'ಇಷ್ಟಾರ್ಥ ಸಿದ್ಧಿ ಬಳಿಕ ತುಳುನಾಡಿನ ಪ್ರತಿಷ್ಠಿತ ದೈವ ದೇವರಿಗೆ ಕೋಲ ಅರ್ಪಣೆ' ಮಾಡಿದ ಯು.ಟಿ ಖಾದರ್

 | 
Bxjsusa

ತುಳುನಾಡಿನ ಕಾರ್ಣಿಕ ದೈವಗಳಾದ ಕಲ್ಲುರ್ಟಿ ಕಲ್ಕುಡ ದೈವಗಳಿಗೆ ಸ್ಪೀಕರ್ ಯುಟಿ ಖಾದರ್ ಹರಕೆ ಕೋಲ ನೆರವೇರಿಸಿದ್ದಾರೆ. ಶ್ರೀ ಕ್ಷೇತ್ರ ಪಣೋಲಿಬೈಲ್‌ನಲ್ಲಿ ನಡೆದ ಹರಕೆ ಕೋಲದಲ್ಲಿ ಭಾಗವಹಿಸಿದ ಯು ಟಿ ಖಾದರ್, ಕಾರ್ಣಿಕ ದೈವಗಳಾದ ಕಲ್ಲುರ್ಟಿ ಕಲ್ಕುಡ ದೈವಗಳ ಆಶೀರ್ವಾದ ಪಡೆದಿದ್ದರು.

ಇದೀಗ ವಿಧಾನ ಸಭಾಧ್ಯಕ್ಷ ಯು ಟಿ ಖಾದರ್ ಅವರು ಶ್ರೀ ಕ್ಷೇತ್ರ ಪನೋಲಿ ಬೈಲ್‌ನಲ್ಲಿ ನಡೆದ ತುಳುನಾಡಿನ ಕಾರ್ಣಿಕ ದೈವಗಳಾದ ಕಲ್ಲುರ್ಟಿ ಕಲ್ಕುಡ ದೈವಗಳ ಹರಕೆ ಕೋಲದಲ್ಲಿ ಭಾಗವಹಿಸಿದ್ದು ಮುಸ್ಲಿಂ ಧಾರ್ಮಿಕ ಮುಖಂಡ ಸಾಲೆತ್ತೂರು ಫೈಝಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಉಲಮಾಗಳು ಅವನಿಗೆ ಗೌರವ ಕೊಡುವುದು ಮುಸ್ಲಿಂ ಸಮುದಾಯಕ್ಕೆ ಕೆಟ್ಟ ಸಂದೇಶವಾಗಿ ಪರಿಣಮಿಸುತ್ತದೆ ಎಂದು ಯು.ಟಿ.ಖಾದರ್ ನಡವಳಿಕೆ ಆಕ್ಷೇಪಿಸಿ ಸಾಲೆತ್ತೂರು ಫೈಝಿ ಪೋಸ್ಟ್ ಹಂಚಿಕೊಂಡಿದ್ದಾರೆ.https://www.youtube.com/live/vfQ-boUqfHc?si=iGxq4r3XIkuutMtp

ಕೊರಗಜ್ಜನ ಭಕ್ತ ಯು.ಟಿ ಖಾದರ್ ನನ್ನು ಮುಸ್ಲಿಮರು ಬರೀ ರಾಜಕಾರಣಿಯಾಗಿ ಕಂಡರೆ ಸಾಕು. ಧಾರ್ಮಿಕ ಮುಖಂಡರಾಗಿ ಕಾಣುವುದು ಬೇಡ. ಉಲೆಮಾ, ಸಾತ್ವಿಕರು ತುಂಬಿದ ಧಾರ್ಮಿಕ ವೇದಿಕೆಗೆ ಮುಸ್ಲಿಂ ನಾಯಕನಾಗಿ ಹತ್ತಿಸುವುದು ತರವಲ್ಲ. ಅದು ಆತನ ಭೂತಾರಾಧನೆಗೆ ನಾವು ಕೊಡುವ ಅಂಗೀಕಾರವಾಗಿತ್ತೆ. ಖಾದರ್ ಕೊರಗಜ್ಜನಿಗೂ ಕಲ್ಲುರ್ಟಿ, ಪಂಜುರ್ಲಿಗೂ ಆರಾಧಿಸಲಿ‌. ಪ್ರಸಾದ ಪಡೆದು ತಲೆಗೆ ಮತ್ತಿಕೊಂಡು ನರಕಕ್ಕೆ ಹೋಗಲಿ‌. 

ಅದು ಆತನ ವೈಯಕ್ತಿಕ ಸ್ವತಂತ್ರ‌. ಅದು ಭಾರತದಲ್ಲಿ ಎಲ್ಲರಿಗೂ ಇರುವ ಸಂವಿಧಾನಿಕ ಸ್ವಾತಂತ್ರ. ಅದನ್ನು ತಡೆಯುವ ಹಕ್ಕು ನನಗಿಲ್ಲ. ಆದರೆ ಧಾರ್ಮಿಕ ನಾಯಕನಾಗಿ ನಾವು ಅಂಗೀಕರಿಸುವುದು, ಆತನ ಭೂತಾರಾಧನೆಯನ್ನು ನಾವು ಒಪ್ಪಿಕೊಂಡಂತಾಗುತ್ತದೆ. ಉಲಮಾಗಳು ಅವನಿಗೆ ಗೌರವ ಕೊಡುವುದು ಮುಸ್ಲಿಂ ಸಮುದಾಯಕ್ಕೆ ಕೆಟ್ಟ ಸಂದೇಶವಾಗಿ ಪರಿಣಮಿಸುತ್ತದೆ ಎಂದು ಯು.ಟಿ.ಖಾದರ್ ನಡವಳಿಕೆ ಆಕ್ಷೇಪಿಸಿ ಸಾಲೆತ್ತೂರು ಫೈಝಿ ಪೋಸ್ಟ್ಮಾಡಿ ಹೇಳಿದ್ದಾರೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.