ಚಿಕ್ಕಬಳ್ಳಾಪುರದ ವಿದ್ಯಾವಂತ ಪ್ರದೀಪ್ ಈಶ್ವರ್ ಮಾತಿಗೆ ಬೆಲೆ ಇಲ್ಲದಂತೆ ಮಾಡಿದ ಯು.ಟಿ ಖಾದರ್, ಸದನದಲ್ಲಿ ಬಾರಿ ಅವಮಾನ

 | 
Nn

ಮಂಡ್ಯ ಜಿಲ್ಲೆ ನಾಗಮಂಗಲ ಡಿಪೋ ಎದುರು ಸಾರಿಗೆ ಬಸ್ ಚಾಲಕ ಜಗದೀಶ್ ಆತ್ಮಹತ್ಯೆಗೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿ ಬಿಜೆಪಿ ಮತ್ತು ಜೆಡಿಎಸ್ ಶಾಸಕರು ಸದನದ ಬಾವಿಗಿಳಿದು ಧರಣಿ ನಡೆಸಿದರು. ಈ ವೇಳೆ ಮಾತನಾಡಿದ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಎಡವಟ್ಟು ಮಾಡಿಕೊಂಡದ್ದು ಗಮನ ಸೆಳೆಯಿತು.

ಒಂದು ಸಾವಿಗೆ ಇವರು ಇಷ್ಟೆಲ್ಲಾ ಹೋರಾಟ ಮಾಡುತ್ತಿದ್ದಾರೆ. ಕೋವಿಡ್ ಸಂದರ್ಭದಲ್ಲಿ ಸಾವಿರಾರು ಜನ ಪ್ರಾಣ ಕಳೆದುಕೊಂಡರು, ಅವರಿಗೂ ನ್ಯಾಯ ಕೊಡಿಸಲು ಹೋರಾಟ ಮಾಡಬೇಕಲ್ಲ ಎಂದರು. ಈ ವೇಳೆ ಸ್ಪೀಕರ್ ಯು.ಟಿ.ಖಾದರ್, ಎ ..ಪ್ರದೀಪ್..ಸಾವು ಆಗಲಿಲ್ಲ ಮಾರಾಯ. ಕುತ್ಕೋ ನೀನು ಎಂದರು.
ಸ್ಪೀಕರ್ ಯು.ಟಿ.ಖಾದರ್ ಅವರ ಮನವಿಯ ಬಳಿಕ ಪ್ರತಿಪಕ್ಷಗಳ ಶಾಸಕರು ಧರಣಿ ಕೈಬಿಟ್ಟು ತಮ್ಮ ತಮ್ಮ ಸ್ಥಾನಗಳಲ್ಲಿ ಕುಳಿತುಕೊಂಡರು. 

ವರ್ಗಾವಣೆ ವಿಚಾರಕ್ಕೆ ಸಂಬಂಧಿಸಿ ಸಾರಿಗೆ ಬಸ್ ಚಾಲಕ ಜಗದೀಶ್ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ಆರೋಪಿಸಿ ಜೆಡಿಎಸ್ ಶಾಸಕರು ಸಚಿವ ಚೆಲುವರಾಯ ಸ್ವಾಮಿ ಅವರು ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು. ಒಟ್ಟಿನಲ್ಲಿ ಈ ಸಲ ಸುಧಾಕರ್ ಅವರನ್ನು ಸೋಲಿಸಿ ಜನರ ಮನಗೆದ್ದಿದ್ದ ಪ್ರದೀಪ್ ಅವರು ಇದೀಗ ಸ್ಪೀಕರ್ ಕೆಂಗಣ್ಣಿಗೆ ಗುರಿಯಾಗಿದ್ದಂತೂ ಹೌದು. (ಪ್ರೀಯ ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.