ಆ ಮುಸ್ಲಿಮ್ ಯುವಕರು ಮೈಮೇಲೆ ಬಿದ್ರು; 'ಇದೇನು ಪಾ.ಕಿಸ್ತಾನನ ಎಂದ ಹರ್ಷೀಕಾ
ಸ್ಯಾಂಡಲ್‌ವುಡ್ ನಟಿ ಹರ್ಷಿಕಾ ಮತ್ತು ನಟ ಭುವನ್ ಪೊನ್ನಣ್ಣ ದಂಪತಿ ಬೆಂಗಳೂರಿನಲ್ಲಿ ಕರಾಳ ಅನುಭವವೊಂದಕ್ಕೆ ಸಾಕ್ಷಿ ಆಗಿದ್ದಾರೆ. ರೆಸ್ಟೋರೆಂಟ್‌ವೊಂದಕ್ಕೆ ಊಟಕ್ಕೆ ಹೋದಾಗ, ಅಲ್ಲಿನ ಕೆಲವರು ಹರ್ಷಿಕಾ ಪತಿ ಭುವನ್ ಮೇಲೆ ಹಲ್ಲೆ ಮಾಡಿದ್ದಾರೆ. ನಾವು ಕನ್ನಡದಲ್ಲಿ ಮಾತನಾಡಿದ್ದೇ ಅವರಿಗೆ ತಪ್ಪಾಗಿ ಕಾಣಿಸಿದೆ ಎಂದು ನಟಿ ಹರ್ಷಿಕಾ ಪೂಣಚ್ಚ ಆರೋಪಿಸಿದ್ದಾರೆ. ಈ ಬಗ್ಗೆ ಸುದೀರ್ಘವಾಗಿ ಅವರು ಬರೆದುಕೊಂಡಿದ್ದಾರೆ.
ನಮ್ಮ ಬೆಂಗಳೂರಿನಲ್ಲಿ ಸ್ಥಳೀಯರು ಎಷ್ಟು ಸುರಕ್ಷಿತ ಎಂಬ ಪ್ರಶ್ನೆ ನನಗೆ ಮೂಡಿದೆ. ಒಂದಷ್ಟು ಯೋಚಿಸಿ ಕೆಲವು ದಿನಗಳ ಹಿಂದೆ ನಮ್ಮ ಬೆಂಗಳೂರಿನಲ್ಲಿ ನನಗಾದ ಭಯಾನಕ ಅನುಭವವನ್ನು ಹಂಚಿಕೊಳ್ಳಲು ನಿರ್ಧರಿಸಿದ್ದೇನೆ. ನನ್ನ ಸ್ನೇಹಿತರು, ಕುಟುಂಬ ಮತ್ತು ಪೊಲೀಸ್ ಇಲಾಖೆಯಲ್ಲಿನ ಕೆಲವು ಪರಿಚಯಸ್ಥರೊಂದಿಗೆ ಮಾತನಾಡಿದ ನಂತರ ನಾನು ಈ ವಿಷಯವನ್ನು ಅಲ್ಲಿಗೇ ಬಿಟ್ಟು ಬಿಡುತ್ತೇನೆ ಎಂದು ಯೋಚಿಸಿದೆ. ಆದರೆ ನನ್ನ ಅನುಭವದಿಂದ ಮತ್ತಿರರಿಗೆ ಸಹಾಯವಾಗಬಹುದು ಎಂದು ಯೋಚಿಸಿ ನಾನು ಅದರ ಬಗ್ಗೆ ಪೋಸ್ಟ್ ಮಾಡಲು ನಿರ್ಧರಿಸಿದ್ದೇನೆ ಎಂದು ಹೇಳಿಕೊಂಡಿದ್ದಾರೆ ಹರ್ಷಿಕಾ.
ಒಂದೆರಡು ದಿನಗಳ ಹಿಂದೆ ಫ್ರೇಜರ್ ಟೌನ್ ಪ್ರದೇಶದ ಸಮೀಪವಿರುವ ಪುಲಿಕೇಶಿ ನಗರದ ಮಸೀದಿ ರಸ್ತೆಯಲ್ಲಿರುವ ರೆಸ್ಟೊರೆಂಟ್‌ವೊಂದರಲ್ಲಿ ಸಂಜೆ ಕುಟುಂಬದೊಂದಿಗೆ ಊಟ ಮಾಡಲು ತೆರಳಿದ್ದೆ. ಭೋಜನವನ್ನು ಮುಗಿಸಿದ ನಂತರ ನಾವು ವಾಲೆಟ್ ಪಾರ್ಕಿಂಗ್‌ನಿಂದ ನಮ್ಮ ವಾಹನವನ್ನು ತೆಗೆದುಕೊಂಡು ಹೊರಡುತ್ತಿದ್ದಾಗ ಇಬ್ಬರು ವ್ಯಕ್ತಿಗಳು ಡ್ರೈವರ್ ಸೀಟ್ ಕಿಟಕಿಯ ಬಳಿ ಇದ್ದಕ್ಕಿದ್ದಂತೆ ಕಾಣಿಸಿಕೊಂಡು ನಮಗೆ ಬೆದರಿಕೆ ಹಾಕಿದ್ದಾರೆ.
ನಿಮ್ಮ ವಾಹನವು ತುಂಬಾ ದೊಡ್ಡದಾಗಿದೆ, ಇದ್ದಕ್ಕಿದ್ದಂತೆ ಚಲಿಸಿದಲ್ಲಿ ಅದು ನಮ್ಮನ್ನು ಮುಟ್ಟಬಹುದು ಎಂದು ವಾದಿಸಲು ಪ್ರಾರಂಭಿಸಿದರು. ನನ್ನ ಪತಿ, ಇನ್ನು ವಾಹನ ಮೂವ್ ಮಾಡಿಲ್ವಲ್ಲ, ಸೈಡು ಬಿಡಿ ಎಂದು ಹೇಳಿದರು. ಏಕೆಂದರೆ ಅವರು ಮಾತನಾಡುತ್ತಿರುವ ವಿಷಯದಲ್ಲಿ ಅರ್ಥವಿರಲಿಲ್ಲ ಎಂದು ಹರ್ಷಿಕಾ ತಿಳಿಸಿದ್ದಾರೆ.ನಾವು ವಾಹನವನ್ನು ಸ್ವಲ್ಪ ಮುಂದಕ್ಕೆ ಚಲಾಯಿಸಿದೆವು.
ಅಷ್ಟರೊಳಗೆ ಆ ಇಬ್ಬರು ವ್ಯಕ್ತಿಗಳು ನಮ್ಮನ್ನು ಅವರ ಭಾಷೆಯಲ್ಲಿ ನಿಂದಿಸಲು ಪ್ರಾರಂಭಿಸಿದರು. ಈ ಲೋಕಲ್ ಕನ್ನಡಿಗರಿಗೆ ಪಾಠ ಕಲಿಸಬೇಕು ಎಂದು ಹೇಳಿ ನನ್ನ ಪತಿಯ ಮುಖದ ಮೇಲೆ ಹೊಡೆಯಲು ಸಹ ಪ್ರಯತ್ನಿಸಿದರು. ನನ್ನ ಪತಿ ತುಂಬಾ ತಾಳ್ಮೆಯಿಂದ ಇದ್ದರು, ಹೆಚ್ಚು ಪ್ರತಿಕ್ರಿಯೆ ನೀಡಲಿಲ್ಲ. ನನ್ನ ಪತಿ ಸಾಮಾನ್ಯವಾಗಿ ತುಂಬಾ ಸಿಟ್ಟಿನ ಸ್ವಭಾವದವರು ಎಂದು ಹರ್ಷಿಕಾ ಹೇಳಿಕೊಂಡಿದ್ದಾರೆ.(ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.