿತು ನೀಡಿರುವ ವ್ಯಾಖ್ಯಾನದ ವ್ಯಾಪ್ತಿಗೆ ಮದುವೆ ಭರವಸೆ ಮುರಿಯುವುದನ್ನು ಸೇರಿಸಲಾಗದು.

 ಮೋಸ ಮಾಡುವ ಉದ್ದೇಶದಿಂದಲೇ ಒಪ್ಪಂದ ಮಾಡಿಕೊಂಡು ಬಳಿಕ ಅದನ್ನು ಉಲ್ಲಂಘಿಸಿದಾಗ ಮಾತ್ರ ಕ್ರಿಮಿನಲ್ ಪ್ರಕರಣ ದಾಖಲಿಸಬಹುದು. ಆದರೆ, ಅರ್ಜಿದಾರ ವ್ಯಕ್ತಿ ಮೋಸ ಮಾಡುವ ಉದ್ದೇಶದಿಂದಲೇ ಹೀಗೆ ಮಾಡಿದ್ದಾನೆ ಎಂಬುದನ್ನು ಯುವತಿ ತೋರಿಸಿಲ್ಲ ಎಂದು ಅಭಿಪ್ರಾಯಪಟ್ಟು ಪೊಲೀಸರು ದಾಖಲಿಸಿದ್ದ ಎಫ್ಐಆರ್ ಅನ್ನು ರದ್ದುಪಡಿಸಿ ಆದೇಶಿಸಿದೆ.