ತಂದೆ ಸೇದಿ ಬಿಸಾಕಿದ ಬೀಡಿ ನುಂಗಿದ ಪುಟ್ಟ ಮಗು, ಮುಂದೆ ಆಗಿದ್ದು ಮಾತ್ರ ಅಚ್ಚ ರಿ
Jun 18, 2025, 08:37 IST
|

ಅರ್ಧ ಸೇದಿ ಬಿಸಾಡಿದ್ದ ಬೀಡಿಯ ತುಂಡನ್ನು ನುಂಗಿ ಅಸ್ವಸ್ಥಗೊಂಡಿದ್ದ ಹತ್ತು ತಿಂಗಳ ಮಗವೊಂದು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಶನಿವಾರ ಮಧ್ಯಾಹ್ನ ನಡೆದಿದೆ.ಅಡ್ಯಾರ್‌ನಲ್ಲಿ ವಾಸವಾಗಿದ್ದ ಬಿಹಾರ ಮೂಲದ ದಂಪತಿಯ 10 ತಿಂಗಳ ಮಗು ಅನೀಶ್ ಕುಮಾರ್ ಮೃತ ಪಟ್ಟಿದೆ. ಶನಿವಾರ ಮಧ್ಯಾಹ್ನ ಸುಮಾರು 1:30ಕ್ಕೆ ಅರ್ಧ ಸೇದಿ ಬಿಸಾಡಿದ್ದ ಬೀಡಿ ತುಂಡನ್ನು ಮಗು ನುಂಗಿ ಅಸ್ವಸ್ಥಗೊಂಡಿತ್ತು.
ಮದ್ಯಾಹ್ನ 3:30ಕ್ಕೆ ಮಗುವನ್ನು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ವೈದ್ಯರು ಚಿಕಿತ್ಸೆ ನೀಡಿದ್ದಾರೆ. ಆದರೆ ಭಾನುವಾರ ಬೆಳಗ್ಗೆ 10:25ರ ವೇಳೆಗೆ ಚಿಕಿತ್ಸೆ ಫಲಕಾರಿಯಾಗದೆ ಮಗು ಮೃತಪಟ್ಟಿದೆ. ತನ್ನ ಗಂಡನ ನಿರ್ಲಕ್ಷ್ಯದಿಂದಲೇ ಬೀಡಿಯ ತುಂಡನ್ನು ನುಂಗಿ ಅಸ್ವಸ್ಥಗೊಂಡು ಮಗು ಮೃತಪಟ್ಟಿದೆ. ಮನೆಯೊಳಗೆ ಬೀಡಿ ಸೇದಿ ಬಿಸಾಡದಂತೆ ಗಂಡನಿಗೆ ಹಲವು ಬಾರಿ ಎಚ್ಚರಿಸಿದ್ದರೂ ಮತ್ತೆ ಎಸೆದ ಪರಿಣಾಮ ಮಗು ಪ್ರಾಣ ಕಳೆದುಕೊಂಡಿದೆ ಎಂದು ಮಗುವಿನ ತಾಯಿ ಲಕ್ಷ್ಮಿ ದೇವಿ ದೂರು ನೀಡಿದ್ದಾರೆ. ಮಂಗಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಗುವಿನ ತಂದೆ ವೆಡ್ಡಿಂಗ್ ಈವೆಂಟ್ ಡೆಕೊರೇಶನ್ ಕೆಲಸ ಮಾಡಿಕೊಂಡಿದ್ದಾರೆ. ಜೂನ್ 14ರಂದು ಮಧ್ಯಾಹ್ನ ಮಗು ಆಟವಾಡುತಿದ್ದಾಗ ತಂದೆ ಸೇದಿ ಬಿಸಾಡಿದ್ದ ಬೀಡಿಯನ್ನು ನುಂಗಿ ಅಸ್ವಸ್ಥವಾಗಿದೆ. ಮಗುವನ್ನು ಮಂಗಳೂರು ವೆನ್ಲಾಕ್ ಆಸ್ಪತ್ರೆಗೆ ತೆಗೆದುಕೊಂಡು ಹೋದಾಗ ಪರೀಕ್ಷಿಸಿದ ವೈದ್ಯರು ಮಗುವನ್ನು ಒಳರೋಗಿಯಾಗಿ ದಾಖಲು ಮಾಡಿಕೊಂಡು, ಚಿಕಿತ್ಸೆ ನೀಡುತ್ತಿದ್ದರು. ಆದರೆ, ಜೂನ್ 15ರಂದು ಬೆಳಗ್ಗೆ 10.25 ಗಂಟೆಗೆ ಚಿಕಿತ್ಸೆ ಫಲಕಾರಿಯಾಗದೆ ಮಗು ಮೃತಪಟ್ಟಿದೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkarunadu.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕರುನಾಡು ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.
Mon,10 Jul 2023
ಭಾರತೀಯ ಆಟಗಾರ ಕೆ ಎಲ್ ರಾಹುಲ್ ಅವರ ಸಂಭಾವನೆ ಎಷ್ಟು ಕೋಟಿ ಇರಬಹುದು
Sat,8 Jul 2023