ಉಚಿತ ಬಸ್ ಪ್ರಯಾಣಿಸುವ ಮಹಿಳೆಯರಿಗೆ ಬಾರಿ ಬದಲಾವಣೆ, ರೊಚ್ಚಿಗೆದ್ದ ಹೆಂಗಸರು

 | 
B

ಈ ಬಾರಿಯ ವೀಕೆಂಡ್​ನಲ್ಲಿ ಮಹಿಳಾ ಪ್ರಯಾಣಿಕರನ್ನು ಕಂಡು ಸಾರಿಗೆ ಸಿಬ್ಬಂದಿ ಶಾಕ್ ಆಗಿದ್ದಾರೆ. ಫ್ರೀ ಬಸ್ ಘೋಷಣೆಯಾದ ಮೊದಲ ವೀಕೆಂಡ್ ಅಂತ ಮಹಿಳೆಯರು ದೇವಸ್ಥಾನ, ಪ್ರವಾಸಿ ಸ್ಥಳಗಳಿಗೆ ಭೇಟಿ ನೀಡಿದ್ದರು. ಮಹಿಳಾ ಪ್ರಯಾಣಿಕರ ಸಂಖ್ಯೆ ಹೆಚ್ಚಾದ ಹಿನ್ನೆಲೆ ರಾಜ್ಯದಲ್ಲಿ ಕೆಲವು ಗೊಂದಲಗಳು ಉಂಟಾಗಿದ್ದವು. ತಳ್ಳಾಟ, ನೂಕಾಟ ಸೇರದಂತೆ ಜಡೆ ಜಗಳ ಸಹ ನಡೆದಿದೆ. 

ಕೆಲವು ಭಾಗಗಳಲ್ಲಿ ತಳ್ಳಾಟ, ನೂಕಾಟದಿಂದ ಬಸ್ ಬಾಗಿಲು, ಕಿಟಕಿಯ ಸರಪಳಿ ಕಿತ್ತುಕೊಂಡು ಬಂದಿದೆ.
ಈ ಎಲ್ಲಾ ಬೆಳವಣಿಗೆಯನ್ನು ಗಮನಿಸಿರುವ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ಉಚಿತ ಪ್ರಯಾಣಕ್ಕೆ ಕೆಲವು ಮಾರ್ಗಸೂಚಿ ಪ್ರಕಟಿಸುವ ಸುಳಿವು ನೀಡಿದ್ದಾರೆ.
ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ರಾಮಲಿಂಗಾ ರೆಡ್ಡಿ, ಈ ಉಚಿತ ಯೋಜನೆಯನ್ನು ಶಿಸ್ತುಬದ್ಧವಾಗಿ ತರಬೇಕಿದೆ. 

ಮುಂದೆ ಐದು ವರ್ಷಗಳ ಕಾಲ ಯೋಜನೆ ಜಾರಿಯಲ್ಲಿರಬೇಕಿದೆ. ಕೆಲವು ಮಾರ್ಗಸೂಚಿ ಜಾರಿಗೆ ತರುವ ಬಗ್ಗೆ ಚಿಂತನೆ ನಡೆದಿದೆ ಎಂದು ತಿಳಿಸಿದ್ದಾರೆ.
ಫ್ರೀ ಅಂತ ಎಲ್ಲರೂ ಒಂದೇ ದಿನ ಬಸ್​ನಲ್ಲಿ ಪ್ರಯಾಣ ಮಾಡಲು ಸಾಧ್ಯವಿಲ್ಲ. ದೂರದ ಪ್ರಯಾಣಕ್ಕೆ ಟಿಕೆಟ್ ಕಾಯ್ದಿರಿಸಿದ ಪ್ರಯಾಣಿಕರಿಗೆ ಮಾತ್ರ ಅವಕಾಶ ನೀಡುವ ಬಗ್ಗೆ ಚಿಂತನೆ ನಡೆದಿದೆ. ಸ್ಟ್ಯಾಂಡಿಂಗ್ ಪ್ರಯಾಣದಿಂದ ಇತರೆ ಪ್ರಯಾಣಿಕರಿಗೆ ತೊಂದರೆ ಆಗಲಿದೆ ಎಂದಿದ್ದಾರೆ.
(ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.