ಜಗತ್ತಿನ ಎರಡು ದೇಶಗಳು ಮಳುಗುತ್ತವೆ, ಕೋಡಿಶ್ರೀ ಬಿಚ್ಚಿಟ್ಟ ಸ್ಪೋಟಕ ಭವಿಷ್ಯದಲ್ಲಿ ಏನಿದೆ ಗೊತ್ತಾ

 | 
ಗಾಹಾ

ರಾಜ್ಯದಲ್ಲಿ ಪ್ರಸ್ತುತವಾಗಿ ನಡೆಯುತ್ತಿರುವ ಘಟನೆಗಳ ಬಗ್ಗೆ ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿಗಳು ವಿಸ್ತ್ರೃತವಾಗಿ ವಿವರಿಸಿ ಹೇಳಿದ್ದಾರೆ. ಹಾಗಾದರೆ ಶ್ರೀಗಳು ಯಾವ ವಿಚಾರಗಳ ಬಗ್ಗೆ ಹೇಳಿದ್ದಾರೆ ಎನ್ನುವ ವಿವರವನ್ನು ತಿಳಿದುಕೊಳ್ಳೋಣ ಬನ್ನಿ.
ರಾಜ್ಯ ಹಾಗೂ ರಾಷ್ಟ್ರ ರಾಜಕೀಯದಲ್ಲಿ ಅಸ್ಥಿರತೆ ಕಾಡಲಿದೆ. 

ಯುಗಾದಿವರೆಗೂ ಸಮಯ ಇದ್ದು, ನಂತರ ಏನಾಗುತ್ತೋ‌ ಕಾದು‌ನೋಡಿ ಎಂದು ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಹುಬ್ಬಳ್ಳಿಯಲ್ಲಿ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ.
ರಾಜ್ಯದಲ್ಲಿ ಬರಗಾಲದ ಛಾಯೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಮನುಷ್ಯ ಮಾಡಿದ ತಪ್ಪುಗಳಿಗೆ ದೇವರು ಕ್ಷಮಿಸುತ್ತಾನೆ. ಆದರೆ ಮನುಷ್ಯ ಮಾಡಿದ ಪಾಪ‌ ಕರ್ಮಗಳು ಮನುಷ್ಯನನ್ನು ಕ್ಷಮಿಸುವುದಿಲ್ಲ. 

ಮನುಷ್ಯನ‌ ಪಾಪಕರ್ಮಗಳೇ ಇಂತಹ ಪರಿಸ್ಥಿತಿಗೆ ಕಾರಣ. ಈ ರೀತಿಯ ಭಾದೆಗಳು ಹೆಚ್ಚಾದಾಗ ಇಂತಹ ಪರಿಸ್ಥಿತಿಯನ್ನು ಸಾಮೂಹಿಕವಾಗಿ ಅನುಭವಿಸಬೇಕಾಗುತ್ತದೆ. ಶ್ರಾವಣ ಮಾಸದ ಮಧ್ಯಭಾಗದಲ್ಲಿ ಮಳೆಯಾಗಿದೆ. ಅಮಾವಾಸ್ಯೆ ಕಳೆದ ನಂತರ ಇನ್ನೂ ಮಳೆಯಾಗುವ ಸಾಧ್ಯತೆ ಇದೆ ಎಂದು ಭವಿಷ್ಯ ನುಡಿದಿದ್ದಾರೆ.ದೇಶದ ಬಗ್ಗೆ ಈ ಹಿಂದೆಯೂ ಹೇಳಿದ್ದೆ ದೊಡ್ಡ ದೊಡ್ಡ ನಗರಗಳಿಗೆ ಆಪತ್ತು ಕಾದಿದೆ ಅಂತಾ. 

ಇದೀಗ ರಾಜ್ಯ ಹಾಗೂ ರಾಷ್ಟ್ರೀಯ ರಾಜಕೀಯದಲ್ಲೂ ಅಸ್ಥಿರತೆ ಕಾಡಲಿದೆ ಎಂದು ಭವಿಷ್ಯ ನುಡಿದರು. ಸನಾತನ ಧರ್ಮದ ವಿಚಾರ ಬಗ್ಗೆ ಸ್ಟಾಲಿನ್ ಹೇಳಿಕೆಗೆ ಪ್ರತಿಕ್ರಿಯಿಸಿ, ಇದು ಅವರವರ ಧರ್ಮದವರ ಹೇಳಿಕೆಯಾಗಿದೆ. ಎಲ್ಲಾ ಜನಾಂಗದಲ್ಲಿಯೂ ಅವರವರ ನೋವು ಇರುತ್ತದೆ. ಅದನ್ನು ಈ ರೀತಿ ನೋವಿನ‌ ಮೂಲಕ ಹೊರಹಾಕುತ್ತಾರೆ. 

ಧರ್ಮದ ವಿಚಾರದಲ್ಲಿ ರಾಜಕೀಯ ಬೆರೆಸುವುದು ಸೂಕ್ತವಲ್ಲ. ಉದಯನಿಧಿ ಸ್ಟಾಲಿನ್ ಅವರಿಗೆ ಯಾವ ನೋವಿನಿಂದ ಹೇಳಿದ್ದಾರೋ ಗೊತ್ತಿಲ್ಲ. ಆಯಾ ಧರ್ಮದಲ್ಲಿರೋರು ತಮಗಾಗಿರುವ‌ ನೋವಿನಿಂದಾಗಿ ಈ ರೀತಿಯಾಗಿ ತೋಡಿಕೊಳ್ಳುತ್ತಾರೆ ‌ಎಂದರು. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.