ಬರೋಬ್ಬರಿ 49000 ಹೆಣ್ಣುಮಕ್ಕಳು ಗ.ರ್ಭಿಣಿ, ಕಾರಣ ಯಾರು ಗೊತ್ತಾ

 | 
ರಿ

ಕೆಲ ದಿನಗಳ ಹಿಂದಷ್ಟೇ 9 ಕ್ಲಾಸ್ ಓದುತ್ತಿದ್ದ ಬಾಲಕಿ ಗರ್ಭಿಣಿಯಾದ ಬಗ್ಗೆ ಎಲ್ಲೆಡೆ ವೈರಲ್ ಆಗಿತ್ತು. ಹೌದು 14 ವರ್ಷದ ಬಾಲಕಿ ಕರ್ನಾಟಕದ ತುಮಕೂರು ಜಿಲ್ಲೆಯ ಸರ್ಕಾರಿ ವಸತಿ ಶಾಲೆಯ ಹಾಸ್ಟೆಲ್‌ನಲ್ಲಿ ವಾಸಿಸುತ್ತಿದ್ದಳು. ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ತನ್ನ ಮನೆಗೆ ಬಂದು ಹೊಟ್ಟೆ ನೋವು ಎಂದು ಹೇಳಿದಾಗ ವಿಷಯ ಬೆಳಕಿಗೆ ಬಂದಿದೆ. ಆಕೆಯ ಪೋಷಕರು ಆಕೆಯನ್ನು ಆಸ್ಪತ್ರೆಗೆ ಕರೆದೊಯ್ದರು, ಅಲ್ಲಿ ಸ್ಕ್ಯಾನಿಂಗ್ ಮಾಡಿದ ನಂತರ ವೈದ್ಯರು ಆಕೆ ಗರ್ಭಿಣಿ ಎಂದು ಕಂಡುಕೊಂಡರು ಎಂದು ಪೊಲೀಸರು ತಿಳಿಸಿದ್ದಾರೆ.

ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಲಾಯಿತು ಮತ್ತು ವೈದ್ಯಕೀಯ ತಪಾಸಣೆ ಮತ್ತು ಅಗತ್ಯ ಪರೀಕ್ಷೆಗಳ ನಂತರ ವೈದ್ಯರು ಜನವರಿ 9 ರಂದು ಹೆರಿಗೆ ಮಾಡಿದರು. ಬಾಲಕಿಯ ತೂಕ ಕಡಿಮೆ ಆಗಿದೆ ಆದರೆ ಅವಳು ಮತ್ತು ಮಗು ಆರೋಗ್ಯವಾಗಿ ಇದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.ಬಾಲಕಿಗೆ ಮಕ್ಕಳ ಕಲ್ಯಾಣ ಸಮಿತಿಯಿಂದ ಕೌನ್ಸೆಲಿಂಗ್ ಮಾಡಲಾಗಿದೆ. ಕೌನ್ಸೆಲಿಂಗ್ ಸಮಯದಲ್ಲಿ, ಅವಳು ತನ್ನ ಶಾಲೆಯ ಹಿರಿಯನಾದ ಅಪ್ರಾಪ್ತ ಹುಡುಗನಿಂದ ಗರ್ಭಿಣಿಯಾಗಿದ್ದಾಳೆ ಎಂದು ಹೇಳಿದಳು ಆದರೆ ವಿಚಾರಣೆಯ ಸಮಯದಲ್ಲಿ, ಹುಡುಗ ಅದನ್ನು ನಿರಾಕರಿಸಿದನು ಎಂದು ಅಧಿಕಾರಿ ಹೇಳಿದರು. ಹಾಗಿದ್ದರೆ ಮಗುವಿಗೆ ತಂದೆ ಯಾರು ಎಂಬ ಪ್ರಶ್ನೆ ಎಲ್ಲರನ್ನೂ ಕಾಡುತ್ತದೆ.

ಹೌದು ರಾಜ್ಯದಲ್ಲಿ ಕಳೆದ ಮೂರು ವರ್ಷಗಳ ಅವಧಿಯಲ್ಲಿ ಸುಮಾರು 49 ಸಾವಿರ ಬಾಲಕಿಯರು ಗರ್ಭಿಣಿಯರಾಗಿರುವ ಅಂಶ ಬೆಳಕಿಗೆ ಬಂದಿದೆ.  ಸುಮಾರು 49 ಸಾವಿರದಷ್ಟು ಮಂದಿ ಅಪ್ರಾಪ್ತೆಯರು ಗರ್ಭಿಣಿಯರಾಗಿದ್ದಾರೆ ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರು ಹೇಳಿದ್ದಾರೆ ಈ ಸಂಖ್ಯೆ ಅತ್ಯಂತ ಆತಂಕಾರಿಯಾಗಿದ್ದು, ಮತ್ತೆ ಡಿಎಚ್ಒ ಹಾಗೂ ಆಶಾ - ಅಂಗನವಾಡಿ ಕಾರ್ಯಕರ್ತೆಯರ ಮಟ್ಟದಲ್ಲಿಮರು ಸಮೀಕ್ಷೆ ಮಾಡಲಾಗುತ್ತದೆ. ಪರಿಶೀಲನೆ ಮಾಡುವ ಸಂದರ್ಭದಲ್ಲಿ ಅಪ್ರಾಪ್ತ ಗರ್ಭಿಣಿಯರಲ್ಲಿಯೇ ಕೂಲಂಕಷವಾಗಿ ಮಾಹಿತಿ ಪಡೆದು ತಪ್ಪಿತಸ್ಥರ ಮೇಲೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದರು.


ಕಲ್ಯಾಣ ಕರ್ನಾಟಕ, ಮಂಡ್ಯ ಭಾಗದಲ್ಲಿ ಹೆಚ್ಚಿನ ಪ್ರಕರಣಗಳು ಕಂಡು ಬಂದಿವೆ. ಹದಿನೆಂಟು ತುಂಬುವ ಮೊದಲೇ ವಿವಾಹ, ಅತ್ಯಾಚಾರ, ಪ್ರೀತಿಯ ನೆಪದಲ್ಲಿ ದೈಹಿಕ ಸಂಪರ್ಕ ಹೀಗೆ ಹಲವಾರು ರೀತಿಯಲ್ಲಿ ಅಪ್ರಾಪ್ತೆಯರು ಗರ್ಭಿಣಿಯರಾಗುತ್ತಿರುವ ಪ್ರಕರಣಗಳು ಬಯಲಾಗುತ್ತಿದೆ. ಕೆಲವೊಂದು ಪ್ರಕರಣಗಳಲ್ಲಿ ಸಂತ್ರಸ್ತೆಯರು ಆತ್ಮಹತ್ಯೆಗೆ ಶರಣಾಗಿರುವ ಪ್ರಕರಣಗಳೂ ಬೆಳಕಿಗೆ ಬಂದಿದೆ. ಇಂತಹ ಪ್ರಕರಣಗಳನ್ನು ಮುಚ್ಚಿಟ್ಟ ವಿಚಾರದಲ್ಲಿ ಈಗಾಲೇ 6 - 7 ವೈದ್ಯರ ಮೇಲೆಯೇ ಪ್ರಕರಣ ದಾಖಲಾಗಿದೆ. ಅಲ್ಲದೆ ಒಂದೆರಡು ನರ್ಸಿಂಗ್ ಹೋಮ್‌ಗಳನ್ನೇ ಮುಚ್ಚಲಾಗಿದೆ.
(ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.