ಭಾರತದ ಭಾಷೆ ಹಿಂದಿ,ಕನ್ನಡ ಮಾತಾಡೋಲ್ಲ; ಟೋಲ್ ಸಿಬ್ಬಂದಿ ಕಿರಿಕ್ ವಿಡಿಯೋ ವೈರಲ್
Sep 20, 2024, 12:15 IST
|
ಕರ್ನಾಟಕದಲ್ಲಿ ಕನ್ನಡ ಮಾತನಾಡಬೇಕೆನ್ನುವ ವಿಚಾರಕ್ಕೆ ಸಂಬಂಧಪಟ್ಟಂತೆ ಆಗಾಗ ಜಗಳಗಳು, ಗಲಾಟೆಗಳು ನಡೆಯುತ್ತಲೇ ಇರುತ್ತದೆ. ಇದೀಗ ಇದಕ್ಕೆ ಸಂಬಂಧ ಪಟ್ಟ ವಿಡಿಯೋವೊಂದು ವೈರಲ್ ಆಗಿದ್ದು, ಟೋಲ್ ಸಿಬ್ಬಂದಿಯನ್ನು ಕನ್ನಡದಲ್ಲಿ ಮಾತನಾಡಬೇಕೆಂದು ಚಾಲಕ ಒತ್ತಾಯಿಸಲಾಗಿದೆ. ಆದರೆ ಸಿಬ್ಬಂದಿ ಮಾತ್ರ ಹಿಂದಿ ರಾಷ್ಟ್ರ ಭಾಷೆ, ಹಾಗಾಗಿ ನಾನು ಹಿಂದಿಯಲ್ಲಿ ಮಾತನಾಡುತ್ತೇನೆ ಎಂದು ತನ್ನನ್ನು ತಾನು ಸಮರ್ಥಿಸಿಕೊಂಡಿದ್ದು, ಈ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ.
ಕರ್ನಾಟಕದಲ್ಲಿ ಕನ್ನಡ ಮಾತಾನಾಡುವವರ ಸಂಖ್ಯೆಯು ಕಡಿಮೆಯಾಗುತ್ತಿದೆ. ಈಗಿನ ಯುವಕ ಯುವತಿಯರಂತೂ ಕನ್ನಡ ಗೊತ್ತಿದ್ದರೂ ಮಾತನಾಡದೇ, ಇಂಗ್ಲಿಷ್ ಸೇರಿದಂತೆ ಬೇರೆ ಭಾಷೆಯ ವ್ಯಾಮೋಹಕ್ಕೆ ಬಿದ್ದಿದ್ದಾರೆ. ಹೀಗಾಗಿ ಕನ್ನಡ ಭಾಷೆ ಉಳಿಸಿ ಬೆಳೆಸಿ ಎನ್ನುವ ಕೂಗುಗಳು ಆಗಾಗ ಕೇಳಿ ಬರುತ್ತಲೇ ಇರುತ್ತದೆ. ಆದರೆ ಇದೀಗ ವೈರಲ್ ಆಗಿರುವ ವಿಡಿಯೋದಲ್ಲಿ ಹಿಂದಿ ಮಾತನಾಡುತ್ತಿರುವ ಟೋಲ್ ಸಿಬ್ಬಂದಿಯ ವಿರುದ್ಧ ಕನ್ನಡಿಗನೊಬ್ಬನು ಗರಂ ಆಗಿದ್ದಾನೆ.
ಈ ವೇಳೆಯಲ್ಲೂ ಕನ್ನಡ ಭಾಷೆ ಮಾತನಾಡುವಂತೆ ಹೇಳುತ್ತಿದ್ದಂತೆ ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿದೆ.ಪೂಜಾ ಶರ್ಮಾ ಹೆಸರಿನ ಸೋಶಿಯಲ್ ಮೀಡಿಯಾ ಬಳಕೆದಾರರು ಈ ವಿಡಿಯೋವನ್ನು ಶೇರ್ ಮಾಡಿಕೊಂಡಿದ್ದು, ಉತ್ತರ ಭಾರತೀಯರನ್ನು ಕನ್ನಡ ಮಾತನಾಡುವಂತೆ ಹೇಗೆ ಒತ್ತಾಯಿಸಲಾಗುತ್ತದೆ ಎಂಬುದನ್ನು ನೋಡಿ ಎಂದು ಬರೆದುಕೊಂಡಿದ್ದಾರೆ. ವೈರಲ್ ವಿಡಿಯೋದಲ್ಲಿ ಟೋಲ್ ಸಿಬ್ಬಂದಿಯನ್ನು ಕನ್ನಡದಲ್ಲಿ ಮಾತನಾಡುವಂತೆ ಹೇಳುವುದನ್ನು ಕಾಣಬಹುದು. ಕಾರಿನಲ್ಲಿದ್ದ ವ್ಯಕ್ತಿ ಕೇಳಿದ ಪ್ರಶ್ನೆಗೆ ಟೋಲ್ ಸಿಬ್ಬಂದಿ ಕನ್ನಡ ಮಾತನಾಡುವುದಿಲ್ಲ.
ಈತನು ತನ್ನ ಫೋನ್ನಲ್ಲಿ ವಿಡಿಯೋ ರೆಕಾರ್ಡ್ ಮಾಡುವ ಮೂಲಕ ಪ್ರತಿಕ್ರಿಯೆ ನೀಡಿದ್ದು, ಭಾರತದ ಭಾಷೆ ಹಿಂದಿ ಅದನ್ನೇ ಮಾತನಾಡುತ್ತೇನೆ. ಇದು ಕೇಂದ್ರದ ಟೋಲ್, ಮಹಾರಾಷ್ಟ್ರದಲ್ಲಿ ಮರಾಠಿ, ತಮಿಳುನಾಡಿನಲ್ಲಿ ತಮಿಳು, ಕರ್ನಾಟಕದಲ್ಲಿ ಕನ್ನಡ ಈ ರೀತಿ ಮಾತನಾಡಲು ಆಗುವುದಿಲ್ಲ,. ಹಿಂದಿಯಷ್ಟೆ ಮಾತನಾಡುತ್ತೇನೆ ಎಂದು ಹೇಳುತ್ತಾನೆ. ಸಿಬ್ಬಂದಿಯು ಹೀಗೆನ್ನುತ್ತಿದ್ದಂತೆ ಕಾರಿನಲ್ಲಿದ್ದ ವ್ಯಕ್ತಿಯು ಕೋಪಗೊಂಡು, ಕರ್ನಾಟಕದಲ್ಲಿ ಇದ್ದು ಕನ್ನಡ ಮಾತನಾಡೋದಿಲ್ಲ ಅಂತೀಯಾ ಎಂದು ಪ್ರಶ್ನಿಸಿದ್ದಾನೆ. ಅಷ್ಟಕ್ಕೂ ಈ ಘಟನೆಯು ಕರ್ನಾಟಕ-ಮಹಾರಾಷ್ಟ್ರ ಗಡಿಯ ಟೋಲ್ ಬೂತ್ನಲ್ಲಿ ನಡೆದಿದೆ ಎನ್ನಲಾಗಿದೆ.
( ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ.)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.