ಇಂತವರಿಗೆ ಗೃಹಲಕ್ಷ್ಮಿ ಹಣ ಸಿಗುವುದಿಲ್ಲ, ಸರ್ಕಾರದ ಖಡಕ್ ರೂಲ್ಸ್

 | 
Uu
ಗೃಹಲಕ್ಷ್ಮೀ ಯೋಜನೆ ಚಾಲನೆಗೆ ದಿನಗಣನೆ ಆರಂಭವಾಗಿದೆ. ಈವರೆಗೂ 1.1 ಕೋಟಿ ಮಹಿಳೆಯರು ನೋಂದಣಿ ಮಾಡಿಕೊಂಡಿದ್ದಾರೆ. ಆಗಸ್ಟ್‌ 30ರಂದು ಯೋಜನೆಗೆ ರಾಹುಲ್‌ ಗಾಂಧಿ ಚಾಲನೆ ನೀಡಲಿದ್ದು, ಅಂದೇ ಗೃಹಲಕ್ಷ್ಮೀಯರ ಖಾತೆಗೆ 2000 ರೂ. ಜಮೆಯಾಗಲಿದೆ. 
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಲಕ್ಷ್ಮೀ ಯೋಜನೆಗೆ ಈವರೆಗೂ ಶೇ. 86 ರಷ್ಟು ಫಲಾನುಭವಿಗಳು ನೋಂದಣಿಯಾಗಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು. ಮಾತ್ರವಲ್ಲದೇ, ಆಗಸ್ಟ್ 30 ರಂದು ಮೈಸೂರಿನಲ್ಲಿ ನಡೆಯಲಿರುವ ಸರ್ಕಾರದ ಮಹತ್ವಾಕಾಂಕ್ಷೆಯ 'ಗೃಹಲಕ್ಷ್ಮಿ' ಯೋಜನೆಗೆ ಚಾಲನೆ ಸಿಗುತ್ತಿದ್ದು, ಸಮಾರಂಭದ ಯಶಸ್ಸಿಗೆ ಎಲ್ಲರೂ ಕೈಜೋಡಿಸಬೇಕು ಎಂದು ಕರೆಕೊಟ್ಟಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದು ಆಗಸ್ಟ್ 27ಕ್ಕೆ ನೂರು ದಿನ ಪೂರೈಸುತ್ತಿದ್ದು,ಗೃಹಲಕ್ಷ್ಮಿ' ಯೋಜನೆಯ ಸೌಲಭ್ಯ ವಿತರಣಾ ಕಾರ್ಯಕ್ರಮದ ಪೂರ್ವಸಿದ್ಧತೆ ಕುರಿತು ಶನಿವಾರ ಮೈಸೂರಿನ ಕಾಂಗ್ರೆಸ್ ಕಚೇರಿಯಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಸಚಿವೆ ಮಾತನಾಡಿದರು. ಕಾಂಗ್ರೆಸ್ ಪಕ್ಷ ಬಸವಣ್ಣನ ತತ್ವ ಸಿದ್ದಾಂತದ ಮೇಲೆ ನಿಂತಿದೆ. ಗೃಹಲಕ್ಷ್ಮಿ ಯೋಜನೆಯ 1.28 ಕೋಟಿ ಫಲಾನುಭವಿಗಳ ಪೈಕಿ ಈಗಾಗಲೇ 1.10 ಕೋಟಿಗೂ ಅಧಿಕ ಮಹಿಳೆಯರು ತಮ್ಮ ಹೆಸರು ನೋಂದಾಯಿಸಿಕೊಂಡಿದ್ದು, ಆಗಸ್ಟ್ ತಿಂಗಳಿಂದಲೇ ಮನೆಯ ಯಜಮಾನಿಗೆ ಹಣ ಸಂದಾಯವಾಗಲಿದೆ ಎಂದರು. 
ಮಹಿಳೆಯರ ಸಬಲೀಕರಣದ ದೃಷ್ಟಿಯಿಂದ ಸರ್ಕಾರ ಈ ಯೋಜನೆಯನ್ನು ಜಾರಿಗೆ ತರುತ್ತಿದ್ದು,‌ಪ್ರತಿಯೊಬ್ಬರು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಕರೆ ನೀಡಿದರು. ಹೆಚ್ಚಿನ ಸಂಖ್ಯೆಯಲ್ಲಿ ಫಲಾನುಭವಿಗಳು, ಜನ ಸಾಮಾನ್ಯರು ಪಾಲ್ಗೊಳ್ಳುವಂತೆ ನೋಡಿಕೊಳ್ಳಬೇಕು. ಗೃಹಲಕ್ಷ್ಮಿ ಯೋಜನೆ ಪ್ರತಿ ಗ್ರಾಮ ಪಂಚಾಯತಿ ಮಟ್ಟದಲ್ಲೂ ಯಶಸ್ವಿಯಾಗುವಂತೆ ನೋಡಿಕೊಳ್ಳೋಣ ಎಂದು ಸಚಿವರು ತಿಳಿಸಿದರು. ಇನ್ನು ಇದಕ್ಕಿರುವ ಒಂದೇ ಒಂದು ಶರತ್ತೆಂದರೆ ಮಹಿಳೆ ಮನೆಯ ಯಜಮಾನಿ ಆಗಿರಬೇಕು ಹಾಗೂ ಬಿಪಿಲ್ ಕಾರ್ಡ್ ಹೊಂದಿರಬೇಕು.