ಸಿದ್ದರಾಮಯ್ಯ ಮುಖ ನೋಡಿ ಕೈ ಹಿಡಿದು ಎಳೆದ ಇಬ್ಬರು ಹೆಂಗಸರು, ಸಿಎಮ್ ಹೇಳಿದ್ದೇನು ಗೊತ್ತಾ

 | 
Gf

ಉಡುಪಿಯಲ್ಲಿ ಇತ್ತೀಚೆಗೆ ಸುರಿದ ಮಳೆಯಿಂದ ಕಡಲ್ಕೊರೆತದಿಂದ ಹಾನಿಗೊಳಗಾದ ಕರಾವಳಿ ಪ್ರದೇಶಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಭೇಟಿ ನೀಡಿದರು. ಪಡುಬಿದ್ರಿ ಬೀಚ್ ಪ್ರದೇಶದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಯಿಂದ ವ್ಯಾಪಕ ಹಾನಿ ಸಂಭವಿಸಿದ್ದು ಅಲ್ಲಿಗೆ ಭೇಟಿ ನೀಡಿ ಸಿಎಂ ಪರಿಶೀಲನೆ ನಡೆಸಿದರು.

ನಂತರ ಸುದ್ದಿಗಾರರನ್ನುದ್ದೇಶಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕಡಲ್ಕೊರೆತ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿ ಜಿಲ್ಲೆಯ 98 ಕಿ.ಮೀ ಕರಾವಳಿಯ ರಕ್ಷಣೆಗೆ ಕ್ರಮಕೈಗೊಳ್ಳುವುದಾಗಿ ತಿಳಿಸಿದರು. ಇತ್ತೀಚೆಗೆ ಸುರಿದ ಮಳೆಯಿಂದ ಜಿಲ್ಲೆಯಲ್ಲಿ ಅಂದಾಜು 35 ಕೋಟಿ ರೂಪಾಯಿ ನಷ್ಟವಾಗಿದ್ದು, ಅಗತ್ಯ ಹಣ ಬಿಡುಗಡೆ ಮಾಡುವಂತೆ ಆರ್ಥಿಕ ಇಲಾಖೆಗೆ ಸೂಚಿಸಲಾಗುವುದು ಎಂದರು. 

ಇಷ್ಟು ಮಾತ್ರವಲ್ಲದೆ ಈ ವೇಳೆ ಉಡುಪಿ ಕಾಲೇಜಿನಲ್ಲಿ ವಾಶ್ ರೂಂ ವಿಡಿಯೋ ಪ್ರಕರಣದ ಕುರಿತು ಮಾತನಾಡಿದ ಅವರು, ಪ್ರಕರಣ ಕುರಿತಂತೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ತನಿಖೆ ಮಧ್ಯೆ ನಾನು ಹೇಳಿಕೆ ನೀಡುವುದು ಸರಿಯಲ್ಲ. ತನಿಖೆ ಮುಗಿಯಲಿ ಎಂದರು. ಇನ್ನು ಈ ಸಂಬಂಧ ಕಾಲೇಜು ಆಡಳಿತ ಮಂಡಳಿಯಾಗಲಿ, ಸಂತ್ರಸ್ತ ಬಾಲಕಿಯಾಗಲಿ ಪ್ರಕರಣ ದಾಖಲಿಸಿಲ್ಲ ಎಂದರು.

ಹಾಗೆ ಉಡುಪಿ ಬನ್ನಂಜೆಯಲ್ಲಿರುವ ದೇವರಾಜ ಅರಸು ಬಾಲಕಿಯರ ಹಾಸ್ಟೆಲ್‌ ಗೆ ಸಿಎಂ ಸಿದ್ದರಾಮಯ್ಯ ದಿಢೀರನೆ ಭೇಟಿ ನೀಡಿ ವಿದ್ಯಾರ್ಥಿಗಳು, ಹಾಸ್ಟೆಲ್‌ ಸಿಬ್ಬಂದಿ ಜೊತೆ ಚರ್ಚೆ ನಡೆಸಿದರು. ವಿದ್ಯಾರ್ಥಿಗಳೂ ಮುಕ್ತವಾಗಿ ಮಾತನಾಡಿದರು. ಉಡುಪಿ ಉಸ್ತುವಾರಿ ಸಚಿವೆ ಲಕ್ಷ್ಮಿಹೆಬ್ಬಾಳಕರ್‌ ಜತೆಯಲ್ಲಿದ್ದರು. ಇನ್ನು ಮುಖ್ಯಮಂತ್ರಿ ಅವರನ್ನು ನೋಡಲು ಉಡುಪಿಯ ಜನ ಮುಗಿಬಿದ್ದಿದ್ದರು. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.