ಟೊಮ್ಯಾಟೊ ಬೆಲೆಯಲ್ಲಿ ಬಾರಿ ಇಳಿಕೆ, ನಿಟ್ಟುಸಿರು ಬಿಟ್ಟ ಸಾಮಾನ್ಯ ಜನರು

 | 
Bx

ಗಗನಕ್ಕೇರಿದ ಟೊಮೆಟೊ ಬೆಲೆ ಇಳಿಕೆಯಾಗಿದೆ. ಹೌದು
ಕೋಲಾರದ ಕೆಲ ಕಡೆ ಟೊಮೆಟೊಗೆ ಕೀಟ ಭಾದೆ ಕಾಡುತ್ತಿದ್ದು, ಅದರಿಂದ ಟೊಮೆಟೊ ಗುಣಮಟ್ಟ ಇಳಿಕೆಯಾಗಿ, ಹೊರ ರಾಜ್ಯಗಳಿಗೆ ಟೊಮೆಟೊ ರಪ್ತು ಮಾಡಲು ಸಾಧ್ಯವಾಗುತ್ತಿಲ್ಲ. ಜಿಲ್ಲೆಯ ಟೊಮೆಟೊ ಸೇರಿದಂತೆ ಕೆಲ ತರಕಾರಿಗಳಿಗೂ ಹೊರ ರಾಜ್ಯದಲ್ಲಿ ಬೇಡಿಕೆ ಇಳಿಕೆಯಾಗಿದ್ದು ಟೊಮೆಟೊ ಬೆಲೆ ಕುಸಿದಿದೆ.

ಇನ್ನು ಈ ಕುರಿತಾಗಿ ಹೇಳಿಕೆ ನೀಡಿರುವ ರೈತರು 
ಬೆಂಗಳೂರಿನ ಕೊಳಚೆ ನೀರನ್ನ ಮೂರನೇ ಬಾರಿಗೆ ಸಂಸ್ಕರಿಸದೆ, ಹರಿಸುತ್ತಿರುವುದೇ ಇದಕ್ಕೆ ಕಾರಣವೆಂದು ಆರೋಪಿಸಿದ್ದಾರೆ, ಕೆಸಿ ವ್ಯಾಲಿ ನೀರು ಕೃಷಿ ಬಳಕೆಗೆ ಜಿಲ್ಲಾಡಳಿತ ನಿಷೇಧ ಹೇರಿದ್ದರು, ಹಳ್ಳಿಗಳಲ್ಲಿ ಕೆಲ ರೈತರು ನೇರವಾಗಿ ಕೆಸಿ ವ್ಯಾಲಿ ನೀರನ್ನ ಕೃಷಿಗೆ ಬಳಸುತ್ತಿರುವುದು ರೋಗಬಾದೆಗೆ ಕಾರಣವೆಂಬ ಅನುಮಾನ ವ್ಯಕ್ತವಾಗಿದೆ, ಇದರ ಜೊತೆಗೆ ಕೆಸಿ ವ್ಯಾಲಿ ನೀರು ಹರಿಯುವ ಕೆರೆಗಳ ಪಕ್ಕದಲ್ಲಿರೊ ಬೋರ್ ವೆಲ್ ರೀಚಾರ್ಜ್ ಆಗಿದ್ದು, ಅಲ್ಲಿ ಬೆಳೆಯುವ ಟೊಮೆಟೊ ಸೇರಿದಂತೆ ವಿವಿಧ ತರಕಾರಿಗಳಲ್ಲು ಗುಣಮಟ್ಟ ಇಳಿಕೆಯಾಗಿ, ಬೇಡಿಕೆ ಕುಸಿದಿದೆ ಎಂದು ಗೊವಿಂದರಾಜು ಹಾಗು ಜಿಲ್ಲೆಯ ತರಕಾರಿ ವ್ಯಾಪಾರಿಗಳು ಆರೋಪಿಸಿದ್ದಾರೆ. 

ಆದರೆ ಈ ವಿಚಾರಕ್ಕೆ ಸಂಬಂದಿಸಿದಂತೆ ಪ್ರತಿಕ್ರಿಯೆ ನೀಡಲು ತೋಟಗಾರಿಕಾ ಇಲಾಖೆ ಜಂಟಿ ನಿರ್ದೇಶಕಿ ಗಾಯತ್ರಿ ನಿರಾಕರಿಸಿದ್ದು, ಪ್ರತಿಕ್ರಿಯೆ ನೀಡಲು ಹಿರಿಯ ಅಧಿಕಾರಿಗಳ ಅನುಮತಿ ಬೇಕೆಂಬ ಸಬೂಬು ನೀಡಿದ್ದಾರೆ. ಒಟ್ಟಿನಲ್ಲಿ ಕೋಲಾರದ ರೈತರ ಪಾಡು ಹೇಳತೀರದ್ದಾಗಿದೆ, ಟೊಮೆಟೊ ಬೆಲೆ ಏರಿಕೆಯಿಂದ ಗ್ರಾಹಕರ ಜೇಬಿಗು ಕತ್ತರಿ ಬೀಳುತ್ತಿದ್ದು, ಒಂದು ಕೆಜಿ ಟೊಮೆಟೊ ಬೆಲೆ 70 ರೂ ದಾಟಿದೆ, ಟೊಮೆಟೊ ಕೊಳ್ಳಲು ಗ್ರಾಹಕರು ಮೂಗು ಮುರಿಯುತ್ತಿದ್ದು, ಮಾರುಕಟ್ಟೆಯಲ್ಲಿ ಬೆಲೆ ಏರಿಕೆಯ ಬಿಸಿ ಇನ್ನು ಒಂದು ತಿಂಗಳ ಮುಂದುವರೆದರೆ ಜನ ಕೊಳ್ಳುವುದನ್ನೇ ಬಿಟ್ಟು ಬಿಡುತ್ತಾರೆ ಎನ್ನಲಾಗ್ತಿದೆ. 

ವಿಪರೀತ ಬೆಲೆ ಏರಿಕೆಯಿಂದಾಗಿ ಹೊರಗಿನ ವರ್ತಕರು ಖರೀದಿಗೆ ಬರುವುದು ಕಡಿಮೆ ಆಗಿದ್ದು, ಕೋಲಾರ ಎಪಿಎಂಸಿ ಮಾರುಕಟ್ಟೆಯಲ್ಲಿ ಟೊಮೆಟೊ ದರ ತುಸು ಇಳಿದಿದೆ. ಗುರುವಾರ ಹರಾಜಿನಲ್ಲಿ 15 ಕೆ.ಜಿ ನಾಟಿ ಟೊಮೆಟೊ ಬಾಕ್ಸ್‌ ಅತಿ ಹೆಚ್ಚು ಎಂದರೆ ₹ 1,810 ಕ್ಕೆ ಮಾರಾಟವಾಗಿದೆ. ಇನ್ನುಳಿದಂತೆ ಸರಾಸರಿ ₹ 1,700 ಲಭಿಸಿದೆ. ಮೂರು ದಿನಗಳ ಹಿಂದೆಯಷ್ಟೇ ಈ ಪ್ರಮಾಣದ ಟೊಮೆಟೊ ₹ 2,700ಕ್ಕೆ ಮಾರಾಟವಾಗಿ ಸಾರ್ವಕಾಲಿಕ ದಾಖಲೆ ನಿರ್ಮಿಸಿತ್ತು. ಇದೀಗ ಗ್ರಾಹಕರು ಕೊಂಚ ಮಟ್ಟಿಗೆ ನಿಟ್ಟುಸಿರು ಬಿಡುವಂತಾಗಿದೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.