ಉಡುಪಿ ಟಾಯ್ಲೆಟ್ ವಿಡಿಯೋ ಪ್ರಕರಣ, ಸಚಿವೆ ಶೋಭಾಕ್ಕ ಮುಂದೆ ಸತ್ಯ ಬಿಚ್ಚಿಟ್ಟ ವಿದ್ಯಾಥಿ೯ನಿಯರು

 | 
ಗಿ

 ಇದೀಗ ಎಲ್ಲರ ಚಿತ್ತ ಉಡುಪಿಯತ್ತ. ಹೌದು ನೇತ್ರಜ್ಯೋತಿ ಕಾಲೇಜಿನ ಶೌಚಾಲಯದಲ್ಲಿ ಮೊಬೈಲ್ ಇಟ್ಟು ಹಿಂದೂ ವಿದ್ಯಾರ್ಥಿನಿಯರ ಖಾಸಗಿ ವಿಡಿಯೋ ಚಿತ್ರೀಕರಣ ಮಾಡಿದ ಮುಸ್ಲಿಂ ವಿದ್ಯಾರ್ಥಿನಿಯರ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ. ಪ್ರಕರಣ ಸಂಬಂಧ ವಿದ್ಯಾರ್ಥಿಗಳು ಸ್ಫೋಟಕ ಮಾಹಿತಿ ನೀಡಿದ್ದು, ಒಂದು ವರ್ಷದಿಂದ ಇಂತಹ ಕೃತ್ಯ ಎಸಗುತ್ತಿದ್ದರೂ ಕಾಲೇಜು ಆಡಳಿತ ಮಂಡಳಿ ಕ್ರಮ ಕೈಗೊಂಡಿರಲಿಲ್ಲ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಮುಂದೆ ಹೇಳಿಕೊಂಡು ಕಣ್ಣೀರಿಟ್ಟಿದ್ದಾರೆ.

ಕಳೆದ ಒಂದು ವರ್ಷದಿಂದ ಕಾಲೇಜಿನ ಶೌಚಾಲಯದಲ್ಲಿ ಮೊಬೈಲ್ ಇಡುತ್ತಿದ್ದರು. ಮೊಬೈಲ್ ಚಿತ್ರೀಕರಣ ಆದ ಬಳಿಕ ಆ ಮೊಬೈಲ್ ಅನ್ನು ಮಧ್ಯಾಹ್ನದ ಸಮಯದಲ್ಲಿ ಕಾರಿನಲ್ಲಿ ಮತ್ತು ಬೈಕಿನಲ್ಲಿ ಬರುತ್ತಿದ್ದ ಯುವಕರಿಗೆ ನೀಡುತ್ತಿದ್ದರು. ಈ ಬಗ್ಗೆ ದೂರು ನೀಡಿದ್ದರೂ ಆಡಳಿತ ಮಂಡಳಿ ಯಾವುದೇ ಕ್ರಮ ಕೈಗೊಂಡಿರಲಿಲ್ಲ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ.

ವಿದ್ಯಾರ್ಥಿನಿಯರು ಯುವಕರೊಂದಿಗೆ ಮೊಬೈಲ್ ಬದಲಾವಣೆ ಮಾಡುತ್ತಿರುವ ದೃಶ್ಯ ಸಿಸಿಟಿವಿಯ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಆದರೂ ವಿಡಿಯೋ ಮಾಡಿದ ವಿದ್ಯಾರ್ಥಿನಿಯರ ಮೇಲೆ ಯಾವುದೇ ಕ್ರಮವನ್ನು ಆಡಳಿತ ಮಂಡಳಿ ಮತ್ತು ಶಿಕ್ಷಕ ವರ್ಗ ಕೈಗೊಂಡಿಲ್ಲ. ಜುಲೈ 18 ರಂದು ನಡೆದ ಘಟನೆಯನ್ನು ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿನಿಯರ ಮೇಲೆ ಕ್ರಮ ಕೈಗೊಂಡಿದ್ದಾರೆ. ಪ್ರತಿಭಟಿಸದಿದ್ದರೆ ನಮ್ಮ ವಿಡಿಯೋ ಕೂಡ ಆರು ತಿಂಗಳ ಬಳಿಕ ವೈರಲ್ ಆಗುತ್ತಿತ್ತು ಎಂದು ಕಣ್ಣೀರಿಟ್ಟಿದ್ದಾರೆ.

ಇನ್ನು ಈ ಕುರಿತಾಗಿ ಮಾತನಾಡಿದ ಶೋಭಾ ಕರಂದ್ಲಾಜೆ ಅವರು ಯಾರನ್ನೂ ಇಲ್ಲಿ ರಕ್ಷಿಸುವ ಪ್ರಶ್ನೆ ಇಲ್ಲ. ಅಲ್ ಖೈದಾ, ಉಡುಪಿ ಹಿಜಬ್ ಘಟನೆ ಬಗ್ಗೆ ಮಾತನಾಡಿದೆ. ಆದಷ್ಟು ಬೇಗ ಈ ಘಟನೆಯ ತನಿಖೆ ಆಗಬೇಕು ಆರೋಪಿಗಳಿಗೆ ಶಿಕ್ಷೆ ಆಗಬೇಕು. ಪಕ್ಷ ಸರಕಾರ ಯಾವುದು ಎಂಬುದು ಮುಖ್ಯ ಅಲ್ಲ. ವಿದ್ಯಾರ್ಥಿಗಳ ಭವಿಷ್ಯದ ಪ್ರಶ್ನೆ ಇದು, ಯಾವುದೇ ಹಾಸ್ಟೆಲ್ ಕಾಲೇಜು ವಸತಿ ಶಾಲೆ ಯಲ್ಲಿ ಯಾರೇ ಹೀಗೆ ಮಾಡಿದರೂ ನನ್ನ ಗಮನಕ್ಕೆ ತನ್ನಿ.

ನಾನು ನಿಮ್ಮ ಅಕ್ಕನಾಗಿ ವಿನಂತಿ ಮಾಡುತ್ತೇನೆ. ಮಾಹಿತಿ ನೀಡಿದವರನ್ನು ಗೌಪ್ಯವಾಗಿ ಇಟ್ಟು ನಿಮ್ಮನ್ನು ರಕ್ಷಣೆ ಮಾಡುತ್ತೇನೆ. ಲವ್ ಜಿಹಾದ್ ಮತಾಂತರ ಆಗದಂತೆ ಮುನ್ನೆಚ್ಚರಿಕೆ ವಹಿಸಬೇಕಾಗಿದೆ. ಕೇಂದ್ರ ಗೃಹ ಸಚಿವರ ಗಮನಕ್ಕೂ ತಂದು ನಾನು ನ್ಯಾಯ ಕೊಡಿಸುತ್ತೇವೆ ಎಂದು ಆಶ್ವಾಸನೆ ನೀಡಿದರು.
ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ.)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ