ಸಿದ್ದರಾಮಯ್ಯನವರಿಗೆ ವೀರೇಂದ್ರ ಹೆಗ್ಗಡೆ ಲವ್ ಲೆಟರ್, ರೊಚ್ಚಿಗೆದ್ದ ಮಹೇಶ್ ಶೆಟ್ಟಿ ತಿಮ್ಮರೋಡಿ

 | 
ಕಿ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್‌ ಮಂಡನೆ ಮಾಡಿದ್ದಾರೆ. ಬಜೆಟ್‌ ಕುರಿತು ಸದನದ ಒಳಗೂ-ಹೊರಗೂ ಚರ್ಚೆಗಳು ನಡೆಯುತ್ತಿವೆ. ಇದೇ ವೇಳೆ, ಬಜೆಟ್‌ಗೆ ಮೆಚ್ಚುಗೆ ವ್ಯಕ್ತಪಡಿಸಿ ಧರ್ಮಸ್ಥಳ ಧರ್ಮಾಧಿಕಾರಿ, ರಾಜ್ಯಸಭಾ ಸದಸ್ಯ ವೀರೇಂದ್ರ ಹೆಗ್ಗಡೆ ಅವರು ಮುಖ್ಯಮಂತ್ರಿಗೆ ಪತ್ರ ಬರೆದಿದ್ದಾರೆ. 

ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಮತ್ತೆ ಮುನ್ನೆಲೆಗೆ ಬಂದಿರುವ ಈ ಹೊತ್ತಿನಲ್ಲಿ ಹೆಗ್ಗಡೆ ಬರೆದಿರುವ ಪತ್ರ ನಾನಾ ರೀತಿಯ ಅನುಮಾನಗಳಿಗೆ ಕಾರಣವಾಗಿದ್ದು, ಸಾರ್ವಜನಿಕ ವಲಯದಲ್ಲಿ ಚರ್ಚೆ ಹುಟ್ಟುಹಾಕಿದೆ. ಹನ್ನೊಂದು ವರ್ಷಗಳ ಹಿಂದೆ ಸೌಜನ್ಯ ಎಂಬ 17ರ ಹರೆಯದ ಯುವತಿ ಮೇಲೆ ಅತ್ಯಾಚಾರ ಎಸಗಿ, ಕೊಲೆ ಮಾಡಲಾಗಿತ್ತು. ಪ್ರಕರಣದಲ್ಲಿ ಉಳ್ಳವರ ಕುತಂತ್ರದಿಂದ ಆರೋಪಿಯೆಂಬ ಹಣೆಪಟ್ಟಿ ಕಟ್ಟಿಕೊಂಡು ಅಮಾಯಕ ಸಂತೋಷ್ ರಾವ್ ಜೈಲು ವಾಸ ಅನುಭವಿಸಿ, ಪೊಲೀಸರ ದೌರ್ಜನ್ಯಕ್ಕೆ ತುತ್ತಾಗಿದ್ದರು. 

ಸಂತೋಷ್‌ ನಿರಪರಾಧಿಯೆಂದು ಸಿಬಿಐ ಕೋರ್ಟ್‌ ಕಳೆದ ತಿಂಗಳು ಆದೇಶ ಹೊರಡಿಸಿದೆ. ಈ ಬೆನ್ನಲ್ಲೇ, ಸೌಜನ್ಯ ಪ್ರಕರಣದ ನೈಜ ಆರೋಪಿಗಳನ್ನು ಬಂಧಿಸಿ, ಶಿಕ್ಷೆ ನೀಡಬೇಕೆಂದು ಹೋರಾಟ ಭುಗಿಲೇಳುತ್ತಿದೆ.
ಸೌಜನ್ಯಳನ್ನು ವೀರೇಂದ್ರ ಹೆಗ್ಗಡೆ ಅವರ ಸೋದರನ ಮಗ ನಿಶ್ಚಲ್‌ ಜೈನ್ ಮತ್ತು ಆತನ ಮೂವರು ಸ್ನೇಹಿತರು ಅಪಹರಿಸಿ, ಅತ್ಯಾಚಾರಗೈದು ಕೊಲೆ ಮಾಡಿದ್ದಾರೆಂದು ಆರಂಭದಿಂದಲೇ ಸೌಜನ್ಯ ಕುಟುಂಬ ಮತ್ತು ಹೋರಾಟಗಾರರು ಆರೋಪಿಸುತ್ತಲೇ ಬಂದಿದ್ದಾರೆ. 

ನಿಶ್ಚಲ್ ಜೈನ್ ಮತ್ತಾತನ ಸ್ನೇಹಿತ ಉದಯ್ ಜೈನ್, ಮಲಿಕ್ ಜೈನ್ ಮತ್ತು ಧೀರಜ್ ಜೈನ್‌ನನ್ನು ವಿಚಾರಣೆಗೆ ಒಳಪಡಿಸಬೇಕು. ಅವರ ವಿರುದ್ಧ ತನಿಖೆ ನಡೆಸಬೇಕು ಎಂದು ಅವರೆಲ್ಲರೂ ಒತ್ತಾಯಿಸಿದ್ದಾರೆ. ಅಂದಹಾಗೆ, 2013ರಲ್ಲಿ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಸೌಜನ್ಯ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಿದ್ದರು. ಇದೀಗ ಮತ್ತೆ ಅವರೇ ಮುಖ್ಯಮಂತ್ರಿಯಾಗಿದ್ದಾರೆ. ಸೌಜನ್ಯಾಳಿಗೆ ನ್ಯಾಯ ಕೊಡಿಸಲು ಸಿದ್ದರಾಮಯ್ಯ ಅವರು ಪ್ರಕರಣವನ್ನು ಮರು ತನಿಖೆಗೆ ಆದೇಶಿಸಬೇಕು. 

ತನಿಖೆಗಾಗಿ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಬೇಕು ಎಂದು ಸೌಜನ್ಯ ಕುಟುಂಬ ಒತ್ತಾಯಿಸುತ್ತಿದೆ. ವೀರೇಂದ್ರ ಹೆಗ್ಗಡೆ ಮತ್ತು ಕುಟುಂಬದ ವಿರುದ್ಧ ಆರೋಪಗಳ ಮೇಲೆ ಆರೋಪಗಳು ಕೇಳಿಬರುತ್ತಿವೆ. ಸೌಜನ್ಯ ಪರ ಹೋರಾಟ ಮತ್ತೆ ಭುಗಿಲೇಳುತ್ತಿವೆ. ಇಂತಹ ಸಂದರ್ಭದಲ್ಲಿ ಮುಖ್ಯಮಂತ್ರಿಗೆ ಹೆಗಡೆ ಅವರು ಪತ್ರ ಬರೆದಿದ್ದಾರೆ. ಅವರ ಪತ್ರ, ಸೌಜನ್ಯ ಪ್ರಕರಣವನ್ನು ಮರು ತನಿಖೆಗೆ ಒಳಪಡಿಸದಂತೆ ರಾಜಕೀಯ ಓಲೈಕೆಯ ಭಾಗವಾಗಿರಬಹುದೇ ಎಂಬ ಅನುಮಾನ ಮತ್ತು ಆರೋಪ ಕೇಳಿಬರುತ್ತಿದೆ.

ಬಿಜೆಪಿ ಪರವಾಗಿರುವ ಮತ್ತು ಬಿಜೆಪಿ ಆಡಳಿತದ ಅವಧಿಯಲ್ಲಿ ರಾಜ್ಯಸಭೆಗೆ ನಾಮ ನಿರ್ದೇಶನಗೊಂಡಿರುವ, ಕೇಂದ್ರ ಸರ್ಕಾರ ಕೊಡಮಾಡುವ ಪದ್ಮ ಪ್ರಶಸ್ತಿಗೂ ಭಾಜನರಾಗಿರುವ ವೀರೇಂದ್ರ ಹೆಗ್ಗಡೆ ಅವರು ಕಾಂಗ್ರೆಸ್‌ ಸರ್ಕಾರವನ್ನು ಮೆಚ್ಚಿಕೊಂಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಧರ್ಮಸ್ಥಳಕ್ಕೆ ಆಹ್ವಾನಿಸಿದ್ದಾರೆ. ಇದು ಸ್ವ-ಹಿತಾಸಕ್ತಿಯ ಭಾಗವಾಗಿದೆಯೇ ಅಥವಾ ಮತ್ತೆ ಮೇಲೆದ್ದ ಸೌಜನ್ಯ ಪ್ರಕರಣದ ಬಗ್ಗೆ ಸರ್ಕಾರ ಕ್ರಮ ಕೈಗೊಳ್ಳದಂತೆ ತಡೆಯಲು ಹೆಗಡೆಯವರು ಮುಖ್ಯಮಂತ್ರಿಗಳ ಓಲೈಕೆಗೆ ಇಳಿದಿದ್ದಾರೆ ಎಂಬ ಮಾತು ಕೇಳಿ ಬರುತ್ತಿವೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.